< यूहन्ना 18 >
1 यीशु या बाते कह्य क अपनो चेलावों को संग किद्रोन नाला को पार गयो। उत एक बगीचा होती, जेको म ऊ अऊर ओको चेला गयो।
೧ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.
2 ओको पकड़ावन वालो यहूदा भी ऊ जागा जानत होतो, कहालीकि यीशु अपनो चेलावों को संग उत जातो रहत होतो।
೨ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು.
3 तब यहूदा पलटन को एक दल ख अऊर मुख्य याजकों अऊर फरीसियों को तरफ सी सिपाहियों ख ले क, कंदील अऊर मशालों अऊर अवजारों ख लियो हुयो उत आयो।
೩ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.
4 तब यीशु, उन सब बातों ख जो ओको पर आवन वाली होती जान क, निकल्यो अऊर उन्को सी कह्यो, “कौन ख ढूंढय हय?”
೪ಆಗ ಯೇಸು ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಿದನು.
5 उन्न ओख उत्तर दियो, “यीशु नासरी ख।” यीशु न उन्को सी कह्यो, “मय आय।” ओको पकड़ावन वालो यहूदा भी उन्को संग खड़ो होतो।
೫ಅದಕ್ಕೆ ಅವರು, “ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ “ನಾನೇ ಆತನು” ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು.
6 ओको यो कहतच, “मय आय,” हि पीछू हट क जमीन पर गिर पड़्यो।
೬ಆತನು ಅವರಿಗೆ “ನಾನೇ ಆತನು” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
7 तब ओन फिर उन्को सी पुच्छ्यो, “तुम कोख ढूंढय हय।” हि बोल्यो, “यीशु नासरी ख।”
೭ಆಗ ಆತನು ಪುನಃ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು ಹುಡುಕುತ್ತೇವೆ” ಎಂದರು.
8 यीशु न उत्तर दियो, “मय त तुम सी कह्य दियो हय कि मय आय, यदि मोख ढूंढय हय त इन्क जान दे।”
೮ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ” ಎಂದನು.
9 यो येकोलायी भयो कि ऊ वचन पूरो होय जो ओन कह्यो होतो: “जिन्ख तय न मोख दियो उन्म सी मय न एक ख भी नहीं खोयो।”
೯ಹೀಗೆ “ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ” ಎಂದು ತಾನೇ ಹೇಳಿದ ಮಾತು ನೆರವೇರಿತು.
10 तब शिमोन पतरस न तलवार, जो ओको जवर होती, खीची अऊर महायाजक को सेवक पर चलाय क ओको दायो कान उड़ाय दियो। ऊ सेवक को नाम मलखुस होतो।
೧೦ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು.
11 तब यीशु न पतरस सी कह्यो, “अपनी तलवार म्यान म रख। जो प्याला बाप न मोख दियो हय, का मय ओख नहीं पीऊ?”
೧೧ಆಗ ಯೇಸು ಪೇತ್ರನಿಗೆ, “ಕತ್ತಿಯನ್ನುಒರೆಯಲ್ಲಿ ಹಾಕು. ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು.
12 तब सैनिकों अऊर उन्को सूबेदार अऊर यहूदियों को पहरेदारों न यीशु ख पकड़ क बान्ध लियो,
೧೨ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.
13 अऊर पहिले ओख हन्ना को जवर लिजायो, कहालीकि ऊ उन साल को महायाजक कैफा को ससरो होतो।
೧೩ಆತನನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.
14 यो उच कैफा होतो, जेन यहूदियों ख सलाह दी होती कि हमरो लोगों लायी एक आदमी को मरनो ठीक हय।
೧೪ಆ ಕಾಯಫನೇ, ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟವನು.
15 शिमोन पतरस अऊर एक दूसरों चेला भी यीशु को पीछू भय गयो। यो चेला महायाजक को जानो पहिचानो होतो, येकोलायी ऊ यीशु को संग महायाजक को आंगन म गयो,
೧೫ಸೀಮೋನ್ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಯವಿದ್ದುದರಿಂದ ಯೇಸುವಿನ ಜೊತೆ ಮಹಾಯಾಜಕನ ಅಂಗಳದೊಳಗೆ ಹೋದನು.
