< 1 Mpanjaka 9 >
1 Aa ie nifonire’ i Selomò ty fandranjiañe i anjomba’ Iehovày, naho ty anjomba’ i mpanjakay, naho ze fitoloñañe nahafale-troke i Selomò,
೧ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿದ ನಂತರ,
2 le niheo amy Selomò fañindroe’e t’Iehovà manahake ty niboaha’e e Gibone añe.
೨ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು.
3 Le hoe t’Iehovà ama’e: Fa tsinanoko i halali’oy naho i sabo nanoe’o amakoy: Fa navaheko ty anjomba namboare’o toy, ie nampijoñeko tsy mbia tsy ho ama’e i añarakoy; vaho ho ama’e nainai’e donia o masokoo naho ty troko.
೩ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.
4 Aa naho ihe ro hañavelo aoloko manahake ty nañaveloa’ i Davide rae’o, an-kavantañan’ arofo, naho an-kavañonañe, manao ze hene nandiliako azo naho mañambeñe o fañèkoo naho o fepèkoo;
೪ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವುದಾದರೆ,
5 le horizako ho nainai’e ty fiambesam-pifehea’o Israele, amy nampitamako i Davide rae’oy, ami’ty hoe: Tsy ho po-ondaty am-piambesa’ Israele eo irehe.
೫ಇಸ್ರಾಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು. ‘ಇಸ್ರಾಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು’ ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
6 Fe ke iambohoa’ areo ty fañorihañ’ Ahy, inahareo ndra o ana’ areoo ie tsy mitañe o lilikoo naho o fañèko apoko añatrefa’ areoo, te mone mandifike hitoroñe ‘ndrahare ila’e vaho hitalaho ama’e;
೬ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿಯುವುದಾದರೆ
7 le haitoako amy tane natoloko iareoy t’Israele; naho hahifiko tsy ho am-pahaisahako ty anjomba navaheko ho ami’ty añarako toy; le ho razan-drehake t’Israele, fandrabioña’ o kilakila’ ondatio;
೭ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.
8 le akore amy zay ty anjomba miligiligy toy, kanao hilatsà naho hikosiha’ ze hene ondaty miary ama’e, hanao ty hoe: Ino ty nanoe’ Iehovà ami’ty tane toy naho ami’ty anjomba toy?
೮ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
9 Le ho toiñeñe ty hoe: amy te nitsambolitio’ iereo t’Iehovà Andrianañahare’ iareo, i nampiavotse o roae’ iareoo an-tane’ Mitsraimey ie nandrambe ‘ndrahare ila’e naho nitalahoa’e vaho nitoroña’e; izay ty nametsaha’ Iehovà am’ iereo o fonga hankàñe zao.
೯ಆಗ ಈ ದೇಶದವರು ಅವರಿಗೆ, ‘ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ’ ಎಂಬ ಉತ್ತರ ಹೇಳುವರು” ಎಂದನು.
10 Aa ie niritse ty roapolo taoñe namboare’ i Selomò i anjomba roe rey, ty anjomba’ Iehovà naho ty anjomba’ i mpanjakay
೧೦ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.
11 (ie natolo’ i Kirame mpanjaka’ i Tsore amy Selomò ze hene mendoraveñe naho kobaiñe naho ze volamena nipaia’e) le natolo’ i Selomò amy Kirame ty rova roa-polo an-tane Galìle ao.
೧೧ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
12 Niavotse amy Tsore t’i Kirame hañisake o rova natolo’ i Selomò azeo; fe tsy ni-nò’e.
೧೨ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನಿಗೆ ಮೆಚ್ಚಿಗೆಯಾಗಲಿಲ್ಲ.
13 Le hoe re: Rova ino ze o natolo’o ahiko zao, rahalahiko? Le natao: Tane’ i Kabole izay pake henaneo.
೧೩ಆದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೇ?” ಎಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ.
14 Volamena zato-tsi-roa-polo ty nampihitrife’ i Kirame amy mpanjakay.
೧೪ಹೀರಾಮನು ಸೊಲೊಮೋನನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನು ಕೊಟ್ಟನು.
15 Zao ty volilim-pitoloña’ i haba nakare’ i Selomò mpanjakaiy: namboare’e ty anjomba’ Iehovà naho ty anjomba’e, naho i Milo, naho ty kijoli’ Ierosalaime, naho i Katsore naho i Megidòne vaho i Getsere
೧೫ಸೊಲೊಮೋನನ ಬಿಟ್ಟೀ ಕೆಲಸದವರು ಕಟ್ಟಿದವುಗಳು ಯಾವುವೆಂದರೆ, ಯೆಹೋವನ ಆಲಯ, ಅರಮನೆ, ಮಿಲ್ಲೋ ಕೋಟೆ, ಯೆರೂಸಲೇಮಿನ ಪೌಳಿಗೋಡೆ, ಹಾಚೋರ್ ಮೆಗಿದ್ದೋ ಮತ್ತು ಗೆಜೆರ್ ಇವುಗಳೇ.
