< Salamo 25 >

1 Ihe, ry Iehovà! ro añonjonako fiaiñe.
ದಾವೀದನ ಕೀರ್ತನೆ. ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
2 O ry Andrianañahareko, ihe ro fiatoako, ko anga’o ho salaren-draho; ko apo’o ho giohe’ o rafelahikoo.
ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.
3 Eka ndra ia ia mitamà azo tsy hiolitsolitse; fe hilolidolitse o mamañahy tsy aman-dengo’eo.
ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.
4 Ampahafohino ahy o lala’oo, ry Iehovà, anaro ahy o oloñolo’oo.
ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು.
5 Iaolò ami’ty hatò’o, le anaro; Ihe Andrianañaharem- Pandrombahañe ahy; Ihe ro fitamàko lomoñandro.
ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.
6 Tiahio ry Iehovà ty fiferenaiña’o naho ty hafatram-pikokokoa’o, ie fa toe haehae.
ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.
7 Ko tiahie’o o ­hakeom-paha-torakoo naho o fiolàkoo, fe tiahio ankalèn’arofo’o, ami’ty hatrentra’o, ry Iehovà,
ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.
8 Soa naho vantañ’arofo t’Iehovà, izay ty anoroa’e o manan-tahiñeo i lalañey.
ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.
9 Iaoloa’e ami’ty hatò o mpirèkeo, vaho anare’e amo sata’eo ty tretram-po.
ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.
10 Songa fiferenaiñañe naho figahiñañe o lala’ Iehovào, amo mpiambeñe i fañina’ey naho o taro’eo.
೧೦ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.
11 Amy tahina’oy, ry Iehovà, apoho o hakeokoo, fa bey.
೧೧ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.
12 Ia ty’ ndaty mañeveñe am’Iehovà? ho toroa’e ty lalan-tsoa ho joboñe’e.
೧೨ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.
13 Hiaiñ’añ’oleñañe ty fiai’e; handova i taney o tarira’eo
೧೩ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು.
14 Avere’ Iehovà o mañeveñe ama’eo; le ampahafohine’e iareo i fañina’ey.
೧೪ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.
15 Mitolike mb’am’ Iehovà nainai’e o masokoo, amy te Ie ro mañakats’ o tombokoo ami’ty harato.
೧೫ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು.
16 Mitoliha amako le iferenaiño, fa mijorìñe naho misotry.
೧೬ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು.
17 Miebotse ty haemberan-troko, afaho amo hasosorakoo.
೧೭ನನ್ನ ಮನೋವ್ಯಥೆಗಳನ್ನು ನಿವಾರಿಸು; ಸಂಕಟಗಳಿಂದ ನನ್ನನ್ನು ಬಿಡಿಸು.
18 Vazohò ty hasotriako naho ty falovoloiako; vaho apoho o hakeokoo.
೧೮ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.
19 Vazoho o rafelahikoo, te maro; heje’ iareo am-palai-mena iraho.
೧೯ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ.
20 Ambeno o fiaikoo, hahao, le ko ado’o ho salareñe, amy te Ihe ro fipalirako.
೨೦ನನ್ನ ಪ್ರಾಣವನ್ನು ಕಾಪಾಡಿ ಉಳಿಸು; ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು.
21 Hañaro ahy o havañonañeo naho o havantañañeo; fa mitamà Azo iraho.
೨೧ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ.
22 Jebaño t’Israele, ry Andrianañahare amo haembera’e iabio
೨೨ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು.

< Salamo 25 >