16 पर पतरस बाहेर द्वार पर खड़ो रह्यो। तब ऊ दूसरों चेला जो महायाजक को जान पहिचान को होतो, बाहेर निकल्यो अऊर पहरेदारिन सी कह्य क पतरस ख अन्दर लायो।
೧೬ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
17 वा दासी न जो पहरेदारिन होती, पतरस सी कह्यो, “कहीं तय भी यो आदमी को चेला म सी त नहाय?” ओन कह्यो, “मय नोहोय।”
೧೭ಆಗ ದ್ವಾರಪಾಲಕಿಯು, “ನೀನು ಸಹ ಆ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಪೇತ್ರನನ್ನು ಕೇಳಲು, ಅವನು, “ನಾನಲ್ಲ” ಎಂದನು.
18 सेवक अऊर पहरेदार ठन्डी को वजह कोरस्या जलाय क खड़ो आगी ताप रह्यो होतो, अऊर पतरस भी ओको संग खड़ो आगी ताप रह्यो होतो।
೧೮ಚಳಿಯಿದ್ದುದರಿಂದ ಆಳುಗಳೂ, ಓಲೇಕಾರರೂ ಇದ್ದಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು.
19 तब महायाजक न यीशु सी ओको चेलावों को बारे म अऊर ओको उपदेश को बारे म पूछताछ करी।
೧೯ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಆತನ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.
20 यीशु न ओख उत्तर दियो, “मय न जगत सी खुल क बाते करी; मय न आराधनालयों अऊर मन्दिर म, जित सब यहूदी जमा होत होतो, सदा उपदेश करयो अऊर गुप्त म कुछ भी नहीं कह्यो।
೨೦ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.
21 तय मोरो सी का पूछय हय? सुनन वालो सी पूछ कि मय न उन्को सी का कह्यो देख, हि जानय हंय कि मय न का का कह्यो।”
೨೧ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ” ಎಂದು ಉತ್ತರಕೊಟ್ಟನು.
22 तब ओन यो कह्यो, त पहरेदारों म सी एक न जो जवर खड़ो होतो, यीशु ख थापड़ मार क कह्यो, “का तय महायाजक ख यो तरह उत्तर देवय हय?”
೨೨ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.
23 यीशु न ओख उत्तर दियो, “यदि मय न बुरो कह्यो, त ऊ बुरायी की गवाही दे; पर यदि सही कह्यो, त मोख कहाली मारय हय?”
೨೩ಯೇಸು ಅವನಿಗೆ “ನಾನು ಏನಾದರೂ ತಪ್ಪನ್ನು ಮಾತನಾಡಿದ್ದರೆ, ಆ ತಪ್ಪಿನ ವಿಷಯವಾಗಿ ಸಾಕ್ಷಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?” ಎಂದು ಕೇಳಿದನು.
24 हन्ना न ओख बन्ध्यो हुयो ख कैफा महायाजक को जवर भेज दियो।
೨೪ಆಗ ಅನ್ನನು ಆತನನ್ನು ಇನ್ನೂ ಕಟ್ಟಿರಲಾಗಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
25 शिमोन पतरस खड़ो होय क आगी ताप रह्यो होतो। तब उन्न ओको सी कह्यो, “कहीं तय भी ओको चेलावों म सी त नहाय?” पतरस न इन्कार कर क् कह्यो, “मय नोहोय।”
೨೫ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು.
26 महायाजक को सेवकों म सी एक, जो ओको कुटुम्ब म सी होतो जेको कान पतरस न काट डाल्यो होतो, बोल्यो, “का मय न तोख ओको संग बगीचा म नहीं देख्यो होतो?”
೨೬ಮಹಾಯಾಜಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು, ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಜೊತೆಯಲ್ಲಿ ನೋಡಿದೆನಲ್ಲವೇ?” ಎಂದನು.
