< Tiuteronomi 29 >
1 Ko nga kupu enei o te kawenata i akona e Ihowa ki a Mohi kia whakaritea atu ki nga tama a Iharaira i te whenua o Moapa; haunga te kawenata i whakaritea e ia ki a ratou i Horepa.
೧ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು.
2 A ka karanga a Mohi ki a Iharaira katoa, ka mea ki a ratou, Kua kite koutou i nga mea katoa i mea ai a Ihowa ki to koutou aroaro i te whenua o Ihipa ki a Parao, ki ona tangata, ki tona whenua katoa;
೨ಮೋಶೆ ಇಸ್ರಾಯೇಲರನ್ನು ಕರೆದು, “ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಮುಂದೆ ಫರೋಹನಿಗೂ, ಅವನ ಪರಿವಾರದವರಿಗೂ ಮತ್ತು
3 I nga whakamatauranga nunui i kite ra ou kanohi, i nga tohu, i aua merekara nunui:
೩ಸಮಸ್ತ ಪ್ರಜೆಗಳಿಗೂ ಮಾಡಿದವುಗಳನ್ನು ನೋಡಿದ್ದೀರಿ. ಮಹಾಪರಿಶೋಧನೆ, ಉತ್ಪಾತ ಮತ್ತು ಮಹತ್ಕಾರ್ಯಗಳನ್ನು ನೀವು ನೋಡೇ ನೋಡಿದ್ದೀರಿ.
4 He ahakoa ra, kahore ano i homai e Ihowa ki a koutou he ngakau mohio, he kanohi hei titiro, he taringa hei whakarongo a tae noa ki tenei ra.
೪ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ.
5 Na ka wha tekau nga tau i arahi ai ahau i a koutou i te koraha: kahore nei i tawhitotia o koutou kakahu ki a koutou, kahore hoki tou hu i tawhitotia ki tou waewae.
೫ನಲ್ವತ್ತು ವರ್ಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪು ಹರಿಯಲ್ಲಿಲ್ಲ ಅಥವಾ ಕಾಲಿನಲ್ಲಿದ್ದ ಕೆರವಾಗಲಿ ಸವೆದು ಹೋಗಲಿಲ್ಲ;
6 Kahore ano koutou i kai i te taro, i inu ranei i te waina, i te wai whakahaurangi ranei: kia mohio ai koutou ko Ihowa ahau, ko to koutou Atua.
೬ನೀವು ರೊಟ್ಟಿಯನ್ನು ತಿನ್ನಲಿಲ್ಲ, ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.
7 A, ka tae mai koutou ki tenei whenua, na ka puta mai a Hihona kingi o Hehepona, raua ko Oka kingi o Pahana, ki te tu i a tatou ki te riri, a patua iho e tatou:
೭ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬರಲಾಗಿ ನಾವು ಅವರನ್ನು ಸೋಲಿಸಿದೆವು.
8 Na tangohia ana e tatou to ratou oneone, a hoatu ana hei kainga mo nga Reupeni, mo nga Kari, mo tetahi taanga hoki o te iwi o Manahi.
೮ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ, ಗಾದ್ಯರಿಗೂ ಹಾಗು ಮನಸ್ಸೆ ಕುಲದವರಲ್ಲಿ ಅರ್ಧಜನರಿಗೂ ಸ್ವತ್ತಾಗಿ ಕೊಟ್ಟೆವಷ್ಟೆ.
9 Na puritia ra nga kupu o tenei kawenata, mahia hoki, kia kake ai koutou i nga mea katoa e mea ai koutou.
೯ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡಿಸುವ ಎಲ್ಲಾ ಕೆಲಸಗಳಲ್ಲಿಯೂ ಜಾಣರಾಗಿ ಅಭಿವೃದ್ಧಿಹೊಂದುವಿರಿ.
