< Hohua 11 >
1 Na, i te rongonga o Ihapini kingi o Hatoro, ka tono tangata ia ki a Iopapa kingi o Marono, ki te kingi o Himirono, ki te kingi hoki o Akahapa,
೧ಹಾಚೋರಿನ ಅರಸನಾದ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮಾದೋನಿನ ಅರಸನು ಶಿಮ್ರೋನಿನ ಅರಸನನ್ನು ಅಕ್ಷಾಫಿನ ಅರಸನನ್ನು, ಉತ್ತರ ದಿಕ್ಕಿನ ಪರ್ವತ ಪ್ರದೇಶ,
2 Ki nga kingi ano hoki i te raki, ki era i nga maunga, i te mania hoki ki te tonga o Kinerota, i te whenua raorao, a i nga hiwi o Roro ki te hauauru,
೨ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದ ಪ್ರದೇಶ, ಇಳುಕಲ್ಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ, ಇವುಗಳ ಅರಸರನ್ನೂ ಪೂರ್ವಪಶ್ಚಿಮಗಳಲ್ಲಿರುವ
3 Ki te Kanaani i te rawhiti me te hauauru, ki te Amori, ki te Hiti, ki te Perihi, ki te Iepuhi i te whenua pukepuke, ki te Hiwi hoki i raro o Heremona i te whenua o Mihipa.
೩ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ತಗ್ಗಿನಲ್ಲಿದ್ದ ಮಿಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೆಕಳುಹಿಸಿದನು.
4 Na ka haere mai, me a ratou ope katoa, he tini te tangata, me te onepu i te taha o te moana te tokomaha, me nga hoiho, me nga hariata, tona tini.
೪ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು.
5 Na ka huihui enei kingi katoa; a ka haere mai ratou, ka noho huihui ki nga wai o Meromo, ki te whawhai ki a Iharaira.
೫ಈ ಎಲ್ಲಾ ಅರಸರು ಒಟ್ಟಾಗಿ ಸೇರಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವುದಕ್ಕಾಗಿ ಇಳಿದುಕೊಂಡರು.
6 Na ko te meatanga a Ihowa ki a Hohua, Kei wehi i a ratou: kia penei hoki apopo ka hoatu katoa ratou e ahau, mate rawa, ki a Iharaira: me whakangonge a ratou hoiho, me tahu hoki a ratou hariata ki te ahi.
೬ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.
7 Na huakina tatatia ana ratou e Hohua ratou ko te hunga hapai pakanga katoa ki nga wai o Meromo; heoi kokiri ana ratou ki a ratou.
೭ಯೆಹೋಶುವನು ಮಿಚ್ಪೆಯ ತನ್ನ ಎಲ್ಲಾ ಭಟರೊಡನೆ ಹೊರಟು ಹೋಗಿ, ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಪಕ್ಕನೆ ಬಿದ್ದನು.
8 Na homai ana ratou e Ihowa ki te ringa o Iharaira, a patua iho ratou, a whaia ana e ratou a tae noa ki Hairona nui, ki Mihirepoto Maimi, ki te raorao hoki o Mihipe whaka te rawhiti; a patupatua ana ratou, kahore rawa he morehu i waiho kia toe.
೮ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.
9 A rite tonu ta Hohua i mea ai ki a ratou ki ta Ihowa i korero ai ki a ia: i whakangongea e ia a ratou hoiho, i tahuna hoki a ratou hariata ki te ahi.
೯ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ರಥಗಳನ್ನು ಸುಟ್ಟುಬಿಟ್ಟನು.
10 A i taua wa ka tahuri a Hohua, a horo ana i a ia a Hatoro, patua iho hoki e ia tona kingi ki te hoari: ko Hatoro hoki te upoko o aua kingitanga katoa i mua.
೧೦ಕೂಡಲೇ ಯೆಹೋಶುವನು ಹಿಂದಿರುಗಿ ಹಾಚೋರನನ್ನೂ ಅವರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಂಬುವುದು ಪೂರ್ವಕಾಲದಲ್ಲಿ ಆ ಎಲ್ಲಾ ರಾಜ್ಯಗಳಿಗಿಂತಲು ಶ್ರೇಷ್ಠವಾಗಿತ್ತು.
11 Na patua iho e ratou nga mea ora katoa o reira ki te mata o te hoari a poto noa: kahore i mahue tetahi mea whai manawa: i tahuna hoki e ia a Hatoro ki te ahi.
