< Eksodosy 16 >
1 Ami’ty andro fahafolo lime ambi’ i volam-paha-roe niavota’ iareo an-tane Mitsraimey, le nañavelo boak’ Elime ty valobohò’ Israele vaho nivotrak’ am-patrambei’ i Sine añivo’ i Elime naho i Sinày.
೧ಇಸ್ರಾಯೇಲರ ಸಮೂಹವೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಎಲೀಮಿಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನ್ ಎಂಬ ಮರುಭೂಮಿಗೆ ಬಂದರು.
2 Nitoreo amy Mosè naho i Aharone am-patrambey ao i valobohò’ Israeley;
೨ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು.
3 le nanoa’ o ana’ Israeleo ty hoe, Hamake te navetram-pità’ Iehovà an-tane Mitsraime ao, ie nitoboke marine’ o valañen-kenao vaho nikama mahakama ampara’ te nietsake; fe nasese’o ampatrambey atoy ty fivoribey toy ho zamane’o an-kasalikoañe.
೩ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.
4 Le hoe t’Iehovà amy Mosè, Ingo, hampikojojoahako mahakama boak’ andikerañe añe vaho hiavotse mb’eo boak’ andro ondatio hanontoñe i tsaraeñey, ze mahatsàke i àndroy, hitsohako iareo, ke hañaveloa’ iareo i Hake natolokoy ke ts’ie.
೪ಆಗ ಯೆಹೋವನು ಮೋಶೆಗೆ, “ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ.
5 Ie amy andro fah’ eneñey le halankañe’ iereo o natonto’eo, fa ho indroe’ty famoria’ iareo boak’ andro.
೫ಆರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಮಾಡುವಾಗ ಅದು ಪ್ರತಿದಿನದಲ್ಲಿ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವುದು” ಎಂದು ಹೇಳಿದನು.
6 Aa le hoe t’i Mosè naho i Aharone amo hene ana’ Israeleo, Ho fohi’ areo hariva te Iehovà ty nañavotse anahareo an-tane Mitsraimey,
೬ಮೋಶೆ ಮತ್ತು ಆರೋನರು ಇಸ್ರಾಯೇಲರಿಗೆ, “ನಿಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾತನು ಯೆಹೋವನೇ ಎಂಬುದು ಇಂದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವುದು.
7 le ie maraindray ho isa’ areo ty enge’ Iehovà, fa jinanji’e ty fitoreo’ areo am’ Iehovà. Aa inon-jahay te itoreova’ areo?
೭ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.
8 Le hoe t’i Mosè, hanjotsoa’ Iehovà hena ho kamae’ areo te hariva naho mahakama mahaanjañe te maraindraiñe, amy te janji’ Iehovà ty fimenomeno’ areo te miñeoñeoñe—fa inon-jahay? Tsy ama’ay ty fiñeoñeo’ areo fa am’ Iehovà.
೮ಆಗ ಮೋಶೆ, “ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ” ಎಂದನು.
9 Le hoe t’i Mosè amy Aharone, Saontsio o valobohò’ Israeleo, Miharinea am’ Iehovà, fa jinanji’e ty fitoreo’ areo.
೯ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು.
10 Aa naho nilañoñe amy valobohò’ Israeley t’i Aharone, ie nitolike mb’ ampatrambey eñe, ingo, niboak’ amy rahoñey ty enge’ Iehovà.
೧೦ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.
11 Nitsara amy Mosè t’Iehovà nanao ty hoe,
೧೧ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
12 Fa tsinanoko ty fitoreova’ o ana’ Israeleo; aa le taroño am’ iereo ty hoe, hikama hena iereo te hariva, naho ho ànja-mahakama iereo te maraindray vaho hapota’ areo te Izaho Iehovà Andrianañahare’ areo.
೧೨“ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.
13 Ie amy harivay, nionjom-b’eo o hatrakatrakeo nañatseke i tobey; le ie maraindraiñe hoe nizotsoan-jono ty añ’ariari’ i tobey.
೧೩ಸಾಯಂಕಾಲವಾಗುತ್ತಲೇ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ತುಂಬಿಕೊಂಡವು. ಅದಲ್ಲದೆ ಹೊತ್ತಾರೆಯಲ್ಲಿ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.
14 Ie nionjoñe i zonoy, le ingo ty raha bory nilamak’ am-patrambey ey, hoe sisi’e, matify hoe tihin-tà an-tane eo.
೧೪ಆ ಮಂಜು ಕರಗಿ ಹೋದ ಮೇಲೆ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು.
