< मत्ती 8 >

1 जब यीशु पहाड़ी सी उतरयो, त एक बड़ी भीड़ ओको पीछू भय गयी।
“ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು.
2 अऊर देखो, एक कोढ़ी न जवर आय क ओख प्रनाम करयो अऊर कह्यो, “हे प्रभु, यदि तय चाहवय, त मोख शुद्ध कर सकय हय।”
ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು.
3 यीशु न हाथ बढ़ाय क ओख छूयो, अऊर कह्यो, “मय चाहऊ हय, तय शुद्ध होय जा।” अऊर ऊ तुरतच कोढ़ सी चंगो भय गयो।
ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.
4 यीशु न ओको सी कह्यो, “देख, कोयी सी मत कहजो, पर जाय क अपनो आप ख याजक ख दिखाव अऊर जो चढ़ावा मूसा न ठहरायो हय ओख भेंट चढ़ाव, ताकि लोगों लायी गवाही हो।”
ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;”ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.
5 जब ऊ कफरनहूम नगर म आयो त एक रोमन अधिकारी न ओको जवर आय क ओको सी बिनती करी,
ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು,
6 “हे प्रभु, मोरो सेवक ख घर म लकवा मारयो हय अऊर ओख बहुत दु: ख होय रह्यो हय।”
“ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು.
7 यीशु न ओको सी कह्यो, “मय आय क ओख चंगो करूं।”
ಯೇಸು ಅವನಿಗೆ, “ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ” ಎಂದು ಹೇಳಲು,
8 जवाबदार अधिकारी न उत्तर दियो, “हे प्रभु, मय यो लायक नहाय कि तय मोरो छत को खल्लो आये, पर केवल आज्ञा दे त मोरो सेवक चंगो होय जायेंन।
ಆ ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.
9 कहालीकि मय भी दूसरों को अधीन हय, अऊर सिपाही मोरो अधीन हंय। जब मय एक सी कहूं हय, ‘जा!’ त ऊ जावय हय; अऊर दूसरों सी कहूं हय, ‘आव!’ त ऊ आवय हय; अऊर जब अपनो सेवक सी कहूं हय, ‘यो कर!’ त ऊ करय हय।”
ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು.
10 यो सुन क यीशु ख अचम्भा भयो, अऊर जो ओको पीछू आय रह्यो होतो उन्को सी कह्यो, “मय तुम सी सच कहू हय कि मय न इस्राएल म भी असो विश्वास नहीं पायो।
೧೦ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.
11 अऊर मय तुम सी कहू हय कि पूर्व अऊर पश्चिम सी बहुत सो लोग आय क अब्राहम अऊर इसहाक अऊर याकूब को संग स्वर्ग को राज्य म भोज म बैठेंन।
೧೧ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;
12 पर राज्य को प्रजा बाहेर अन्धारो म डाल दियो जायेंन: उत रोवनो अऊर दात को कटरनो होयेंन।”
೧೨ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು.
13 तब यीशु न अधिकारी सी कह्यो, “जा, जसो तोरो विश्वास हय, वसोच तोरो लायी हो।” अऊर ओको सेवक उच घड़ी चंगो भय गयो।
೧೩ಬಳಿಕ ಯೇಸು ಆ ಶತಾಧಿಪತಿಗೆ, “ನೀನು ನಂಬಿದಂತೆ ನಿನಗಾಗಲಿ, ಹೋಗು” ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.
14 यीशु जब पतरस को घर आयो, त ओन पतरस की सासु ख बुखार म पड़ी देख्यो।
೧೪ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ
15 यीशु न ओको हाथ छूयो अऊर ओको बुखार उतर गयो, अऊर वा उठ क ओकी सेवा-भाव करन लगी।
೧೫ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.
16 जब शाम भयी तब हि ओको जवर बहुत सो लोगों ख लायो जेको म दुष्ट आत्मायें होती अऊर यीशु न उन आत्मावों ख अपनो वचन सी निकाल दियो; अऊर सब बीमारों ख चंगो करयो।
೧೬ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.
17 ताकि जो वचन यशायाह भविष्यवक्ता सी कह्यो गयो होतो ऊ पूरो हो: “यीशु न खुदच हमरी कमजोरियों ख पकड़ लियो अऊर हमरी बीमारियों ख उठाय लियो।”
೧೭ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.
