< 2 Tantara 7 >
1 Ie nihenefe’ i Selomò i filolofa’ey, le nidoindoiñe boak’ andikerañe eñe ty afo nampibotseke i enga oroañey naho o soroñeo vaho nandifotse i anjomba’ Iehovày ty enge’ Iehovà.
೧ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.
2 Tsy nahafizilik’ añ’ anjomba’ Iehovà ao o mpisoroñeo amy te nañatseke i anjombay ty enge’ Iehovà.
೨ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.
3 Niisa’ o ana’ Israele iabio ty nivotraha’ i afoy naho ty enge’ Iehovà amy anjombay; le nibokok’ an-damoke eo, nidròdreke mb’an-tane, niambane naho nañandriañe Iehovà: Amy te Ie ro soa, nainai’e ty fiferenaiña’e.
೩ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.
4 Le songa nanao soroñe añatrefa’ Iehovà i mpanjakay naho ondatio.
೪ಅರಸನೂ ಮತ್ತು ಎಲ್ಲಾ ಜನರೂ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನು ಅರ್ಪಿಸಿದರು.
5 Nandenta añombe ro’ale-tsi-ro’ arivo hisoroñañe t’i Selomò mpanjaka naho boak’ an-dia-raik’ ao ty rai-hetse-tsi-ro’ ale. Aa le noriza’ i mpanjakay naho ondaty iabio ty anjomban’ Añahare.
೫ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.
6 Nijohañe eo o mpisoroñeo, songa fitoloña’e; o nte-Levio rekets’ o fititihan-tsabo am’ Iehovà niranjie’ i Davide mpanjakao, hañandriañe Iehovà, amy te nainai’e ty fiferenaiña’e, am-pandrengea’ i Davide am-pità’ iareoo; le nampipopò trompetra tandrife iareo o mpisoroñeo; vaho nijohañe iaby t’Israele.
೬ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.
7 Mbore nimasiñe’ i Selomò ty añivon-kiririsa aolo’ i anjomba’ Iehovày; le eo ty nañengà’e i soroñe rey naho o saboran’ engam-panintsiñañeo; amy te tsy naharambe i soroñe rey naho o engan-kaneñeo naho i saboray i kitrely torisike niranjie’ i Selomòy.
೭ಸೊಲೊಮೋನನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠೆ ಮಾಡಿದನು. ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನೂ, ಸಮಾಧಾನ ಯಜ್ಞದ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ಸರ್ವಾಂಗಹೋಮವನ್ನೂ, ಧಾನ್ಯನೈವೇದ್ಯಗಳನ್ನೂ, ಸಮಾಧಾನ ಯಜ್ಞದ ಕೊಬ್ಬಿನ ಕಾಣಿಕೆಯನ್ನು ಸಮರ್ಪಿಸಿದನು.
8 Aa le nambena’ i Selomò fito andro i sabadidakey naho niharo ama’e iaby t’Israele, toe valobohòke jabajaba, sikal’ am-pimoahañ’ amy Kamate añe pak’ an-toraha’ i Mitsraime añe.
೮ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ, ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಅಲ್ಲಿ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆ ಆಚರಿಸಿದರು.
9 Le hene nivoribey amy andro fahavaloy, amy te nambena’ iereo fito andro ty fañorizañe i kitreliy vaho fito andro ka i sabadidakey.
೯ತರುವಾಯ ಎಂಟನೆಯ ದಿನದಲ್ಲಿ ಪರಿಶುದ್ಧ ಸಭೆ ನಡಿಸಿದರು. ಹೀಗೆ ಏಳು ದಿನ ಯಜ್ಞವೇದಿಯ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿನ ಜಾತ್ರೆಯ ಹಬ್ಬವನ್ನು ಆಚರಿಸಿದರು.
10 Aa ie amy andro faha roapolo-telo’ambi’ i volam-pahafitoy, le nampolie’e mb’an-kivoho’e mb’eo ondatio, sambe fale naho nirebek’ an-troke ty amy hasoa naboa’ Iehovà amy Davide naho amy Selomò vaho am’ Israele ondati’eoy.
೧೦ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.
11 Aa le nifonire’ i Selomò i anjomba’ Iehovày naho i anjomba’ i mpanjakaiy; ze hene nimoak’ añ’arofo’ i Selomò le niranjie’e añ’ anjomba’ Iehovà ao naho amy anjomba’ey ho fonitse.
೧೧ಸೊಲೊಮೋನನು ಯೆಹೋವನ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಹೃದಯದಲ್ಲಿದ್ದ ಎಲ್ಲವನ್ನೂ ಅರಸನು ಈಡೇರಿಸಿದನು.
12 Niboak’ amy Selomò haleñe t’Iehovà, nanao ama’e ty hoe: Tsinanoko i halali’oy vaho jinoboko ho ahiko ho anjombam-pisoroñañe ty toetse toy.
೧೨ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ.
13 Aa naho arindriko i likerañey tsy hahavia’e orañe, ke lilieko o valalao hampibotseke i taney, he ampihitrifako angorosy am’ondatikoo;
೧೩ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ,
14 le ie hirè-batañe ondaty tokaveñe ami’ ty añarakoo, hihalaly naho hipay ty tareheko vaho hifotetse amo fañaveloa’ iareo ratio; le hitsanoñe boak’ andindiñe ao Raho, le hapoko o tahi’ iareoo vaho ho janganeko o tane’ iareoo.
೧೪ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.
15 Hisokake henaneo o masokoo, le ho tsanoñe’ o sofikoo ze halaly anoeñe ami’ty toetse toy.
೧೫ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.
16 Fa jinoboko naho nimasiñeko ty anjomba toy henane zao, soa te ho ao kitro-katroke ty añarako vaho ho ama’e nainai’e donia o masokoo naho ty troko.
೧೬ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.
17 Le ie hañavelo añatrefako, manahake ty fañaveloa’ i Davide rae’o, hanao o fonga nandiliako azoo, hañambeñe o fañèkoo naho o fepèkoo;
೧೭ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವುದಾದರೆ,
18 le horizako ty fiambesam-pifeleha’o, ty amy fañinako amy Davide rae’o, nanao ty hoe: Tsy ho po-ondaty hifehe Israele irehe.
೧೮ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಅಲ್ಲದೆ ಇಸ್ರಾಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ಸದಾಕಾಲ ರಾಜ್ಯಾಭಾರ ನಡಿಸುವರು ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
19 Fe naho hivìke añe irehe hamorintseñe o fañèkoo naho o fepèko najadoko añatrefa’ areoo vaho hiavotse hitoroñe ndrahare ila’e hitalahoa’ areo;
೧೯ಆದರೆ ನೀವು ದ್ರೋಹಿಗಳಾಗಿ ಯೆಹೋವನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಆರಾಧಿಸಿ,
20 le hombotako reke-bahatse an-taneko natoloko iareo; le ty anjomba nimasiñeko ho ami’ty añarako toy ro hahifiko tsy ho am-pahatreavako añe, fa hanoeko razan-drehake naho fandrabioña’ ze kilakila’ ondaty.
೨೦ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.
21 Le ty anjomba mandigiligy toy, ro hilatsà ze fonga mpiary ama’e, hanao ty hoe; Aa vaho akore te nanoe’ Iehovà zao o tane toañeo naho i anjomba’ey?
೨೧ಉನ್ನತವಾದ ಮಂದಿರದ ಈ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ಬೆರಗಾಗಿ, ‘ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
22 Le hoe ty havali’ iareo: Ie namorintseñe Iehovà Andrianañaharen-droae’ iareo nañavotse iareo an-tane Mitsraime añe, mbore nandrambe ndrahare ila’e naho nitalahoa’ iareo vaho nitoroña’ iareo; toly ndra naobo’e am’iereo o fonga hankàñe zao.
೨೨ಆಗ ಅವರಿಗೆ, ‘ಈ ದೇಶದವರು ತಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿ, ಅನ್ಯ ದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ.’” ಎಂದು ಉತ್ತರ ಕೊಡುವರು ಎಂದನು.