< Romana 16 >
1 Indry, Foiby anabavintsika, diakon’ ny fiangonana atỳ Kenkrea, lazaiko tsara aminareo,
೧ನಾನು ನಿಮ್ಮ ಬಳಿಗೆ ಕಳುಹಿಸುವ ನಮ್ಮ ಸಹೋದರಿಯಾದ ಪೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಖ್ರೆಯ ಪಟ್ಟಣದಲ್ಲಿರುವ ಸಭೆಯ ಸೇವಕಿಯಾಗಿದ್ದಾಳೆ;
2 mba horaisinareo ao amin’ ny Tompo izy, toy izay miendrika ny olona masìna, ary mba hampianareo izy amin’ izay raharaha ilany anareo; fa izy dia mpiahy ny maro mbamin’ ny tenako koa.
೨ನೀವು ಆಕೆಯನ್ನು ದೇವಜನರಿಗೆ ತಕ್ಕ ಹಾಗೆ ಕರ್ತನ ಶಿಷ್ಯಳೆಂದು ಸೇರಿಸಿಕೊಂಡು, ಆಕೆಗೆ ಯಾವ ವಿಷಯದಲ್ಲಿ ಅಗತ್ಯವಿದೆಯೋ ಅದರಲ್ಲಿ ಸಹಾಯವನ್ನು ಮಾಡಿರಿ. ಆಕೆಯು ನನಗೂ ಮತ್ತು ಅನೇಕರಿಗೂ ಸಹಾಯಮಾಡಿದವಳು.
3 Veloma amin’ i Prisila sy Akoila, mpiara-miasa amiko ao amin’ i Kristy Jesosy;
೩ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಿಲ್ಲಳಿಗೂ ಮತ್ತು ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
4 izy mivady dia nanolotra ny tendany hamonjy ny aiko; nefa tsy izaho ihany no misaotra azy, fa ny fiangonana rehetra any amin’ ny jentilisa koa.
೪ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.
5 Ary veloma amin’ ny fiangonana izay ao an-tranony. Veloma amin’ i Epaineto malalako, izay voaloham-bokatr’ i Asia ho an’ i Kristy.
೫ಅವರ ಮನೆಯಲ್ಲಿ ಸೇರಿಬರುವ ಸಭೆಗೆ ಸಹ ನನ್ನ ವಂದನೆಯನ್ನು ತಿಳಿಸಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಫೈನೆತನಿಗೆ ವಂದನೆ.
6 Veloma amin’ i Maria, izay nikely aina fatratra ho anareo.
೬ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.
7 Veloma amin’ i Androniko sy Jonia, havako sy namako niara-nifatotra tamiko, izay malaza eo amin’ ny Apostoly sady tao amin’ i Kristy talohako.
೭ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು.
8 Veloma amin’ i Ampliato, malalako ao amin’ ny Tompo.
೮ಕರ್ತನಲ್ಲಿ ನನ್ನ ಪ್ರಿಯನಾದ ಅಂಪ್ಲಿಯಾತನಿಗೆ ವಂದನೆ.
9 Veloma amin’ i Orbano, mpiara-miasa aminay ao amin’ i Kristy, sy Staky malalako.
೯ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ, ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.
10 Veloma amin’ i Apela, ilay efa voazaha toetra ao amin’ i Kristy. Veloma amin’ ny ankohonan’ i Aristobolo.
೧೦ಕ್ರಿಸ್ತನ ಸೇವೆಯಲ್ಲಿ ಮೆಚ್ಚಿಕೆಗೆಪಾತ್ರನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
11 Veloma amin’ i Herodiona havako. Veloma amin’ ny ankohonan’ i Narkisa, izay ao amin’ ny Tompo.
೧೧ನನ್ನ ಸಂಬಂಧಿಕನಾದ ಹೆರೂಡಿಯೋನನಿಗೆ ವಂದನೆ. ನಾರ್ಕಿಸ್ಸನ ಮನೆಯವರೊಳಗೆ ಕ್ರಿಸ್ತನನ್ನು ನಂಬಿದವರಿಗೆ ವಂದನೆಗಳು.
12 Veloma amin’ i Tryfena sy Tryfosa, izay mikely aina ao amin’ ny Tompo. Veloma amin’ i Perysa malala, izay nikely aina fatratra ao amin’ ny Tompo.
೧೨ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೈನಳಿಗೂ, ತ್ರುಫೋಸಳಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀಸಳಿಗೆ ವಂದನೆ.