16 ie fa nionjo-mb’eo t’i Parò mpanjaka’ i Mitsraime, nitavañe i Getsere; finorototo’e añ’ afo naho fonga zinama’e o nte-Kaanane nimoneñe amy rovaio vaho natolo’e ho enta’ i anak’ ampela’e, vali’ i Selomòy.
೧೬ಐಗುಪ್ತದ ಅರಸನಾದ ಫರೋಹನು ಗೆಜೆರ್ ಪಟ್ಟಣವನ್ನು ಹಿಡಿದು ಅದಕ್ಕೆ ಬೆಂಕಿಹೊತ್ತಿಸಿ, ಅದರಲ್ಲಿದ್ದ ಕಾನಾನ್ಯರನ್ನು ಹತಿಸಿ, ಅದನ್ನು ವಶಮಾಡಿಕೊಂಡು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಮದುವೆಯ ಉಡುಗೊರೆಯಾಗಿ ಕೊಟ್ಟಿದ್ದನು.
17 Aa le namboare’ i Selomò ty Getsere naho i Bete-korone ambane
೧೭ಸೊಲೊಮೋನನು ಗೆಜೆರ್ ಪಟ್ಟಣದ ಹೊರತಾಗಿ ಕೆಳಗಿನ ಬೆತ್ ಹೋರೋನ್,
18 naho i Baalate naho i Tadmore an-dratraratra’ i taney;
೧೮ಯೆಹೂದದ ಅರಣ್ಯಪ್ರದೇಶದಲ್ಲಿರುವ ಬಾಲಾತ್ ಮತ್ತು ತಾಮಾರ್,
19 naho ze hene rovam-pihaja’ i Selomò naho o rovan-tsarete’eo naho o rovam-piningi-tsoavala’eo, naho ze nitea’ i Selomò ranjieñe e Ierosalaime naho e Lebanone ao naho an-tanem-pifehea’e iaby.
೧೯ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು, ಯುದ್ಧ ರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.
20 Le o fonga ondaty nisehanga’ o nte-Amoreo, o nte-Keteo, o nte-Perizeo, o nte-Hiveo vaho o nte-Ieboseo; o tsy ana’ Israeleo,
೨೦ಇದಲ್ಲದೆ ಅವನು ಇಸ್ರಾಯೇಲರಿಂದ ಸಂಹೃತರಾದ ಅನ್ಯ ಜನರನ್ನೂ, ಕಾನಾನ್ ದೇಶದಲ್ಲಿ ಉಳಿದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ,
21 o tiri’ iareo nihonkahonka’e amy taneio, o tsy zinama’ o ana’ Israeleoo; ie ty nangala’ i Selomò mpitoroñe amy vili-lohay pake henane.
೨೧ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟೀಹಿಡಿದನು. ಇಂದಿನ ವರೆಗೂ ಅವರು ಬಿಟ್ಟೀಕೆಲಸದವರಾಗಿರುತ್ತಾರೆ.
22 Tsy nangala’ i Selomò habam-pitoroñañe amo ana’ Israeleo fa nanoeñe lahindefo’e, mpitoro’e, roandria’e, mpifehe’e, mpifele-tsarete’e vaho mpiningi-tsoavala’e.
೨೨ಆದರೆ ಅವನು ಇಸ್ರಾಯೇಲರನ್ನು ಬಿಟ್ಟೀಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.
23 Ie o mpiaolo nifehe’ ty fitoloña’ i Selomòo; liman-jato-tsi-limampolo ty nifeleke ondaty nitoloñe amy asaio.
೨೩ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲರನ್ನು ಅಧಿಕಾರಿಗಳನ್ನಾಗಿಯೂ ನೇಮಿಸಿದನು.
24 Fe niavotse ty rova’ i Davide ty anak’ ampela’ i Parò mb’ amy anjomba namboara’ i Selomò azey; izay vaho namboare’e ty Milò.
೨೪ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ ಅರಮನೆಗೆ ಬಂದಳು. ಅನಂತರ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು.
25 Intelo ami’ty taoñe ty nañengà’ i Selomò soroñe naho engam-panintsiñañe amy kitrely niranjie’e ho a Iehovày vaho nañembok’ añ’atrefa’ Iehovà. Aa le nifonire’e i anjombay.
೨೫ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು.
26 Le namboare’e firimboñan-tsambo e Etsione-gebere añ’ila’ i Elote añ’ olo’ i riake Menay, an-tane Edome añe.
೨೬ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.
27 Nampihitrife’ i Kirame mb’amo sambo’eo o mpitoro’e mpian-dàkañe zatse riakeo, hitraok’ amo mpitoro’ i Selomòo.
೨೭ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.
28 Le nionjoñe mb’e Ofire añe iereo nangalake volamena talenta efajato-tsi-roapolo ze nandesa’ i areo amy Selomò.
೨೮ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು.