< 2 Korintiana 13 >
1 Izao no fanintelon’ ny hankanesako atỳ aminareo. Amin’ ny tenin’ ny vavolombelona roa na telo no hanorenana mafy ny teny rehetra.
೧ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.
2 Efa nambarako fahiny, sady milaza rahateo koa aho ― toy ny nataoko fony mbola teo aminareo fanindroany ihany, ary ankehitriny raha tsy eo kosa ― amin’ izay nanota teo aloha sy amin’ ny sisa rehetra, fa rehefa tonga indray aho, dia tsy hiantra,
೨ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ.
3 satria ianareo mitady famantarana fa miteny ato anatiko Kristy, Izay tsy malemy aminareo, fa mahery ao aminareo kosa.
೩ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.
4 Fa voahombo tamin’ ny hazo fijaliana Izy noho ny fahalemena, nefa velona kosa noho ny herin’ Andriamanitra. Fa izahay koa dia malemy ao aminy, nefa hiara-belona aminy ho anareo izahay noho ny herin’ Andriamanitra.
೪ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ.
5 Diniho ny tenanareo, na mitoetra amin’ ny finoana ianareo, na tsia; izahao toetra ny tenanareo. Moa tsy fantatrareo va ny amin’ ny tenanareo, fa ao anatinareo Jesosy Kristy, raha tsy olona nolavina ianareo?
೫ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.
6 Nefa manantena aho fa ho fantatrareo fa izahay dia tsy olona nolavina.
೬ನಾವಂತೂ ಆಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು.
7 Ary mangataka amin’ Andriamanitra izahay mba tsy hanao izay ratsy ianareo, tsy ny hisehoanay ho olona voazaha toetra anefa, fa ny mba hanaovanareo izay tsara, na dia ho toy ny olona nolavina aza izahay.
೭ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ.
8 Fa tsy mahavita na inona na inona hanohitra ny marina izahay, fa hampandroso ny marina kosa.
೮ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ.
9 Fa faly izahay, raha malemy izahay, fa ianareo no mahery; ary izao no angatahinay, dia ny fanatanterahana anareo.
೯ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.
10 Izany no anoratako izany zavatra izany, raha tsy eo aminareo aho, fandrao, rehefa tonga aho, dia hanao izay mafy araka ny hery izay nomen’ ny Tompo ahy ho fananganana, fa tsy ho fandravana.
೧೦ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ.
11 Farany, ry rahalahy, mifalia, aoka ho tanteraka ianareo, mandraisa ny fampiononana, miraisa saina, mihavàna; ary Andriamanitry ny fitiavana sy ny fiadanana ho aminareo.
೧೧ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.
12 Mifanaova veloma amin’ ny fanorohana masìna.
೧೨ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
13 Ny olona masìna rehetra manao veloma anareo.
೧೩ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.
14 Ho aminareo rehetra anie ny fahasoavan’ i Jesosy Kristy Tompo sy ny fitiavan’ Andriamanitra ary ny firaisana amin’ ny Fanahy Masìna.
೧೪ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.