< 2 Samoela 15 >
1 Heneke zay, le nihentseñe’ i Absalome ty sarete reketse soavala naho lahilahy lim’ ampolo hihitrihitry aolo’e.
೧ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.
2 Nitroatse maraindray t’i Absalome naho nijohañe añ’ ila’ ty lala’ i lalambeiy; ie amy zay, naho nanan-kabò t’indaty ze ho nasese’e amy mpanjakay ho zakae’e, le nikanjy aze t’i Absalome, nanao ty hoe: Aia ty rova nihirifa’o? le hoe re: Boak’ am-pifokoa’ Israele raik’ ao iraho.
೨ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನರವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು.
3 Le hoe t’i Absalome ama’e: Inao! soa naho to o azoo; fe tsy aman-tsorotà hijanjiñe azo i mpanjakay.
೩ಆಗ ಅಬ್ಷಾಲೋಮನು, “ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ.
4 Hoe ka ty natovo’ i Absalome: Ee te izaho ty nanoeñe mpizaka an-tane’ atoy, soa te ho nimeako to ze ondaty miheo amako minday ty sisì’e ndra ty kabò’e.
೪ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು” ಎಂದು ಹೇಳುವನು.
5 Aa ie nañarine aze t’indaty hiambane ama’e, le nahiti’e ama’e ty fità’e, le namihiñe aze, vaho norofa’e.
೫ಯಾರಾದರೂ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವರನ್ನು ಕೂಡಲೆ ಕೈಚಾಚಿ ಅವರನ್ನು ಹಿಡಿದು ಮುದ್ದಿಡುವನು.
6 Nanoe’ i Absalome i sata zay amy ze nomb’ amy mpanjakay boake Israele iaby hipay to; aa le kinizo’ i Absalome ty arofo’ondati’ Israeleo.
೬ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.
7 Ie nimodo ty efa-taoñe, le hoe t’i Absalome amy mpanjakay: Mihalaly ama’o, ehe, adono homb’eo hañondroke i nifantàkoy, i nanoeko am’ Iehovà e Kebroney.
೭ನಾಲ್ಕು ವರ್ಷಗಳಾದ ನಂತರ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ.
8 Fa nanao fanta ty mpitoro’o t’ie nitoboke e Gesore’ Arame añe, ami’ty hoe: Naho toe hampolie’ Iehovà mb’e Ierosalaime mb’eo, le hitoroñe Iehovà iraho.
೮ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.
9 Le hoe i mpanjakay tama’e: Akia am-panintsiñañe. Aa le niavotse mb’e Kebrone mb’eo re,
೯ಆಗ ಅರಸನು, “ಹೋಗಿಬಾ, ನಿನಗೆ ಶುಭವಾಗಲಿ” ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟು ಹೋದನು.
10 fe mone nañirake mpitrobo amo hene fifokoa’ Israeleo t’i Absalome hanao ty hoe: Ie mahajanjiñe ty feon’ antsiva, le hanao ty hoe nahareo: Mpanjaka e Kebrone ao t’i Absalome.
೧೦ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.
11 Nindre amy Absalome boake Ierosalaime ao ty lahilahy roanjato, songa nambarañe, f’ie nandeha an-tso-po, tsy nahafohiñe ty lengo’e.
೧೧ಅಬ್ಷಾಲೋಮನು ಯೆರೂಸಲೇಮಿನಿಂದ ಆರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು. ಅವರಿಗೇನೂ ಗೊತ್ತಿರಲಿಲ್ಲ.
12 Aa ie nañenga soroñe t’i Absalome le nahitri’e t’i Akitofele nte Gilò, mpanolo-keve’ i Davide, boak’ an-drova’e e Gilò añe. Le nihaozatse i kililiy amy te nitolom-pitombo ondaty amy Absalomeo.
೧೨ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.
13 Niheo amy Davide amy zao ty mpitalily nanao ty hoe: Fa mañorike i Absalome ty arofo’ o nte’ Israeleo.
೧೩ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು.
14 Le hoe t’i Davide amo hene mpitoro’e nindre ama’e e Ierosalaimeo: Miongaha, antao hibijoñe mb’eo tsy mone tsy hahafipoliotse amy Absalome tika; malisà nahareo hienga, hera hiambotraha’e aniany, hañoho-doza aman-tika, vaho ho lafà’e am-pibara ty rova toy.
೧೪ಅವನು ಯೆರೂಸಲೇಮಿನಲ್ಲಿ ತನ್ನ ಸೇವಕರಿಗೆ, “ಏಳಿರಿ, ಓಡಿಹೋಗೋಣ. ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ. ಅವನು ಆಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು, ನಮಗೆ ದುರ್ಗತಿಯನ್ನು ಉಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸುವನು” ಎಂದು ಹೇಳಿದನು.