27 पतरस न फिर सी इन्कार कर दियो अऊर तुरतच मुर्गा न बाग दियो।
೨೭ಅದಕ್ಕೆ ಪೇತ್ರನು ಪುನಃ ನಿರಾಕರಿಸಿ “ನಾನಲ್ಲ” ಎಂದನು. ಆಗ ಕೂಡಲೇ ಕೋಳಿ ಕೂಗಿತು.
28 तब हि यीशु ख कैफा को जवर सी राजभवन को तरफ ले गयो, अऊर भुन्सारे को समय होतो, पर हि खुद किला को अन्दर नहीं गयो ताकि अशुद्ध नहीं होय पर फसह को त्यौहार खाय सके।
೨೮ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.
29 तब पिलातुस उन्को जवर बाहेर निकल क आयो अऊर कह्यो, “तुम यो आदमी पर का बात को आरोप लगावय हय?”
೨೯ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದನು.
30 उन्न ओख उत्तर दियो, “यदि ऊ अपराधी नहीं होतो त हम ओख तोरो हाथ नहीं सौपतो।”
೩೦ಯೆಹೂದ್ಯರು ಅವನಿಗೆ, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ” ಎಂದು ಉತ್ತರಕೊಟ್ಟರು.
31 पिलातुस न उन्को सी कह्यो, “तुमच येख लिजाय क अपनी व्यवस्था को अनुसार ओको न्याय करो।” यहूदियों न ओको सी कह्यो, “हम्ख अधिकार नहाय कि कोयी को जीव लेबो।”
೩೧ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.
32 यो येकोलायी भयो कि यीशु की ऊ बात पूरी होय जो ओन यो इशारा देतो हुयो कहीं होती कि ओकी मृत्यु कसी होयेंन।
೩೨ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.
33 तब पिलातुस फिर राजभवन को अन्दर गयो, अऊर यीशु ख बुलाय क ओको सी पुच्छ्यो, “का तय यहूदियों को राजा आय?”
೩೩ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.
34 यीशु न उत्तर दियो, “का तय या बात अपनो तरफ सी कह्य हय या दूसरों न मोरो बारे म तोरो सी यो कह्यो हय?”
೩೪ಯೇಸು, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೇ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ?” ಎಂದನು.
35 पिलातुस न उत्तर दियो, “का मय यहूदी आय? तोरीच जाति अऊर मुख्य याजकों न तोख मोरो हाथ म सौंप्यो हय। तय न का करयो हय?”
೩೫ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ,
36 यीशु न उत्तर दियो, “मोरो राज यो जगत को नहाय; यदि मोरो राज्य यो जगत को होतो त मोरो सेवक लड़तो कि मय यहूदियों को हाथ सौंप्यो नहीं जातो: पर मोरो राज इत को नहाय।”
೩೬ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.
37 पिलातुस न ओको सी कह्यो, “त का तय राजा आय?” यीशु न उत्तर दियो, “तय कह्य हय कि मय राजा आय। मय न येकोलायी जनम लियो अऊर येकोलायी जगत म आयो हय कि सत्य की गवाही देऊ। जो कोयी सत्य को आय, ऊ मोरी आवाज सुनय हय।”
೩೭ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.
38 पिलातुस न ओको सी कह्यो, “सत्य का हय?” यो कह्य क ऊ फिर यहूदियों को जवर निकल गयो अऊर उन्को सी कह्यो, “मय त ओको म कुछ दोष नहीं पाऊ।
೩೮ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ.
39 पर तुम्हरी यो रीति हय कि मय फसह को त्यौहार म तुम्हरो लायी एक व्यक्ति ख छोड़ देऊ येकोलायी तुम चाहवय की मय तुम्हरो लायी यहूदियों को राजा ख छोड़ देऊ।”
೩೯ಆದರೆ ಪಸ್ಕ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?” ಎಂದು ಅವರನ್ನು ಕೇಳಿದನು.
40 तब उन्न फिर चिल्लाय क कह्यो, “येख नहीं, पर हमरो लायी बरअब्बा ख छोड़ दे।” अऊर बरअब्बा डाकू होतो।
೪೦ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.