15 Ie niisa’ o ana’ Israeleo i raha zay, le hoe ty nifanoiña’ iereo, Ino zao? Amy t’ie nahaalik’ iareo. Le hoe t’i Mosè am’ iereo, Ie ty mahakama nazotso’ Iehovà ama’ areo ho kamaeñe.
೧೫ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.
16 Inao ty nandilia’ Iehovà: Atontono ty hikama’areo, sindre omere raike, ty ami’ty ia’ ondati’o, sindre hangalake ty mahaeneñe.
೧೬ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನೆಂದರೆ: ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಮೂರು ಸೇರಿನಂತೆ ತನ್ನ ಡೇರೆಯವರಿಗಾಗಿ ಕೂಡಿಸಿಕೊಳ್ಳಲಿ. ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಾಕಾರ ನೀವು ಕೂಡಿಸಿಕೊಳ್ಳಿರಿ” ಎಂದು ಹೇಳಿದನು.
17 Nanoe’ o ana’ Israeleo izay, le namory, teo ty nanontoñe maro, teo ty nanontoñe kede.
೧೭ಇಸ್ರಾಯೇಲರು ಹಾಗೆಯೇ ಮಾಡಿದರು. ಕೆಲವರು ಹೆಚ್ಚಾಗಿ, ಕೆಲವರು ಕಡಿಮೆಯಾಗಿ ಕೂಡಿಸಿಕೊಂಡರು.
18 Aa ie nikapoahe’ iareo ami’ty omere, le tsy nanisa ty nanontoñe maro vaho tsy niereñe ty nanontoñe potrapotra’e, songa nanontoñe ty nahaeneñe aze.
೧೮ಅವರು ಅದನ್ನು ಸೇರಿನಿಂದ ಅಳತೆಮಾಡಿದರು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ. ಪ್ರತಿಯೊಬ್ಬನೂ ತನ್ನ ಭೋಜನಕ್ಕೆ ಸರಿಯಾಗುವಷ್ಟನ್ನು ಕೂಡಿಸಿಕೊಂಡಿದ್ದನು.
19 Le hoe ty nanoa’ i Mosè, Asoao tsy hanisaeñe ty maraiñe.
೧೯ಅದಲ್ಲದೆ ಮೋಶೆ ಅವರಿಗೆ, “ಇದನ್ನು ಯಾರೂ ಮರು ದಿನದವರೆಗೆ ಇಟ್ಟುಕೊಳ್ಳಬಾರದು” ಎಂದು ಹೇಳಿದನು.
20 Fe tsy hinao’ iareo t’i Mosè, teo ty nanisa ami’ty maraiñe, le nipoahan’ oletse vaho nitrotròtse. Aa le niviñera’ i Mosè.
೨೦ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳದೆ, ಅದರಲ್ಲಿ ಸ್ವಲ್ಪವನ್ನು ಮರು ದಿನದವರೆಗೆ ಇಟ್ಟುಕೊಂಡಾಗ ಅದು ಹುಳ ಬಿದ್ದು ಹೊಲಸುವಾಸನೆ ಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಕೋಪಗೊಂಡನು.
21 Boa-maraiñe ty natonto’ iareo, ty amo falie mikamao; ie nipisañe ty àndro le nimosaoñe.
೨೧ಜನರು ಪ್ರತಿದಿನ ಮುಂಜಾನೆಯಲ್ಲಿ ತಮ್ಮ ಭೋಜನಕ್ಕೆ ತಕ್ಕಷ್ಟು ಕೂಡಿಸಿಕೊಂಡರು. ಬಿಸಿಲು ಹೆಚ್ಚಾದಾಗ ಅದು ಕರಗಿಹೋಗುತ್ತಿತ್ತು.
22 Fa ami’ty andro fah’ eneñe, songa nitoha indroe’ ty mahakama’e, sindre omere roe vaho hene niheo mb’eo o androanavi’ i fivoribeiio nitalily amy Mosè,
೨೨ಆರನೆಯ ದಿನ ಎರಡರಷ್ಟು ಆಹಾರವು, ಅಂದರೆ ಒಬ್ಬೊಬ್ಬನಿಗೆ ಎರಡೆರಡು ಸೇರಿನಂತೆ ಆರಿಸಿ ತುಂಬಿಟ್ಟುಕೊಂಡಿದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು.
23 le hoe re am’ iereo, Hoe ty nitsarae’ Iehovà: Fitofàñe ty hamaray, Sabata masiñe am’ Iehovà; atoñaho ze hatoña’ areo naho ahandrò ze ahandroeñe te anito, le amiho ho ami’ty maraiñe.