10 E tu ana koutou katoa i tenei ra i te aroaro o Ihowa, o to koutou Atua; o koutou upoko, o koutou iwi, o koutou kaumatua, o koutou rangatira, ara nga tangata katoa o Iharaira,
೧೦ಇಸ್ರಾಯೇಲ್ ಪುರುಷರೇ, ನೀವೆಲ್ಲರೂ ಈಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,
11 A koutou tamariki, a koutou wahine, me tou tangata iwi ke i roto i ou puni, te kaitata i au wahie tae noa ki te kaiutuutu wai mou:
೧೧ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆ ಒಡೆಯುವವರು ಮತ್ತು ನೀರು ಸೇದುವವರು ಮುಂತಾದ ಆಳುಗಳು,
12 Kia uru ai koe ki te kawenata a Ihowa, a tou Atua, ki tana oati hoki e whakaritea nei e Ihowa, e tou Atua, ki a koe i tenei ra:
೧೨ಹೀಗೆ ನಿಮ್ಮೆಲ್ಲರ ಸಂಗಡ ಈ ಹೊತ್ತು ನಿಮ್ಮ ದೇವರಾದ ಯೆಹೋವನು ಪ್ರಮಾಣಪೂರ್ವಕವಾಗಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಾನೆ. ನೀವು ಅದರಲ್ಲಿ ಸೇರುವುದಕ್ಕಾಗಿ ಕೂಡಿಬಂದಿದ್ದೀರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ,
13 Kia whakapumautia ai koe i tenei ra hei iwi mana, ko ia hoki hei Atua mou, kia rite ai ki tana i korero ai ki a koe, ki tana hoki i oati ai ki ou matua, ki a Aperahama, ki a Ihaka, ki a Hakopa.
೧೩ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ವಾಗ್ದಾನ ಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ, ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುತ್ತಾನೆ.
14 Na kahore ki a koutou anake taku whakarite i tenei kawenata, i tenei oati hoki;
೧೪“ಆತನು ಈ ಒಡಂಬಡಿಕೆಯನ್ನು ಕೇವಲ ನಮ್ಮೊಡನೆ ಮಾಡಿಕೊಳ್ಳುವುದಿಲ್ಲ.
15 Engari ki tenei e tu tahi nei me tatou i konei i tenei ra i te aroaro o Ihowa, o to tatou Atua, ki te mea hoki kahore i konei i a tatou i tenei ra:
೧೫ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮತ್ತು ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ.
16 E mohio ana hoki koutou ki to tatou nohoanga ki te whenua o Ihipa, ki to tatou haerenga mai hoki na waenganui o nga iwi i haere mai nei koutou;
೧೬ನಾವು ಐಗುಪ್ತದೇಶದಲ್ಲಿ ವಾಸಮಾಡಿದ್ದೂ ಹಾಗೂ ಅನೇಕ ಜನಾಂಗಗಳ ಪ್ರದೇಶಗಳನ್ನು ದಾಟಿಬಂದದ್ದೂ ನಿಮಗೆ ತಿಳಿದೇ ಇದೆ.
17 A kua kite koutou i a ratou mea whakarihariha, i a ratou whakapakoko rakau, kohatu, hiriwa, koura, i waenganui i a ratou:
೧೭ಆ ಜನಾಂಗಗಳಲ್ಲಿ ನಡೆಯುವ ಅಸಹ್ಯವಾದ ಆಚಾರಗಳನ್ನೂ ಹಾಗು ಅವರು ಮರ, ಕಲ್ಲು, ಬೆಳ್ಳಿ ಮತ್ತು ಬಂಗಾರ ಇವುಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೋಡಿದ್ದೀರಿ.
18 Kei noho i roto i a koutou he tangata, he wahine ranei, he hapu, he iwi ranei, e tahuri ke atu ana tona ngakau i tenei ra i a Ihowa, i to tatou Atua, e haere ana ki te mahi ki nga atua o era iwi; kei puta ake i roto i a koutou he pakiaka e tupu ake ai te taru whakamate me te taru kawa;
೧೮“ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.
