< लूका 20 >

1 एक दिन असो भयो कि जब यीशु मन्दिर म लोगों ख उपदेश दे रह्यो होतो अऊर सुसमाचार सुनाय रह्यो होतो, त मुख्य याजक अऊर धर्मशास्त्री, बुजूर्गों को संग जवर आय क खड़ो भयो;
ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,
2 अऊर कहन लग्यो, “हम्ख बताव, तय इन कामों ख कौन्सो अधिकार सी करय हय, अऊर ऊ कौन हय? जेन तोख अधिकार दियो हय?”
“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು,
3 यीशु न उन्ख उत्तर दियो, “मय भी तुम सी एक प्रश्न पूछू हय; मोख बताव।
ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ.
4 यूहन्ना को बपतिस्मा करन को अधिकार स्वर्ग सी होतो या आदमियों को तरफ सी होतो?”
ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು.
5 तब हि आपस म चर्चा करन लग्यो, “यदि हम कहबोंन, ‘स्वर्ग को तरफ सी,’ त ऊ कहेंन, ‘तब तुम न ओको विश्वास कहाली नहीं करयो?’
ಆಗ ಅವರು, “‘ಪರಲೋಕದಿಂದ ಬಂದಿತೆಂದು ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು,
6 अऊर यदि हम कहबोंन, ‘आदमियों को तरफ सी,’ त सब लोग हमरो पर गोटा मारेंन, कहालीकि हि मानय हंय कि यूहन्ना भविष्यवक्ता होतो।”
ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,
7 येकोलायी उन्न उत्तर दियो, “हम नहीं जानय कि ऊ कौन्को तरफ सी होतो।”
ಅದು ಎಲ್ಲಿಂದ ಬಂದಿತೋ ನಾವರಿಯೆವು ಎಂದು ಉತ್ತರಕೊಟ್ಟರು.
8 यीशु न उन्को सी कह्यो, “त मय भी तुम्ख नहीं बताऊ कि मय यो काम कौन्सो अधिकार सी करू हय।”
ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು.
9 तब यीशु लोगों सी यो दृष्टान्त कहन लग्यो: “कोयी आदमी न अंगूर की बाड़ी लगायी, अऊर ओको ठेका दे दियो अऊर बहुत दिनो लायी परदेश चली गयो।
ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
10 जब अंगूर को पकन को समय आयो त मालिक न किसानों को जवर एक सेवक ख भेज्यो कि ऊ अंगूर की बाड़ी को फरो को भाग ओख दे, पर किसानों न ओख पीट क खाली हाथ लौटाय दियो।
೧೦ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
11 तब ओन एक अऊर सेवक ख भेज्यो; अऊर उन्न ओख भी पीट क अऊर ओको अपमान कर क् खाली हाथ लौटाय दियो।
೧೧ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
12 तब ओन तीसरो सेवक ख भेज्यो; अऊर उन्न ओख भी घायल कर क् फेक दियो।
೧೨ಆ ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯಗೊಳಿಸಿ ಹೊರಕ್ಕೆ ಅಟ್ಟಿದರು.
13 तब अंगूर की बाड़ी को मालिक न कह्यो, ‘मय का करू? मय अपनो प्रिय बेटा ख भेजूं; होय सकय हय हि ओको निश्चितच सम्मान करेंन!’
೧೩ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು.
14 जब किसानों न ओख देख्यो त आपस म बिचार करन लग्यो, ‘यो त वारिस आय; आवो, हम येख मार डाल्बो कि जायजाद हमरी होय जायेंन।’
೧೪ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,
15 अऊर उन्न ओख अंगूर की बाड़ी सी बाहेर निकाल क मार डाल्यो। “येकोलायी अंगूर की बाड़ी को मालिक उन्को संग का करेंन?
೧೫ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ, ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು?
16 ऊ आय क उन किसानों ख नाश करेंन, अऊर अंगूर की बाड़ी दूसरों ख सौंपेंन।” यो सुन क उन्न कह्यो “परमेश्वर करे असो नहीं हो।”
೧೬ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.
17 यीशु न उन्को तरफ देख क कह्यो, “त फिर यो का लिख्यो हय?” “यो गोटा ख राजमिस्त्रियों न नकार दियो होतो, उच गोटा कोना को सिरा मतलब महत्वपूर्ण भय गयो।”
೧೭ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು?
18 “जो कोयी यो गोटा पर गिरेंन ऊ तुकड़ा-तुकड़ा होय जायेंन, पर जो कोयी पर ऊ गोटा गिरेंन, ओख पीस डालेंन।”
೧೮“ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು.
19 उच समय धर्मशास्त्रियों अऊर मुख्य याजकों न यीशु को पकड़नो चाह्यो, कहालीकि हि समझ गयो होतो कि ओन हमरो पर यो दृष्टान्त कह्यो; पर हि लोगों सी डरत होतो।
೧೯ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.
20 अऊर हि यीशु कि ताक म रह्यो अऊर असो भेद लेनवालो ख भेज्यो कि सच्चो होन को ढोंग धर क ओकी सवालों म फसाय सकेंन, ताकि ओख रोमन शासक को हाथ अऊर अधिकार म सौंप दे।
೨೦ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
21 सवालों म फसावन वालो न यीशु सी यो पुच्छ्यो, “हे गुरु, हम जानय हंय कि तय ठीक कह्य अऊर सिखावय भी हय, अऊर कोयी को पक्ष–पात नहीं करय, बल्की परमेश्वर को रस्ता सच्चायी सी बतावय हय।
೨೧ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.