15 Aa le hoe o mpitorom-panjakao amy mpanjakay: Ingo, te veka’e hanao ze satrim-panjaka talèko o mpitoro’oo.
೧೫ಸೇವಕರು ಅರಸನಿಗೆ, “ನಮ್ಮ ಒಡೆಯನಾದ ಅರಸನಿಗೆ ಸರಿ ತೋರಿದ್ದನ್ನು ಮಾಡಲು ನಾವು ಸಿದ್ಧರಾಗಿದ್ದೇವೆ” ಎಂದು ಉತ್ತರ ಕೊಟ್ಟರು.
16 Aa le niavotse i mpanjakay vaho nañorik’ aze o añ’anjomba’e iabio. Fe nenga’ i mpanjakay ty rakemba sakeza’e folo hañambeñe i anjombay.
೧೬ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.
17 Nionjoñe mb’eo i mpanjakay, mitraok’ am’ ondaty nañorik’ azeo, le nitofa e Bete-hamerekàke ao.
೧೭ಅರಸನು ಅವನ ಜೊತೆಯಲ್ಲಿ ಹೊರಟು ಹೋದ ಜನರೆಲ್ಲರೂ ಪಟ್ಟಣದ ಕಡೆಯ ಮನೆಯ ಬಳಿಯಲ್ಲಿ ಸ್ವಲ್ಪ ಹೊತ್ತು ನಿಂತರು.
18 Nioza ama’e o mpitoro’e iabio; o nte-Kerete iabio naho o nte-Pilisty iabio naho o nte-Gate iabio, i lahindefo enen-jato nañorik’ aze am-pandia boake Gate añe rey songa niary aolo’ i mpanjakay mb’eo.
೧೮ದಾವೀದನೂ, ಅವನ ಎಲ್ಲಾ ಸೇವಕರೂ, ಎಲ್ಲಾ ಕೆರೇತ್ಯ ಮತ್ತು ಎಲ್ಲಾ ಪೆಲೇತ್ಯ ಎಂಬ ಕಾವಲು ದಂಡುಗಳೂ, ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಗಿತ್ತೀಯರೂ ಅರಸನ ಮುಂದೆ ಹಾದು ಹೋದರು.
19 Aa hoe i mpanjakay am’ Itaie nte-Gate; Ino ty indreza’o ama’ay? Mibaliha, mimoneña amy mpanjakay; fa renetane irehe, naho sese-tane boak’ an-toe’o añe.
೧೯ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, “ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ಷಾಲೋಮನ ಬಳಿಯಲ್ಲಿ ವಾಸಮಾಡು.
20 Toe omale avao ty nivotraha’o eo, aa vaho hazìko hitrao fitroarañe naho fizotsoañe ama’ay irehe te anito, izaho miheo mb’amy ze mete? Mimpolia, ampibaliho miharo ama’o ka ondati’oo an-kasoa naho hatò.
೨೦ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
21 Fe hoe ty natoi’ Itaie amy mpanjakay: Kanao veloñe t’Iehovà naho veloñe ka ty talèko mpanjaka, le amy ze toetse itoera’ ty talèko mpanjaka, ke te fihomahañe he t’ie haveloñe, le toe ho eo ka ty mpitoro’o.
೨೧ಅದಕ್ಕೆ ಇತ್ತೈ, “ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು” ಎಂದು ಉತ್ತರಕೊಟ್ಟನು.
22 Aa le hoe t’i Davide am’ Itaie: Akia mitsaha. Le nitsake mb’eo t’ Itaie nte-Gate rekets’ ondati’e iabio naho o keleiañe nindre ama’eo.
೨೨ಆಗ ದಾವೀದನು ಅವನಿಗೆ, “ಒಳ್ಳೆಯದು, ಮುಂದೆ ನಡೆ” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೇವಕರನ್ನೂ, ಕುಟುಂಬದವರನ್ನೂ ಕರೆದುಕೊಂಡು ಮುಂದೆ ನಡೆದನು.
23 Nipoñafe’ i tane iabiy ty fangoihoiañe, le nitsake mb’eo ondaty iabio, naho nitsake i torahañe Kidroney ka i mpanjakay vaho songa nitsake, mb’ an-dalam-patrambey añe ondatio.
೨೩ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.
24 Nionjoñe mb’eo t’i Tsadoke rekets’ o nte-Levy iabio, nitarazo i vatam-pañinan’ Añaharey; le napo’ iareo ambane i vatan’ Añaharey vaho nañenga soroñe t’i Abiatare ampara’ te niakatse i rovay ondaty iabio.
೨೪ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ ಯಜ್ಞವನ್ನು ಅರ್ಪಿಸುತ್ತಿದ್ದನು.
