< Nomery 8 >
1 Le hoe ty nitsara’ Iehovà amy Mosè:
೧ಯೆಹೋವನು ಮೋಶೆಯ ಸಂಗಡ ಮಾತನಾಡಿ, ಹೇಳಿದ್ದೇನೆಂದರೆ:
2 Saontsio amy Aharone vaho ano ty hoe: Ie hañajary o jiroo, le ampañazavao mb’aolo mb’eo i fitàn-jiroy i jiro fito rey.
೨“ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದನು.
3 Le nanoe’ i Aharone izay; nalaha’e i jiro rey hañazava’e mañaolo i fitàn-jiroy amy nandilia’ Iehovà i Mosè.
೩ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಆ ದೀಪಗಳನ್ನು ಕ್ರಮವಾಗಿ ಇಟ್ಟನು.
4 Inao ty nanoeñe i fitàn-jiroy: volamena pinepeke i taho’ey pak’ amboñe’e eo; toe satam-pipepehañe, amy sare natoro’ Iehovà amy Mosèy, izay ty nanoe’e i fitàn-jiroy.
೪ದೀಪಸ್ತಂಭವೂ, ಅದರ ಬುಡದ ಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದನು.
5 Le hoe ty nitsara’ Iehovà amy Mosè:
೫ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
6 Aviho amo ana’ Israeleo o nte-Levio vaho efero.
೬“ನೀನು ಇಸ್ರಾಯೇಲರಿಂದ ಲೇವಿಯರನ್ನು ಪ್ರತ್ಯೇಕಿಸಿ ಶುದ್ಧೀಕರಿಸಿಬೇಕು.
7 Zao ty hañefera’o iareo: amitsezo am’ iereo ty ranon’ enga-kakeo, le ampiozàñem-piharatse ty fañòva’ iareo iaby, naho ampanasao sikiñe vaho ampiliovo.
೭ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ ಕ್ಷೌರಮಾಡಿಸಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.
8 Le ampangalao iareo ty bania rekets’ i enga-mahakama’ey, i mona linaro menakey, vaho ampangalao bania raike ho engan-kakeo.
೮ತರುವಾಯ ಅವರು ಸರ್ವಾಂಗಹೊಮಕ್ಕಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯ ಅಂದರೆ ಎಣ್ಣೆ ಬೆರೆಸಿದ ಗೋದಿಯ ಹಿಟ್ಟನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಹೋರಿಯನ್ನು ತೆಗೆದುಕೊಳ್ಳಬೇಕು.
9 Le aseseo mb’ añatrefa’ i kibohom-pamantañañey mb’eo o nte-Levio vaho atontono ty valobohò’ Israele;
೯ಆಗ ನೀನು ಲೇವಿಯರನ್ನು ದೇವದರ್ಶನ ಗುಡಾರದ ಮುಂದೆ ಕರೆದುಕೊಂಡು ಬಂದು ಇಸ್ರಾಯೇಲರ ಸಮೂಹವನ್ನೆಲ್ಲಾ ಕೂಡಿಸಬೇಕು.
10 Aa naho fa navori’o añatrefa’ Iehovà o nte-Levio le hanampe fitàñe amo nte-Levio o ana’ Israeleo;
೧೦ಲೇವಿಯರನ್ನು ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
11 le hengae’ i Aharone ho engan-kelahela am’ Iehovà o nte-Levy boak’ amo ana’ Israeleoo hitoroñe Iehovà.
೧೧ಲೇವಿಯರು ಯೆಹೋವನ ಸೇವಾಕಾರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲರ ನಿಮಿತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.
12 Le hanampeza’ o nte-Levio fitàñe i bania rey, naho hengae’o ho engan-kakeo ty raike vaho ho soroñañe am’ Iehovà ty raike, hijebaña’o o nte-Levio.
೧೨“ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ನಂತರ ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ, ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಬೇಕು. ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.
13 Aa le ajohaño añatrefa’ i Aharone naho o ana’eo o nte-Levio vaho engao am’ Iehovà ho engan-kelahela.
೧೩ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು ನಿಲ್ಲಿಸಿ ಅವರನ್ನು ನೈವೇದ್ಯದಂತೆ ಯೆಹೋವನಿಗೆ ಸಮರ್ಪಿಸಬೇಕು.
14 Izay ty hañambaha’o amo ana’ Israeleo o nte-Levio le ho ahiko o nte-Levio.
೧೪ಹೀಗೆ ನೀನು ಲೇವಿಯರನ್ನು ಇಸ್ರಾಯೇಲರಿಂದ ಪ್ರತ್ಯೇಕಿಸಿದಾಗ ಅವರು ನನ್ನ ಸೊತ್ತಾಗುವರು.