22 का हम्ख रोम को अधिकारी कैसर ख कर देनो उचित हय यां नहाय?”
೨೨ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು.
23 यीशु न उन्की चतुरायी ख जान क उन्को सी कह्यो,
೨೩ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು,
24 “एक चांदी को सिक्का मोख दिखाव। येको पर कौन्को चेहरा अऊर नाम हय?” उन्न कह्यो, “रोम को राजा को।”
೨೪ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು.
25 यीशु न उन्को सी कह्यो, “त जो रोमी राजा को हय, ऊ रोमी राजा ख दे; अऊर जो परमेश्वर को हय, ऊ परमेश्वर ख दे।”
೨೫ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
26 हि लोगों को आगु या बात म ओख पकड़ नहीं सक्यो, बल्की ओको उत्तर सी अचम्भा होय क चुप रह्य गयो।
೨೬ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು.
27 फिर सदूकी जो कह्य हंय कि मरयो हुयो को फिर सी जीन्दो होनो हयच नहाय, उन्म सी कुछ न यीशु को जवर आय क पुच्छ्यो,
೨೭ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ,
28 “हे गुरु, मूसा न हमरो लायी असी व्यवस्था म यो लिख्यो हय: ‘यदि कोयी को भाऊ अपनी पत्नी को रहतो हुयो बिना सन्तान को मर जायेंन, त ओको भाऊ वा विधवा सी बिहाव कर ले, अऊर अपनो भाऊ लायी सन्तान पैदा करे।’
೨೮“ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.
29 सात भाऊ होतो, पहिलो भाऊ बिहाव कर क् बिना सन्तान को मर गयो।
೨೯ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
30 तब दूसरों, न बिहाव करयो,
೩೦ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.
31 अऊर तीसरो न भी वा बाई सी बिहाव कर लियो। यो तरह सी सातों बिना सन्तान को मर गयो।
೩೧
32 आखरी म वा बाई भी मर गयी।
೩೨ಕಡೆಯಲ್ಲಿ ಆ ಹೆಂಗಸೂ ಸತ್ತಳು.
33 येकोलायी फिर जीन्दो होन पर वा उन्म सी कौन्की पत्नी होयेंन? कहालीकि वा सातों भाऊ न ओको संग बिहाव कर लियो होतो।”
೩೩ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು.
34 यीशु न उन्को सी कह्यो, “यो युग को लोगों म त बिहाव होवय हय, (aiōn g165)
೩೪ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ. (aiōn g165)
35 पर जो लोग ऊ युग म सिरनो अऊर मरयो हुयो म सी जीन्दो होन को लायक हुयो हंय, नहीं त बिहाव करेंन अऊर नहीं करवायेंन। (aiōn g165)
೩೫ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ. (aiōn g165)
36 हि तब मरन को भी नहीं; कहालीकि हि स्वर्गदूतों को जसो होयेंन, अऊर मरयो हुयो म सी जीन्दो उठन को वजह सी परमेश्वर की भी सन्तान होयेंन।
೩೬ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ.
37 पर या बात ख कि मरयो हुयो फिर सी जीन्दो होवय हंय, मूसा न भी जरती झाड़ी की कथा म प्रगट करी हय कि ऊ प्रभु ख ‘अब्राहम को परमेश्वर, अऊर इसहाक को परमेश्वर अऊर याकूब को परमेश्वर’ कह्य हय।
೩೭ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
38 परमेश्वर त मुर्दों को नहीं पर जीन्दो को परमेश्वर हय: कहालीकि ओको जवर सब जीन्दो हंय।”
೩೮ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು.
39 तब यो सुन क धर्मशास्त्रियों म सी कुछ न यो कह्यो, “हे गुरु, तय न ठीक कह्यो।”
೩೯ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು.
40 अऊर उन्ख तब ओको सी कुछ अऊर पूछन की हिम्मत नहीं भयी।
೪೦ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.
41 यीशु न उन्को सी पुच्छ्यो, “मसीह ख दाऊद को सन्तान कसो कह्य हंय?
೪೧ಆಗ ಯೇಸು, “ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?
42 दाऊद खुदच भजन संहिता की किताब म कह्य हय, ‘प्रभु न मोरो प्रभु सी कह्यो: मोरो दायो तरफ बैठ,
೪೨“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.
43 जब तक कि मय तोरो दुश्मनों ख तोरो पाय को खल्लो की चौकी नहीं कर देऊं।’
೪೩
44 दाऊद त ओख ‘प्रभु’ कह्य हय, त तब ऊ ओकी सन्तान कसो भयो?”
೪೪“ದಾವೀದನು ಆತನನ್ನು ‘ಒಡೆಯನೆಂದು’ ಹೇಳಿದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಅವರನ್ನು ಕೇಳಿದನು.
45 जब सब लोग सुन रह्यो होतो, त यीशु न अपनो चेलावों सी कह्यो,
೪೫ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ,
46 “धर्मशास्त्रियों सी चौकस रह, जेक लम्बो चोंगा वालो कपड़ा पहिन क घुमनो अच्छो लगय हय, अऊर जिन्ख बजारों म आदर सत्कार, अऊर आराधनालयों म मुख्य आसन अऊर भोज म मुख्य जागा अच्छो लगय हंय।
೪೬“ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.
47 हि विधवावों को फायदा उठावय हय, अऊर उनकी जायजाद हड़प लेवय हय, अऊर दिखान लायी बड़ो देर तक प्रार्थना करय हंय: इन बहुतच सजा पायेंन।”
೪೭ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.

< लूका 20 >