೨೩ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.
24 Aa le namike ho ami’ty maraiñe, amy nitoroa’ i Mosèy fa tsy nimantiñe vaho tsy aman-oletse.
೨೪ಮೋಶೆ ಆಜ್ಞಾಪಿಸಿದಂತೆ ಅವರು ಮರು ದಿನದವರೆಗೆ ಅದನ್ನು ಇಟ್ಟುಕೊಂಡರು. ಆದರೆ ಅದು ಕೆಟ್ಟು ಹೋಗಿರಲಿಲ್ಲ, ಹುಳ ಬೀಳಲ್ಲೂ ಇಲ್ಲ.
25 Hoe t’i Mosè, Mikama anito, fa Fitofañe am’ Iehovà ty androany vaho tsy ho zoeñe an-kivok’ añe izay te anito.
೨೫ಆಗ ಮೋಶೆ ಅವರಿಗೆ, “ಈ ಹೊತ್ತು ಅದನ್ನು ಊಟ ಮಾಡಿರಿ. ಈ ದಿನವು ಯೆಹೋವನ ಸಬ್ಬತ್ ದಿನವಾಗಿರುವುದರಿಂದ ಈ ದಿನ ಅದು ಹೊಲದಲ್ಲಿ ಕಾಣಿಸಿಕೊಳ್ಳುವುದಿಲ್ಲ.
26 Eneñ’ andro ty hanontona’ areo, f’ie tsy ho tendreke ami’ty andro fahafito, ie Sabata.
೨೬ಆರು ದಿನ ಅದನ್ನು ಕೂಡಿಸಿಡಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವುದರಿಂದ ಅದು ದೊರೆಯುವುದಿಲ್ಲ” ಎಂದು ಹೇಳಿದನು.
27 Ie amy andro fahafitoy, teo t’indaty nitoha fe tsy naharendreke.
೨೭ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ.
28 Hoe t’Iehovà amy Mosè, Pak’ ombia ty mbe hifoneña’ areo tsy hañorike o lilikoo naho i Fetsekoy?
೨೮ಆಗ ಯೆಹೋವನು ಮೋಶೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?
29 Inao, te natolo’ Iehovà anahareo ty Sabotse; izay ty anjotsoa’e amy andro fahaeneñey ty mofo mahatsàk’ andro roe. Songa midok’ an-toe’e, Ko apo’o ndra iaia hiavotse amy toe’e ami’ty andro faha-fito.
೨೯ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು” ಎಂದು ಹೇಳಿದನು.
30 Aa le songa nitofa ami’ty andro faha-fito ondatio.
೩೦ಆದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ವಿಶ್ರಮಿಸಿಕೊಂಡರು.
31 Natao’ o ana’ Israeleo màne i mofoy. Nifoty hoe kabaro maike naho hoe mofo pisake nanoeñe an-tantele.
೩೧ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.
32 Hoe t’i Mosè, Zao ty linili’ Iehovà, Añatsafo omere raik’ ama’e, hahaja ho amo tarira’areo mifandimbeo, hahaoniña’ iereo i mahakama namahanako anahareo am-patrambey ao t’ie nampiengàko an-tane Mitsraimey.
೩೨ಮೋಶೆಯು ಜನರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದೇ, ‘ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’” ಎಂದು ಹೇಳಿದನು.
33 Le hoe t’i Mosè amy Aharone, Andrambeso korojy le agodoño ao ty màne mahatsàke ty omere vaho ahajao añatrefa’ Iehovà ho fihaja amo tarira’areoo.
೩೩ಆದಕಾರಣ ಮೋಶೆಯು ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು” ಎಂದು ಹೇಳಿದನು.
34 Amy nandilia’ Iehovà i Mosèy, ty nampipoha’ i Aharone aze aolo’ i fañinay ho fihaja.
೩೪ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ, ಆರೋನನು ಆಜ್ಞಾಶಾಸನ ಮಂಜೂಷದ ಪಕ್ಕದಲ್ಲಿ ಅದನ್ನು ಇರಿಸಿದನು.
35 Nikama màne efapolo taoñe o ana’ Israeleo, ampara’ te nivotrak’ an-tane fimoneñañe añe; nikama màne ampara’ t’ie nitotsake añ’efetane Kanàne ao.
೩೫ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.
36 Toe fahafolo ty efà ty omere.
೩೬ಓಮೆರ್ ಎಂಬುದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಒಂದು ಅಳತೆಯ ಮಾಪನವಾಗಿದೆ.