< Barome 6 >
1 Boye, toloba nini? Tosalaka na biso masumu mpo ete ngolu efuluka koleka?
೧ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.
2 Soki moke te! Biso oyo tosila kokufa mpo na lisumu, ndenge nini tozongela lisusu kotambola kati na masumu?
೨ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ?
3 Boni, boyebi te ete biso nyonso oyo tosila kobatisama kati na Yesu-Klisto tozwaki nde libatisi kati na kufa na Ye?
೩ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
4 Bakundaki biso elongo na Ye na nzela ya libatisi kati na kufa na Ye mpo ete, lokola Klisto asekwaki kati na bakufi na nzela ya nkembo ya Tata, biso mpe totambola na bomoi ya sika.
೪ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
5 Pamba te soki tosanganaki elongo na Ye kati na kufa na Ye, solo tokosangana mpe elongo na Ye kati na lisekwa na Ye.
೫ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.
6 Pamba te toyebi malamu ete bomoto ya kala ebakamaki na ekulusu elongo na Klisto mpo ete nzoto na biso lokola esalelo ya lisumu ekufa mpe tozala lisusu bawumbu ya lisumu te.
೬ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.
7 Moto nyonso oyo asilaki kokufa atangamaki lokola moto ya sembo: azali lisusu te na se ya bokonzi ya lisumu.
೭ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.
8 Nzokande, lokola tosila kokufa elongo na Klisto, tozali kondima ete tokozala mpe na bomoi elongo na Ye.
೮ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.
9 Pamba te toyebi malamu ete Klisto oyo asekwaki kati na bakufi akokufa lisusu te; kufa ezali lisusu na bokonzi te likolo na Ye.
೯ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.
10 Akufaki mpo na lisumu mbala moko mpo na libela; kasi sik’oyo azali na bomoi, mpe azali na bomoi mpo na Nzambe.
೧೦ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,
11 Boye bino mpe, bomimona lokola bakufi mpo na lisumu, kasi lokola bato ya bomoi mpo na Nzambe kati na Yesu-Klisto.
೧೧ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.
12 Yango wana, tika ete lisumu ezala lisusu na bokonzi te kati na banzoto na bino, oyo ekokufa; mpe bosengeli lisusu te kotosa baposa na yango ya mabe.
೧೨ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.
13 Bokaba biteni ya banzoto na bino te na lisumu lokola bisalelo mpo na mabe, kasi bomikaba bino moko epai na Nzambe lokola bato oyo basekwa kati na bakufi mpe bazali na bomoi; mpe bokabela Ye biteni ya banzoto na bino lokola bisalelo mpo na bosembo.
೧೩ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
14 Pamba te lisumu ekozala lisusu na bokonzi te likolo na bino, pamba te bozali lisusu na se ya bokonzi ya Mobeko te, kasi na se ya ngolu.
೧೪ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
15 Boye toloba nini? Tokoba kosala masumu mpo ete tozali na se ya bokonzi ya Mobeko te kasi na se ya ngolu? Soki moke te!
೧೫ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.
16 Boni, boyebi te ete soki bomikabi epai ya moto lokola bawumbu mpo na kotosa ye bokomi nde bawumbu ya moto oyo bozali kotosa to bawumbu ya lisumu oyo ememaka na kufa to bawumbu ya botosi oyo ememaka na bosembo?
೧೬ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ
17 Kasi tika ete tozongisa matondi epai ya Nzambe! Soki na kala bozalaki bawumbu ya lisumu, kasi sik’oyo bokomi kotosa na motema mobimba mateya oyo bateyaki bino,
೧೭ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,
18 bosili kokangolama na bowumbu ya lisumu mpe bokomi bawumbu ya bosembo.
೧೮ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ.
19 Nazali koloba awa lokola moto mpo na bolembu na bino ya bomoto. Ndenge na kala, bokabaki biteni ya banzoto na bino na bowumbu ya misala ya mbindo mpe ya mabe mpo na kosala mabe, ndenge wana mpe bokaba yango sik’oyo na bowumbu ya bosembo mpo na kotambola na bomoi ya bosantu.
೧೯ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.
20 Tango bozalaki nanu bawumbu ya lisumu, bozalaki na bonsomi liboso ya bosembo.
೨೦ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ.
21 Nzokande, litomba nini bozwaki na tango wana oyo bozalaki kosala makambo oyo ezali koyokisa bino lelo soni, pamba te ememaka na kufa?
೨೧ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?
22 Kasi awa bolongwe sik’oyo na se ya bowumbu ya lisumu mpe bokomi na se ya bowumbu ya Nzambe, litomba oyo bozwi ezali bomoi ya bosantu, mpe suka na yango ezali bomoi ya seko. (aiōnios )
೨೨ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. (aiōnios )
23 Pamba te lifuti ya lisumu ezali kufa, kasi likabo ya ofele ya Nzambe ezali bomoi ya seko kati na Yesu-Klisto, Nkolo na biso. (aiōnios )
೨೩ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ. (aiōnios )