25 Aa hoe i mpanjakay amy Tsadoke, Endeso mihereñe mb’an-drova ao o vatan’ Añahareo; fa naho mahaoni-pañisohañe am-pihaino’ Iehovà iraho le hampoli’e mb’eo vaho songa hatoro’e ahy izay naho i anjomba’ey,
೨೫ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.
26 fe naho ty hoe ty hatao’e: Tsy mahafale ahy irehe; le intoy iraho; ee te hanoe’e amako ze satri’e.
೨೬ಒಂದು ವೇಳೆ ಆತನು ‘ನಿನ್ನಲ್ಲಿ ನನಗೆ ಇಷ್ಟವಿಲ್ಲ’ ಎಂದುಕೊಂಡರೆ ಇಗೋ, ನಾನು ಇಲ್ಲಿದ್ದೇನೆ. ಆತನು ತನಗೆ ಸರಿ ಕಂಡಂತೆ ಮಾಡಲಿ” ಎಂದನು.
27 Le hoe ka i mpanjakay amy Tsadoke mpisoroñe: Tsy oni’o hao? Aa le mimpolia mb’amy rovay ao ampanintsiñañe, ihe naho o ana-dahi’o roe mindre ama’oo, i Akimatse ana’o, naho Ionatane ana’ i Abiatare.
೨೭ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು.
28 Inao te hihenekeneke amonto’ i fatrambeiy iraho ampara’ te mivotrak’ amako ze ho taroñe’o amako.
೨೮ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು” ಎಂದು ಹೇಳಿದನು.
29 Aa le nitarazoe’ i Tsadoke naho i Abiatare mb’e Ierosalaime mb’eo i vatan’ Añaharey vaho nitoetse ao.
೨೯ಆಗ ಚಾದೋಕನೂ ಮತ್ತು ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗಿ ಅಲ್ಲೇ ವಾಸ ಮಾಡಿದರು.
30 Nionjomb’ amy fitroara’ i Vohits’ Olivey mb’eo t’i Davide nirovetse amy fiañambonea’ey mb’eo; nisaroñe ka ty añambone’e naho nañavelo tsy aman-kana; songa nisaron-doha ondaty nindre ama’eo, aa le nitroatse, sindre nangololoike am-pionjonañe mb’eo.
೩೦ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.
31 Teo ty nitalily amy Davide ty hoe: Mpiamo mpikilily miharo amy Absalomeo t’i Akitofele. Le hoe t’i Davide: O ry Iehovà, mihalaly ama’o, ehe te hafote’o ho hagegeañe ty tolo-keve’ i Akitofele.
೩೧ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.
32 Ie amy zao, fa an-dengo’ i fitroarañey t’i Davide, amy fitalahoañe aman’ Añaharey, le ingo, nifanalaka ama’e eo t’i Kosày nte-Ereke, niriatse iaby ty saro’e, naho deboke ty añambone’e eo.
೩೨ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು.
33 Le hoe t’i Davide ama’e: Aa naho mindre mitsak’ amako irehe, le ho entam-bey amako;
೩೩ಅರಸನು ಅವನಿಗೆ, “ನೀನು ನನ್ನ ಸಂಗಡ ಬರುವುದಾದರೆ ನನಗೆ ಹೊರೆಯಾಗಿರುವೆ.
34 f’ie mibalike mb’amy rovay ao, vaho manao ty hoe amy Absalome, Ho mpitoro’o iraho, ry mpanjaka, hambañe amy nitoroñako aman-drae’o taoloy ty hitoroñako azo. Ihe amy zay ro hamaoke ty tolo-keve’ i Akitofele.
೩೪ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ಅರಸನೇ, ‘ನಾನು ನಿನ್ನ ಸೇವಕನು; ಈ ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಆಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು.
35 Aa vaho tsy hindre ama’o ka t’i Tsadoke naho i Abiatare mpisoroñe? Aa le ze janji’o añ’anjomba’ i mpanjakay, ro talilie’o amy Tsadoke naho i Abiatare mpisoroñe.
೩೫ಅಲ್ಲಿ ನಿನ್ನ ಸಂಗಡ ಚಾದೋಕ್ ಮತ್ತು ಎಬ್ಯಾತಾರನೂ ಇರುತ್ತಾರಲ್ಲಾ. ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ.
36 Ingo te mindre am’ iereo i ana-dahi’ iareo roe rey i Akimatse ana’ i Tsadoke naho Ionatane ana’ i Abiatare; ie ro hañitrifa’o amako ze he’e janjiñe’o.
೩೬ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು” ಎಂದು ಹೇಳಿ ಅವನನ್ನು ಕಳುಹಿಸಿದನು.
37 Aa le niheo mb’ an-drova ao t’i Kosay rañe’ i Davide te antitotse himoake an-drova ao t’i Absalome.
೩೭ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಯೆರೂಸಲೇಮ್ ಪಟ್ಟಣಕ್ಕೆ ಬಂದನು.