< Waiata 132 >

1 He waiata; he pikitanga. E Ihowa, maharatia a Rawiri, me ona mamaetanga ngakau katoa;
ಯಾತ್ರಾ ಗೀತೆ. ಯೆಹೋವ ದೇವರೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
2 Tana oati ki a Ihowa, tana kupu taurangi ki te Mea Nui o Hakopa;
ದಾವೀದನು ಯೆಹೋವ ದೇವರಿಗೆ ಆಣೆ ಇಟ್ಟು, ಪರಾಕ್ರಮಿಯಾದ ಯಾಕೋಬನ ದೇವರಿಗೆ ಹೀಗೆಂದು ಪ್ರಮಾಣ ಮಾಡಿದನು:
3 E kore rawa ahau e tae ki toku whare e noho ai ahau, e eke ranei ki runga ki toku moenga;
“ಯೆಹೋವ ದೇವರಿಗೆ ಒಂದು ಸ್ಥಳವನ್ನೂ, ಯಾಕೋಬನ ದೇವರಿಗೆ ನಿವಾಸವನ್ನೂ ಕಟ್ಟುವವರೆಗೆ ನಿಶ್ಚಯವಾಗಿ,
4 E kore ahau e tuku i oku kanohi kia moe, i oku kamo kia nenewha;
ನಾನು ನನ್ನ ಮನೆ ಸೇರೆನು; ನನ್ನ ಮಂಚವನ್ನು ಏರೆನು.
5 Kia kitea ra ano e ahau he wahi mo Ihowa, he nohoanga mo te Mea Nui o Hakopa.
ನನ್ನ ಕಣ್ಣುಗಳಿಗೆ ನಿದ್ದೆಯನ್ನು ಕೊಡೆನು, ನನ್ನ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡೆನು.”
6 Na i rangona e matou ki Eparata, i kitea ki nga mara o te ngahere.
ನಾವು ಎಫ್ರಾತದಲ್ಲಿ ಇದನ್ನು ಕೇಳಿದೆವು; ಯಹಾರ್ ಅಡವಿಯ ಬಯಲುಗಳಲ್ಲಿ ಇದನ್ನು ಕಂಡು ಹೀಗೆಂದು ಕೇಳಿಸಿಕೊಂಡೆವು:
7 Ka haere matou ki roto ki ona tapenakara; ka koropiko ki tona turanga waewae.
“ಬನ್ನಿರಿ ನಾವು ದೇವರ ಮಂದಿರಕ್ಕೆ ಹೋಗಿ, ಅವರ ಪಾದಪೀಠದಲ್ಲಿ ಆರಾಧಿಸೋಣ.
8 E ara, e Ihowa, ki tou okiokinga, a koe, me te aaka o tou kaha.
‘ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ.
9 Kia whakakakahuria au tohunga ki te tika; kia hamama tau hunga tapu i te hari.
ನಿಮ್ಮ ಯಾಜಕರು ನೀತಿಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ; ನಿಮ್ಮ ಭಕ್ತರು ಉತ್ಸಾಹಧ್ವನಿ ಮಾಡಲಿ.’”
10 Whakaaro ki a Rawiri, ki tau pononga: kaua e whakapeaua atu te mata o tau i whakawahi ai.
ನಿಮ್ಮ ಸೇವಕನಾದ ದಾವೀದನ ನಿಮಿತ್ತ, ನಿಮ್ಮ ಅಭಿಷಿಕ್ತನನ್ನು ತಿರಸ್ಕರಿಸಬೇಡಿರಿ.
11 Kua oati pono a Ihowa ki a Rawiri, e kore ia e tahuri ke i tena; Ka whakanohoia e ahau tetahi hua o tou kopu ki tou torona.
ಯೆಹೋವ ದೇವರು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾರೆ; ತಾವು ಹೀಗೆಂದು ಆಣೆಯಿಟ್ಟುಕೊಟ್ಟ ಮಾತನ್ನು ದೇವರು ಬದಲಿಸುವುದಿಲ್ಲ, “ನಿನ್ನ ಸಂತತಿಯವನನ್ನೇ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.
12 Ki te puritia e au tama taku kawenata, me taku whakaaturanga e ako ai ahau ki a ratou, ka noho ano a ratou tama ki tou torona ake ake.
ನಿಮ್ಮ ಮಕ್ಕಳು ನನ್ನ ಶಾಸನಗಳನ್ನೂ ನನ್ನ ಒಡಂಬಡಿಕೆಯನ್ನು ಸನ್ಮಾನಿಸಿ, ಕೈಗೊಂಡರೆ, ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನದಲ್ಲಿ ಕೂರುವರು.”
13 Kua whiriwhiria hoki e Ihowa a Hiona; kua hiahiatia e ia hei nohoanga mona.
ಏಕೆಂದರೆ, ಯೆಹೋವ ದೇವರು ಚೀಯೋನನ್ನು ಆಯ್ದುಕೊಂಡು ಅದನ್ನು ತಮ್ಮ ವಾಸಕ್ಕಾಗಿ ಅಪೇಕ್ಷಿಸಿ ಹೀಗೆಂದಿದ್ದಾರೆ:
14 Ko toku okiokinga tenei ake ake; ko konei ahau noho ai, kua hiahiatia hoki e ahau.
“ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯ ಸ್ಥಳವಾಗಿರುವುದು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ; ಇಲ್ಲಿಯೇ ಸಿಂಹಾಸನಾರೂಢನಾಗಿರುವೆನು.
15 Ka manaakitia rawatia e ahau tana kai; ka whakamakonatia e ahau ona rawakore ki te taro.
ಧಾರಾಳವಾಗಿ ದವಸಧಾನ್ಯಗಳಿರಲೆಂದು ನಾನು ಚೀಯೋನನ್ನು ಆಶೀರ್ವದಿಸುವೆನು; ಇಲ್ಲಿ ವಾಸಿಸುವ ಬಡವರು ಉಂಡು ಸಂತೃಪ್ತಿಯಿಂದಿರುವರು.
16 Ka whakakakahuria hoki e ahau ona tohunga ki te whakaoranga; a ka hamama tona hunga tapu i te hari.
ಇಲ್ಲಿನ ಯಾಜಕರಿಗೆ ರಕ್ಷಣೆಯನ್ನು ಹೊದಿಸುವೆನು; ಚೀಯೋನಿನ ನಂಬಿಗಸ್ತ ಸೇವಕರು ಉತ್ಸಾಹಧ್ವನಿಯಿಂದ ಹಾಡುವರು.
17 Ka meinga e ahau kia pihi ki reira te haona o Rawiri: kua whakapaia e ahau he rama mo taku i whakawahi ai.
“ಇಲ್ಲಿ ದಾವೀದನಿಗೆ ಬಲದಾಯಕ ಅರಸನನ್ನು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.
18 Ka whakakakahuria e ahau ona hoariri ki te whakama; a ka matomato tona karauna i runga i a ia.
ಇಲ್ಲಿ ಆತನ ಶತ್ರುಗಳಿಗೆ ನಾಚಿಕೆಯ ವಸ್ತ್ರವನ್ನು ಹೊದಿಸುವೆನು; ಆದರೆ ಆತನ ತೆರೆಯ ಮೇಲೆ ಕಿರೀಟವು ಶೋಭಿಸುವುದು.”

< Waiata 132 >