19 A tenei ake, kei tona rongonga i nga kupu o tenei kanga, na ka manaaki ia i a ia ano i roto i tona ngakau, ka mea, Ka mau te rongo ki ahau, ahakoa haere ahau i te pakeketanga o toku ngakau, ki te whakangaro tahi i te mea makuku me te mea maroke:
೧೯ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.
20 E kore a Ihowa e tuku noa atu i tona he, engari ka paowa te riri o Ihowa me tona ngakau hae ki taua tangata, a ka tapapa iho ki runga ki a ia te kanga katoa ka tuhituhia nei ki tenei pukapuka, a ka murua atu e Ihowa tona ingoa i raro i te rangi.
೨೦ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.
21 A ka wehea ia e Ihowa mo te kino i roto i nga iwi katoa o Iharaira, ka rite ki nga kanga katoa o te kawenata ka tuhituhia nei ki tenei pukapuka o te ture:
೨೧ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಯೆಹೋವನು ಅವನನ್ನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಪ್ರತ್ಯೇಕಿಸಿ ದಂಡಿಸುವನು.
22 A ka mea to muri whakatupuranga, a koutou tamariki e tupu ake i muri i a koutou, me te tangata iwi ke hoki e haere mai i te whenua tawhiti, ua kite ratou i nga whiunga o tena whenua, i nga matenga e whakamatea ai a reira e Ihowa;
೨೨“ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗ ಮತ್ತು ಉಪದ್ರವಗಳನ್ನು ಕಂಡು ಆಶ್ಚರ್ಯಪಡುವರು.
23 I te whenua katoa hoki he whanariki, he tote, he ngiha, kahore e whakatokia, kahore e tupu, kahore hoki e pihi ake tetahi otaota ki reira, pera me te hunanga o Horoma raua ko Komora, o Arema raua ko Tepoimi, i huna e Ihowa i a ia e aritarita ana, e riri ana:
೨೩ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,
24 Na ka mea nga iwi katoa, Na te aha a Ihowa i penei ai ki tenei whenua? He aha te tikanga o te mura o tenei riri nui?
೨೪‘ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು?’ ಎಂಬುದಾಗಿ ವಿಚಾರಿಸುವರು.
25 Katahi ka mea te tangata, Mo ratou ra i whakarere i te kawenata a Ihowa, a te Atua o o ratou matua, i whakaritea e ia ki a ratou, i tana whakaputanga mai i a ratou i te whenua o Ihipa:
೨೫ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.
26 A haere ana ratou, mahi ana ki nga atua ke, a koropiko ana ki a ratou, a ehara nei i a ia i hoatu ki a ratou:
೨೬ಅವರು ತಮಗೆ ನೇಮಿಸಲ್ಪಡದೆಯೂ ಮತ್ತು ಗೊತ್ತಿಲ್ಲದೆಯೂ ಇದ್ದ ಇತರ ದೇವರುಗಳನ್ನು ಸೇವಿಸಿ ಪೂಜಿಸಿದ್ದರಿಂದ,
27 Na mura ana te riri o Ihowa ki tenei whenua, hei whakaputa ki a ratou i nga kanga katoa i tuhituhia ki tenei pukapuka:
೨೭ಯೆಹೋವನು ಅವರ ದೇಶದ ಮೇಲೆ ಕೋಪಮಾಡಿ, ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದನು.
28 A huarangatia atu ana ratou e Ihowa i runga i to ratou oneone, i tona riri, i te aritarita, i te whakatakariri noa iho, a maka ana ratou he whenua ke, me tenei inaianei.
೨೮ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.
29 Kei a Ihowa, kei to tatou Atua, nga mea ngaro: ko nga mea ia ka oti nei te whakapuaki mai, ma tatou ena, ma a tatou tamariki, ake nei, kia mahi ai tatou i nga kupu katoa o tenei ture.
೨೯“ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.”