15 Henane zay, himoake hitoroñe amy kibohom-pamantañañey o nte-Levio, ie fa neferañe naho nengaeñe ho engan-kelahela.
೧೫“ಅದಾದ ನಂತರ ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಬೇಕು.
16 Songa natolotse ahiko boak’ amo ana’ Israeleo; fa rinambeko ho amako ho solo’ ze hene manoka-koviñe; ze fonga tañoloñoloñan’ ana’ Israele.
೧೬ಇಸ್ರಾಯೇಲರಲ್ಲಿ ಇವರು ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಇಸ್ರಾಯೇಲರಲ್ಲಿ ಚೊಚ್ಚಲ ಮಕ್ಕಳಿಗೆ ಬದಲಾಗಿ ನಾನು ಲೇವಿಯರನ್ನು ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.
17 Toe anjarako ze hene valohan’ ana’ o ana’ Israeleo, ondaty naho hare; tamy andro nipaohako ze fonga valohan’ ana’ i Mitsraimey ty nañambahako iareo ho ahy.
೧೭ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರೂ ಪಶುಗಳೂ ಎಲ್ಲಾ ನನ್ನ ಸ್ವಂತ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದುದನ್ನು ನಾನು ಸಂಹರಿಸಿದಾಗ ಇಸ್ರಾಯೇಲರ ಚೊಚ್ಚಲಾದುದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನು.
18 Le rinambeko ho soloe’ o nte-Levio o tañoloñoloñan’ ana’ Israeleo;
೧೮ನಾನು ಇಸ್ರಾಯೇಲರ ಚೊಚ್ಚಲಮಕ್ಕಳಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ.
19 vaho natoloko amy Aharone naho amo ana’eo aivo o ana’ Israeleo ho ravoravo o nte-Levio, hitoloñe ami’ty fitoloña’ o ana’ Israeleo amy kibohom-pamantañañey, naho hanao fijebañañe ho amo ana’ Israeleo tsy mone hiboak’ amo ana’ Israeleo ty angorosy naho harinea’ o ana’ Israeleo i efe-miavakey.
೧೯ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”
20 Izay ty nanoe’ i Mosè naho i Aharone vaho ty valobohò’ Israele amo nte-Levio; ze hene nandilia’ Iehovà i Mosè ty amo nte-Levio ty nanoe’ o ana’ Israeleo.
೨೦ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ, ಆರೋನರೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು.
21 Le nañalio vatañe o nte-Levio naho nanasa’ o siki’eo iareo, naho nengae’ i Aharone am’ Iehovà ho ravoravo miavake, vaho nanao fijebañañe hañaliova’e iareo.
೨೧ಲೇವಿಯರು ತಮ್ಮನ್ನು ಶುದ್ಧಪಡಿಸಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ, ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
22 Ie henane zay nimoak’ an-kibohom-pamantañañe ao o nte-Levio hitoloñe añatrefa’ i Aharone naho o ana’eo; i nandilia’ Iehovà amy Mosè ty amo nte-Levio ty nanoañe am’iareo.
೨೨ಆ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ಆರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
23 Le hoe ty nitsara’ Iehovà amy Mosè:
೨೩ಪುನಃ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
24 Inao ty amo nte-Levio: ie roapolo-taoñe lim’ amby mañambone ro hizilike hitoloñe an-kibohom-pamantañañe ao;
೨೪“ಲೇವಿಯರು ಅನುಸರಿಸಬೇಕಾದ ಪದ್ಧತಿ ಏನೆಂದರೆ: ಇಪ್ಪತ್ತೈದು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರು ದೇವದರ್ಶನ ಗುಡಾರದ ಸೇವಮಂಡಳಿಗೆ ಸೇರಬೇಕು.
25 ie limampolo taoñe ro hitroatse amo fitoroña’eo, le tsy hitoloñe ao ka.
೨೫ಅವರು ಐವತ್ತು ವರ್ಷದವರಾದ ನಂತರ ಆ ಮಂಡಳಿಯನ್ನು ಬಿಟ್ಟು ದೇವಾಲಯದ ಸೇವಾಕಾರ್ಯದಿಂದ ಬಿಡುಗಡೆಯಾಗುವರು.
26 F’ie mete hañimba o rahalahi’eo an-kibohom-pamantañañe ao, hisary o tolon-draha’eo fe tsy hitromake. Izay ty hanoe’o amo nte-Levio amo fitoloña’eo.
೨೬ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನ ಗುಡಾರವನ್ನು ಕಾಯುವ ಸೇವೆಯನ್ನು ಮಾಡಬಹುದೇ ಹೊರತು ಅವರಿಂದ ಬೇರೆ ಸೇವಾಕಾರ್ಯವನ್ನು ಮಾಡಿಸಬಾರದು. ಲೇವಿಯರು ಕಾಪಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ಅವರಿಗೆ ನೇಮಿಸಬೇಕು.”