13 Veloma amin’ i Rofosy, ilay voafidy ao amin’ ny Tompo, ary amin’ ny reniny sy reniko.
೧೩ಕರ್ತನಲ್ಲಿ ಆರಿಸಿಕೊಳ್ಳಲ್ಪಟ್ಟವನಾದ ರೂಫನಿಗೂ, ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆಗಳು.
14 Veloma amin’ i Asynkrito, Flegona, Hermesy, Patroba, Herma, mbamin’ ny rahalahy ao aminy.
೧೪ಅಸುಂಕ್ರಿತನಿಗೂ, ಪ್ಲೆಗೋನನಿಗೂ, ಹೆರ್ಮೇಯನಿಗೂ, ಪತ್ರೋಬನಿಗೂ, ಹೆರ್ಮಾನನಿಗೂ, ಅವರೊಂದಿಗಿರುವ ಸಹೋದರರಿಗೂ ವಂದನೆಗಳು.
15 Veloma amin’ i Filologo sy Jolia, Nerea sy ny anabaviny, sy Olympa ary ny olona masìna rehetra izay ao aminy.
೧೫ಫಿಲೊಲೊಗನಿಗೂ, ಯೂಲ್ಯಳಿಗೂ, ನೇರ್ಯನಿಗೂ, ಅವನ ತಂಗಿಗೂ, ಒಲುಂಪನಿಗೂ, ಇವರೊಂದಿಗಿರುವ ದೇವಜನರೆಲ್ಲರಿಗೂ ವಂದನೆಗಳು.
16 Mifanaova veloma amin’ ny fanorohana masìna. Ny fiangonana rehetra an’ i Kristy manao veloma anareo.
೧೬ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳಲ್ಲಿರುವವರೆಲ್ಲರೂ ನಿಮ್ಮನ್ನು ವಂದಿಸುತ್ತಿದ್ದಾರೆ.
17 Fa izaho mananatra anareo, ry rahalahy, mba hitandrina ny amin’ izay mahatonga ny fisarahana sy ny fahatafintohinana tsy araka ny fampianarana efa nianaranareo; mialà amin’ ireny olona ireny.
೧೭ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
18 Fa izy ireny tsy mba manompo an’ i Kristy Tompontsika, fa ny kibony ihany; ary teny malefaka sady tsara lahatra no amitahany ny fon’ ny tsy ary saina.
೧೮ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
19 Fa efa niely any amin’ ny olona rehetra ny lazan’ ny fanarahanareo. Ary faly aho noho ny aminareo; satria tiako ho hendry amin’ izay tsara ianareo, ary tsy hiharo amin’ izay ratsy.
೧೯ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
20 Fa Andriamanitry ny fiadanana hanorotoro an’ i Satana faingana eo ambanin’ ny tongotrareo. Ho aminareo anie ny fahasoavan’ i Jesosy Kristy Tompontsika.
೨೦ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
21 Manao veloma anareo Timoty, mpiara-miasa amiko, sy Losio sy Jasona ary Sosipatro havako.
೨೧ನನ್ನ ಜೊತೆಕೆಲಸದವನಾದ ತಿಮೊಥೆಯನೂ, ನನ್ನ ಸಂಬಂಧಿಕರಾದ ಲೂಕ್ಯನೂ, ಯಾಸೋನನೂ ಮತ್ತು ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ
22 Izaho, Tertio, izay manoratra ity epistily ity, manao veloma anareo ao amin’ ny Tompo.
೨೨ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.
23 Gaio, ilay itoeranay sy ny fiangonana rehetra, manao veloma anareo. Erasto, mpitahiry ny volam-panjakana ato an-tanàna, sy Koarto rahalahy manao veloma anareo.
೨೩ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
೨೪ನಮ್ಮ ಕರ್ತನಾದ ಯೇಸುಕ್ರಿಸ್ತನ ಕೃಪೆಯ ನಿಮ್ಮೊಂದಿಗಿರಲಿ. ಆಮೆನ್.
25 Ary ho an’ izay mahay mampahery anareo araka ny filazantsarako sy ny fitoriana an’ i Jesosy Kristy, araka ny fampisehoana ny zava-niafina, izay voàfina hatry ny fony fahagola, (aiōnios )
೨೫ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ, (aiōnios )
26 fa efa naseho ankehitriny tamin’ izay soratry ny mpaminany, araka ny didin’ Andriamanitra mandrakizay, ka nampahafantarina any amin’ ny firenena rehetra hahatonga fanekena ny finoana, (aiōnios )
೨೬
27 ho an’ Andriamanitra tokana ihany sady hendry anie ny voninahitra amin’ ny alalan’ i Jesosy Kristy mandrakizay mandrakizay. Amena. (aiōn )
೨೭ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್. (aiōn )