< Jeremia 26 >
1 Ie tam-baloham-pifehea’ Iehoiakime ana’ Iosia, mpanjaka’ Iehodà, le niheo eo ty tsara’ Iehovà manao ty hoe:
೧ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
2 Hoe t’Iehovà: Mijohaña an-kiririsan’anjomba’Iehovà eo vaho tseizo amo rova’ Iehodà iaby miheo mb’eo hitalaho añ’anjomba’ Iehovào, ze hene entañe lilieko azo hitaroñañe; leo tsara raike tsy hapo’o.
೨“ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.
3 Hera hañaoñe iereo, songa hiamboho amo sata rati’eo; soa te hihahak’ amy hekoheko nisafirieko hanoeñe am’ iereo ty amo haloloam-pitoloña’ iareooy.
೩ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
4 Le hoe ty hanoa’o: Hoe t’Iehovà: Aa naho tsy mijanjiñe ahy, hañavelo amy Hàke tinaroko añatrefa’ areoy,
೪ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,
5 hitsendreñe i saontsi’ o mpitoky mpitoroko niraheko ama’ areo, nampañampitsoeñe naho niraheñeo, fe tsy hinao’ areoy;
೫ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,
6 aa le hampanahafeko amy Silò ty anjomba toy, vaho hanoeko fatse amy ze kila fifeheañe an-tane atoy ty rova toy.
೬ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.
7 Jinanji’ o mpisoroñeo naho o mpitokio vaho ondaty iabio i tsara nisaontsie’ Iirmeà añ’anjomba’ Iehovày.
೭ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ ಕೇಳಿದರು.
8 Ie fonga nihenefa’ Iirmeà taroñe i nandilia’ Iehovà aze ho saontsieñe am’ ondaty iabio, le namihiñe aze o mpisoroñeo naho o mpitokio vaho ze hene ondaty, nanao ty hoe: Toe havetrake irehe.
೮ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!
9 Ino ty nitokie’o amy tahina’ Iehovày ty hoe: Hanahake i Silo ty anjomba toy, vaho hangoakoake ty rova toy, tsy ho amam-pimoneñe? Le hene niropak’ am’ Iieremea ondaty añ’anjomba’ Iehovào.
೯ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.
10 Ie nahajanjiñe i hoe zay o roandria’ Iehodào, le niakatse ty anjomba’ i mpanjakay vaho nimoak’ añ’ anjomba’ Iehovà ao; niambesatse ami’ty fizilihañe amy lalam-bey vao’ i anjomba’ Iehovày eo.
೧೦ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.
11 Le nisaontsy amo roandriañeo naho amo hene’ ondatio o mpisoroñeo naho o mpitokio, nanao ty hoe: Mañeva havetrake t’indaty tia; amy te nitokie’e raty ty rova toy, i jinanjin-dravembia’ areoy.
೧೧ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.
12 Le nitaroñe’ Iirmeà o roandriañeo naho ze hene’ ondaty eo nanao ty hoe: Nirahe’ Iehovà iraho hamàtse ty anjomba toy naho ty rova toy amy tsara jinanji’ areo iabiy.
೧೨ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.
13 Avantaño arè o sata’ areoo naho o fitoloña’ areoo, vaho haoño ty fiarañanaña’ Iehovà Andrianañahare’ areo; le hihahak’ amy hankàñe nitseiza’e t’Iehovà.
೧೩ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
14 Fa naho izaho, heheke te am-pità’ areo; ano amako ze mete naho mahity am-pihaino’ areo.
೧೪ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವುದನ್ನು ನನಗೆ ಮಾಡಿರಿ.
15 Fe mahafohina an-katò te ie añohofa’ areo loza, le ho lio-màliñe ama’ areo naho an-drova atoy vaho amo mpimone’eo; fa toe nirahe’ Iehovà ama’ areo iraho hivolañe i hene tsara zay an-dravembia’ areo ao.
೧೫ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.
16 Aa le hoe o roandriañeo naho ze hene’ ondaty amo mpisoroñeo naho amo mpitokio: Tsy mañeva ho vonoeñe ondatio; amy te nitaroñe aman-tika ami’ty tahina’Iehovà Andrianañaharen-tika.
೧೬ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.
17 Niongak’ amy zao ty ila’ o androanavi’ i taneio vaho nisaontsy amy fivori’ ondatioy nanao ty hoe:
೧೭ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು,
18 Nitoky tañ’ andro’ i Kizkià mpanjaka’ Iehodà t’i Mika nte-Morasete vaho nitaroñe ty hoe amy ze hene ondati’ Iehodà: Hoe t’Iehovà’ i Màroy: Ho rokafeñe hoe hatsake ty Tsione, naho ho kivotrivotry t’Ierosalaime, vaho hanahake o ankaboañe añ’alao ty vohi’ i anjombay
೧೮“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ
19 Nañoho-doza ama’e hao ty Kizkia mpanjaka’ Iehodà naho Iehodà iaby? Te mone nañeveñe am’ Iehovà nihalaly ty fañisoha’ Iehovà, vaho nihahak’ amy fe-hohatse nitsarae’e am’ iereoy t’Iehovà? Aa kera hampivotrahan-tika hankàñe o fiaintikañeo.
೧೯ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.
20 Teo ka t’indaty nitoky ami’ty tahina’ Iehovà, i Orià ana’ i Semaia, boak’e Kiriate Iearime; le nitokie’e fatse ty rova toy naho ty tane toy manahake i sinaontsi’ Iirmeà abikey;
೨೦ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.
21 fa ie nahatsanoñe o enta’eo t’Iehoiakime mpanjaka naho o fanalolahi’e iabio, naho o roandria’e iabio, le nipay hañoho doza ama’e i mpanjakay; fe nahajanjiñe izay t’i Oria le nihembañe vaho nivoratsake mb’e Mitsraime mb’ eo;
೨೧ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.
22 le nampihitrife’ Iehoiakime mb’e Mitsraime mb’eo t’ indaty; i Elnatane ana’ i Akbore rekets’ ondaty tsy ampeampeo ty nimb’e Mitsraime añe;
೨೨ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
23 le nendese’ iereo boake Mitsraime añe t’i Orià naho nasese’ iareo am’ Iehoiakime mpanjaka; zinevo’e am-pibara vaho navokovoko’e an-kibori’ o ana’ ondatio.
೨೩ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
24 Fe nañimba Iirmeà ty fità’ i Ahikame ana’ i Safane, tsy nitolorañe am-pità’ondatio ho vonoeñe.
೨೪ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.