< Joba 35 >

1 Le hoe ty natovo’ i Eliho:
ಆ ಮೇಲೆ ಎಲೀಹು ಮತ್ತೆ ಇಂತೆಂದನು,
2 Atao’o mahity hao i nanoe’o ty hoe, Izaho ro vantañe te aman’ Añahare.
“ನೀತಿಯಿಂದ ನನಗೇನು ಪ್ರಯೋಜನವಾಯಿತು? ಪಾಪಮಾಡದೆ ಇದ್ದುದರಿಂದ ನನಗಾದ ಹೆಚ್ಚು ಲಾಭವೇನು?
3 Fa hoe irehe, Inoñe ty ho tombo’e ho azo? Ino ty ho tambeko mandikoatse te tsy nandilatse?
ಈ ರೀತಿ ನೀನು ನುಡಿಯುವುದು ನ್ಯಾಯವೆಂದು ನೀನು ಊಹಿಸಿಕೊಂಡು, ನನ್ನ ನೀತಿಯು ದೇವರ ನೀತಿಗಿಂತ ಹೆಚ್ಚೆಂದುಕೊಳ್ಳುತ್ತಿಯಾ?
4 Hanoiñe azo naho o rañe’o mindre ama’oo iraho.
ನಾನು ನಿನಗೂ, ನಿನ್ನ ಜೊತೆಗಾರರಿಗೂ ಕೂಡ ಉತ್ತರಕೊಡುವೆನು.
5 Mitalakesa mb’andikerañe ey vaho Mahaisaha; Heheke o rahoñeo, ambòne’o iereo.
ಕಣ್ಣೆತ್ತಿ ಗಗನಮಂಡಲವನ್ನು ನೋಡು, ಮೇಘಮಾರ್ಗವನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ!
6 Ihe mandilatse, Mijoy aze hao? Ie bey hakeo, Inoñe ty anoe’o ama’e?
ನೀನು ಪಾಪಮಾಡಿದ್ದರೆ ಆತನಿಗೆ ಏನು ಮಾಡಿದಂತಾಯಿತು? ನಿನ್ನ ದ್ರೋಹಗಳು ಹೆಚ್ಚಾಗಿದ್ದರೂ ಆತನಿಗೇನು?
7 Ie vantan-drehe, ino ty atolo’o aze, ke ino ty rambese’e am-pità’o?
ನೀನು ನೀತಿವಂತನಾಗಿದ್ದರೆ ಆತನಿಗೇನು ಕೊಟ್ಟಂತಾಯಿತು? ನಿನ್ನ ಕೈಯಿಂದ ಆತನಿಗೆ ಲಾಭವೇನು?
8 Ho ama’ ondaty manahak’ azo ty hatsivokara’o naho amo ana’ ondatio ty havañona’o.
ನಿನ್ನ ಕೆಟ್ಟತನದಿಂದ ನಿನ್ನಂಥ ಮನುಷ್ಯನಿಗೇ ನಷ್ಟವಾದೀತು, ನಿನ್ನ ನೀತಿಯಿಂದ ನರಜನ್ಮದವನಿಗೇನು ಲಾಭ ಸಿಕ್ಕಬಹುದು.
9 O hamarom-pamorekekeañeo ty itoreova’ iareo, ty sira maoza’ i maroy ty ikaiha’iareo,
ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ, ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರು.
10 fe tsy eo ty manao: Aia t’i Andrianamboatse ahy, i Mpañomey sabo an-kaleñey,
೧೦‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ? ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ.
11 i mañòke raha maro amantika te amo bibi’ ty tane toioy, vaho ampahihire’e ambone’ o voron-tiokeo?
೧೧ಆತನು ಕಾಡು ಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ, ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ’ ಎಂದು ಹೇಳುವುದೇ ಇಲ್ಲ.
12 Eo ty mikaike, f’ie tsy manoiñe ty amy firengevoha’ ondaty raty tserekeoy.
೧೨ಇಂಥಾ ಸಂದರ್ಭದಲ್ಲಿ ಅವರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುವರು, ಆದರೂ ಆತನು ಉತ್ತರವನ್ನು ದಯಪಾಲಿಸುವುದಿಲ್ಲ.
13 Toe tsy janjin’ Añahare ty raha kafoake; tsy haoñe’ i El-Sadai,
೧೩ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ.
14 Antsake t’ie manao te tsy mahaoniñe aze; aolo’e eo ty enta’o, aa le liñiso;
೧೪ಹೀಗಿರಲು ಆತನು ಕಾಣುವುದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಇದೆ, ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳುತ್ತಾನೆಯೇ?
15 Ie henaneo, mbe tsy nitilihe’e an-kaviñera’e, tsy loho nihaoñe’e o fandilarañeo.
೧೫ಆತನು ದುಷ್ಟರ ಮೇಲೆ ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವುದಿಲ್ಲವೆಂದು,
16 Aa le evoñe ty aakam-palie’ Iobe; ampitomboa’e lañonañe tsy aman-kilala.
೧೬ಯೋಬನು ಸುಮ್ಮನೆ ಬಾಯಿ ತೆರೆಯುತ್ತಾನೆ, ಯಾವ ತಿಳಿವಳಿಕೆಯೂ ಇಲ್ಲದೆ ಬಹಳ ಮಾತನಾಡುತ್ತಾನೆ.”

< Joba 35 >