< Salamo 41 >
1 Haha ty mañaoñe o rarakeo; ie ho votsore’ Iehovà an-tsan-kankàñe.
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.
2 Harova’Iehovà le ho tana’e veloñe naho hatao’e haha amy taney eo, naho tsy apo’e an-tsatrin-tron-drafelahy
೨ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!
3 Ho tohaña’ Iehovà amy tihy tindria’ey; hafote’o ho jangan-dre am-pandream-pisilofa’e eo.
೩ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ.
4 Aa naho izaho, hoe ty asako: ry Iehovà, Atariho, jangaño ty fiaiko, fa nandilarako.
೪ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು” ಅಂದೆನು.
5 Manambaitambaiñ’ ahy o rafelahikoo: ombia t’ie hikoromake, hihomaha’ i añara’ey?
೫ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ.
6 Ie mitilik’ ahy, manao rehan-dremborake; mangoroñe hakeo ama’e ty tro’e; ie miavotse, volañe’e.
೬ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ.
7 Ivesovesoa’ o malaiñe ahy iabio, mikilily joy, ami’ty hoe:
೭ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ.
8 Mipitek’ ama’e ty bilokan-kokolampa; kanao mitsilañe re, tsy hitroatse ka.
೮“ಅವನನ್ನು ಅಸಾಧ್ಯರೋಗ ಹಿಡಿದಿದೆ; ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.
9 Eka, ndra i rañeko nianteherakoy, i nikama i hanekoiy, fa nañonjo tomitse amako.
೯ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.
10 F’Ihe ry Iehovà, iferenaiño, vaho atroaro hamaleako iareo.
೧೦ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು.
11 Zao ty aharendrehako te no’o, t’ie tsy irohafa’ o rafelahikoo.
೧೧ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.
12 Naho izaho, tozañe’o ami’ty havañonako, naho ampañatrefe’o laharañe amako nainai’e.
೧೨ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.
13 Andriañeñe t’Iehovà Andrianañahare’Israele, haehae vaho nainai’e donia. Amena naho Amena.
೧೩ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.