< Korohe 3 >
1 Na, ki te mea kua ara ngatahi koutou me te Karaiti, rapua nga mea o runga, o te wahi e noho mai nei a te Karaiti i te ringa matau o te Atua.
೧ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
2 Kia anga atu to koutou whakaaro ki nga mea o runga, kaua ki nga mea kei te whenua.
೨ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ.
3 Kua mate hoki koutou, a kua oti to koutou ora te huna ki a te Karaiti i roto i te Atua.
೩ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.
4 I te whakakitenga mai o te Karaiti, o to tatou ora, ko reira hoki koutou whakakitea tahitia ai me ia i runga i te kororia.
೪ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.
5 Na, whakamatea o koutou wahi i runga i te whenua; te moe tahae, te poke, te minamina ki te he, te hiahia kino, me te apo, he karakia whakapakoko hoki tena.
೫ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
6 He mea hoki enei e puta mai ai te riri o te Atua ki nga tamariki a te tutu.
೬ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ.
7 I roto hoki koutou i enei mea e haere ana i mua, i a koutou e noho ana i roto i aua mea.
೭ಹಿಂದೆ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿದ್ದು ಅವುಗಳನ್ನು ನಡಿಸುತ್ತಿದ್ದಿರಿ.
8 Tena ko tenei whakarerea enei mea katoa; te aritarita, te riri, te mauahara, te korero kino, te korero whakarihariha, i roto i o koutou mangai.
೮ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.
9 Kaua e teka tetahi ki tetahi, kua unuhia atu hoki i a koutou te tangata tawhito me ana hanga;
೯ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.
10 Kua kakahuria nei te tangata hou, e whakahoutia nei i runga i te matauranga kia rite ki te ahua o tona kaihanga.
೧೦ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.
11 Kei reira kahore he Kariki, he Hurai ranei, he kotinga, he kotingakore ranei, he Tautangata, Haitiana, pononga, he rangatira ranei: engari ko te Karaiti te katoa, i roto ano i te katoa.
೧೧ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.
12 Na, kia rite ki te hunga whiriwhiri a te Atua, ki te hunga tapu e arohaina ana, kakahuria iho hoki te ngakau tohu tangata, te ngawari, te ngakau papaku, te ngakau mahaki, te manawanui;
೧೨ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
13 Kia ata hanga koutou tetahi ki tetahi, me te hohou i te rongo tetahi ki tetahi, ki te mea kei tetahi he take riri ki tetahi: kia rite ki ta te Ariki i hohou nei i te rongo ki a koutou, kia pera ano hoki koutou.
೧೩ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.
14 A hei waho i enei mea katoa uhia ko te aroha, ko te tauhere tika rawa ia.
೧೪ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
15 A waiho ma te rangimarie a te Karaiti te whakahaere tikanga i roto i o koutou ngakau: i karangatia hoki koutou ki tenei i roto i te tinana kotahi; kia whakawhetai hoki koutou.
೧೫ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.
16 Kia noho nui te kupu a te Karaiti i roto i a koutou i runga i te matauranga katoa; me whakaako, me whakatupato tetahi e tetahi ki nga waiata tapu, ki nga himene, ki nga waiata wairua, me te waiata ano ki te Atua i runga i te aroha noa, i roto i o koutou ngakau.
೧೬ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.
17 Ko nga mea katoa hoki e mea ai koutou, ko nga kupu, ko nga mahi ranei, kia meinga katoatia i runga i te ingoa o te Ariki, o Ihu, me te whakawhetai ano ki te Atua, ara ki te Matua, i roto i a ia.
೧೭ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
18 E nga wahine, kia ngohengohe ki a koutou tane ake, kia rite ai ta te Ariki tikanga.
೧೮ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
19 E nga tane, arohaina a koutou wahine, kei kaha hoki te riri ki a ratou.
೧೯ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.
20 E nga tamariki, whakarongo ki o koutou matua i nga mea katoa: he mea pai hoki tenei ki te Ariki.
೨೦ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
21 E nga matua, kei arita noa ki a koutou tamariki, kei ngakaukore ratou.
೨೧ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ.
22 E nga pononga, kia whakarongo ki o koutou rangatira o te wahi ki te kikokiko i nga mea katoa: kaua hei ta te kanohi mahi, he whakamanawareka tangata hoki tera; engari hei runga i te ngakau tapatahi, me te wehi ano ki te Atua.
೨೨ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.
23 Ko nga mea katoa e mea ai koutou mahia a ngakautia, hei mea ki te Ariki, a ehara i te mea ki nga tangata;
೨೩ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.
24 Me te matau ano, ka homai e te Ariki ki a koutou te utu, ara te kainga: he pononga hoki koutou na te Ariki, na te Karaiti.
೨೪ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.
25 Ko te tangata hoki e he ana te mahi, ka whakawhiwhia ano ia ki tana he i mahi ai: kahore hoki he whakapai kanohi.
೨೫ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪಕ್ಷಪಾತವಿರುವುದಿಲ್ಲ.