18 यीशु न जब अपनो चारयी तरफ एक बड़ी भीड़ देखी त चेलां ख झील को ओन पार जान को आदेश दियो।
೧೮ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು.
19 तब एक धर्मशास्त्री न जवर आय क ओको सी कह्यो, “हे गुरु, जित कहीं तय जाजो, मय तोरो पीछू होय जाऊं।”
೧೯ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, “ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,
20 यीशु न ओको सी कह्यो, “लोमड़ियों की गुफा अऊर आसमान को पक्षिंयों को घोसला होवय हंय; पर आदमी को बेटा लायी मुंड रखन की भी जागा नहाय।”
೨೦ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
21 एक अऊर चेला न ओको सी कह्यो, “हे प्रभु, मोख पहिले जान दे कि मय अपनो बाप ख गाड़ देऊ।”
೨೧ಶಿಷ್ಯರಲ್ಲಿ ಬೇರೊಬ್ಬನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅನ್ನಲಾಗಿ,
22 यीशु न ओको सी कह्यो, “तय मोरो पीछू होय जा, अऊर मुर्दों ख अपनो मुर्दा गाड़न दे।”
೨೨ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ” ಎಂದು ಹೇಳಿದನು.
23 जब यीशु डोंगा पर चढ़्यो, त ओको चेला ओको पीछू गयो।
೨೩ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
24 अऊर देखो, झील म अचानक असो बड़ो तूफान उठ्यो कि डोंगा लहर सी दबन लग्यो, पर यीशु सोय रह्यो होतो।
೨೪ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು.
25 तब चेलावों न जवर आय क ओख जगायो अऊर कह्यो, “हे प्रभु, हम्ख बचाव, हम नाश होय रह्यो हंय।”
೨೫ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, “ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ” ಎಂದರು.
26 यीशु न उन्को सी कह्यो, “हे अविश्वासियों, कहाली डरय हय?” तब ओन उठ क आन्धी अऊर पानी ख डाट्यो, अऊर सब शान्त भय गयो।
೨೬ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.
27 अऊर हि अचम्भा कर क् कहन लग्यो, “यो कसो आदमी आय कि आन्धी अऊर पानी भी ओकी आज्ञा मानय हंय।”
೨೭ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.
28 जब यीशु ओन पार गदरेनियों को देश म पहुंच्यो, त दोय आदमी जिन्म दुष्ट आत्मायें होती कब्रो सी निकलतो हुयो ओख मिल्यो। हि इतनो खतरनाक होतो कि कोयी ऊ रस्ता सी जाय नहीं सकत होतो।
೨೮ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.
29 उन्न चिल्लाय क कह्यो, “हे परमेश्वर को बेटा, हमरो तोरो सी का काम? का तय समय सी पहिले हम्ख दु: ख देन ख इत आयो हय?”
೨೯ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.
30 उन्को सी कुछ दूरी पर बहुत सो डुक्करों को एक झुण्ड चर रह्यो होतो।
೩೦ಅವರಿಂದ ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು.
31 दुष्ट आत्मावों न ओको सी यो कह्य क बिनती करी, “यदि तय हम्ख निकालय हय, त डुक्करों को झुण्ड म भेज दे।”
೩೧ಆ ದೆವ್ವಗಳು, “ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು” ಎಂದು ಬೇಡಿಕೊಂಡವು.
32 यीशु न उन्को सी कह्यो, “जावो!” अऊर हि निकल क डुक्करों म समाय गयी अऊर देखो, पूरो झुण्ड ढलान पर सी झपट क झील को किनार पर गिर पड़्यो, अऊर पानी म डुब क मरयो।
೩೨ಆತನು ಅವುಗಳಿಗೆ, “ಹೋಗಿರಿ” ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಅ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು.
33 उन्को चरवाहे भग क अऊर नगर म जाय क या सब बाते अऊर जेको म दुष्ट आत्मायें होती उन्को पूरो हाल सुनायो।
೩೩ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು;
34 तब पूरो नगर को लोग यीशु सी मिलन ख निकल आयो, अऊर ओख देख क बिनती करी कि हमरी सीमा सी बाहेर चली जा।
೩೪ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.

< मत्ती 8 >