೧೧ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಜೀವಿಯಾದರೂ ಉಳಿಯಲಿಲ್ಲ.
12 Na i riro katoa i a Hohua nga pa katoa o era kingi, me nga kingi katoa o reira, a patua iho e ia ki te mata o te hoari a poto noa; i pera ano ia me ta Mohi, me ta te pononga a Ihowa i whakahau ai.
೧೨ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.
13 Ko nga pa ia i tu i runga i nga pukepuke, kihai ena i tahuna e Iharaira, heoi ano ko Hatoro anake; i tahuna tena e Hohua.
೧೩ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಾಯೇಲರು ದಿನ್ನೆಯ ಮೇಲಿನ ಬೇರೆ ಯಾವ ಪಟ್ಟಣವನ್ನೂ ಸುಟ್ಟುಹಾಕಲಿಲ್ಲ.
14 Otiia ko nga taonga parakete katoa o aua pa, me nga kararehe, i tangohia e nga tama a Iharaira ma ratou; ko nga tangata katoa ia i patua ki te mata o te hoari a poto noa ratou, kihai i mahue tetahi mea whai manawa.
೧೪ಇಸ್ರಾಯೇಲರು ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ವಸ್ತುಗಳನ್ನೂ ಕೊಳ್ಳೆ ಹೊಡೆದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲ ಮಾಡಿದರು. ಉಸಿರಿರುವ ಒಂದನ್ನೂ ಅವರು ಉಳಿಸಲಿಲ್ಲ.
15 Ko ta Ihowa i whakahau ai ki tana pononga ki a Mohi, ko ta Mohi ano tera i whakahau ai ki a Hohua; a koia ta Hohua i mea ai; kihai i kapea e ia tetahi o nga mea katoa i whakahaua e Ihowa ki a Mohi.
೧೫ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ.
16 Na riro ana i a Hohua taua whenua katoa, te whenua pukepuke, me nga wahi katoa o te tonga, me te whenua katoa o Kohena, me te raorao, me te mania, me te whenua pukepuke o Iharaira, me tona raorao;
೧೬ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷೆನ್ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.
17 Atu i Maunga Haraka, e anga nei whakarunga ki Heira, a tae noa ki Paarakara i te raorao o Repanona, i raro iho o Maunga Heremona: a, ko o ratou kingi katoa, i mau i a ia, a patua iho, whakamatea iho.
೧೭ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನಿನ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ದೇಶವನ್ನೆಲ್ಲಾ ಸೆರೆಹಿಡಿದು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.
18 He maha nga ra i whawhai ai a Hohua ki aua kingi katoa.
೧೮ಯೆಹೋಶುವನು ಈ ಎಲ್ಲಾ ಅರಸರೊಡನೆ ಬಹು ದಿನಗಳವರೆಗೂ ಯುದ್ಧ ಮಾಡಿದನು.
19 Na kahore he pa i hohou rongo ki nga tama a Iharaira, heoi anake ko nga Hiwi i noho i Kipeono: i riro katoa i a ratou i runga i te whawhai.
೧೯ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರು ಹೊರತು ಯಾವ ಪಟ್ಟಣದವರೂ ಇಸ್ರಾಯೇಲರೊಡನೆ ಒಪ್ಪಂದಮಾಡಿಕೊಳ್ಳಲಿಲ್ಲ ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು.
20 Na Ihowa hoki i whakapakeke o ratou ngakau, kia turia ai e ratou a Iharaira ki te riri, kia tino whakangaromia ai ratou e ia, kia kore ai hoki ratou e tohungia, engari kia whakangaromia ratou e ia, kia peratia me ta Ihowa i whakahau ai ki a Mohi.
೨೦ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.
21 I taua wa ano ka haere atu a Hohua, a huna iho e ia nga Anakimi o nga maunga, o Heperona, o Repiri, o Anapa, o nga maunga katoa o Hura, o nga maunga katoa ano hoki o Iharaira: i tino whakangaromia rawatia ratou e Hohua me o ratou pa.
೨೧ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.
22 Kihai tetahi o nga Anakimi i mahue i te whenua o nga tama a Iharaira: toe ake ko etahi anake i Kaha, i Kata, i Aharoro.
೨೨ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.
23 Na ka riro i a Hohua te whenua katoa, ka pera me nga mea katoa i korerotia e Ihowa ki a Mohi; a hoatu ana e Hohua hei kainga tupu mo Iharaira, he mea whakarite ki o ratou wehenga, ki o ratou iwi. Na ka takoto marie te whenua i te whawhai.
೨೩ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.