< 2 शमुवेल 24 >
1 १ इस्राएलवर परमेश्वराचा पुन्हा एकदा कोप झाला. आणि त्याने दावीदाला इस्राएलांविरुध्द चेतवले. दावीद म्हणाला, “आधी इस्राएल आणि यहूदा यांची शिरगणती करा.”
೧ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.
2 २ राजा दावीद सेनापती यवाबाला म्हणाला, “दानपासून बैर-शेबापर्यंत इस्राएलच्या झाडून सर्व वंशातील लोकांची मोजदाद करा, म्हणजे मग मला लोकसंख्या किती आहे ते कळेल.”
೨ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ” ಎಂದು ಅವನಿಗೆ ಆಜ್ಞಾಪಿಸಿದನು.
3 ३ पण यवाब राजाला म्हणाला, “आपले लोक कितीही असोत देव परमेश्वर त्यांना शतगुणित करो. तुम्हास हे सर्व पाहायला मिळो पण तुम्हास असे का करावेसे वाटते?”
೩ಆಗ ಯೋವಾಬನು ಅರಸನಿಗೆ, “ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?” ಅಂದನು.
4 ४ पण राजा दावीदाचे शब्द यवाबाच्या शब्दांपेक्षा प्रभावी ठरले. आणि त्यांनी यवाबाला आणि इतर सैन्याधिकाऱ्यांना इस्राएल प्रजेची मोजदाद करण्यास सांगितले. तेव्हा ते सर्व या कामाला लागले.
೪ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.
5 ५ यार्देन ओलांडून त्यांनी अरोएर येथे तळ दिला. ही जागा नगराच्या उजवीकडे होती. (नगर याजेरच्या वाटेवर, गादच्या खोऱ्याच्या मध्यावर आहे.)
೫ಅವರು ಯೊರ್ದನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ಯಗ್ಜೇರಿಗೂ,
6 ६ तेथून ते गिलादला आणि पुढे तहतीम होदशी या प्रदेशात गेले. दान्यान आणि तिथून वळसा घेऊन सीदोन येथे गेले.
೬ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೂಜೀ ಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.
7 ७ सोर (तायर) हा गड आणि हिव्वी व कनानी यांची नगरे इकडे ते गेले. तेथून यहूदा देशाच्या दक्षिण दिशेला बैर-शेबा इथपर्यंत गेले.
೭ಅಲ್ಲಿಂದ ಚೀದೋನ್ ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.
8 ८ सगळा देश पालथा घालून ते नऊ महिने वीस दिवसानी यरूशलेम येथे पोहोचले.
೮ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿನಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿ ಬಂದರು.
9 ९ यवाबाने प्रजेच्या मोजदादीची यादी राजाला दिली. इस्राएलमध्ये तलवारधारी पुरुष आठ लक्ष होते. यहूदात ही संख्या पाच लक्ष होती.
೯ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು - ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದ್ಯರಲ್ಲಿ ಐದು ಲಕ್ಷ.
10 १० हे काम पार पाडल्यावर मात्र दावीदाला मनोमन लाज वाटली. तो परमेश्वरास म्हणाला, “माझ्याहातून हे मोठे पाप घडले आहे. या माझ्या अपराधाबद्दल मला क्षमा कर. माझा हा मोठाच मूर्खपणा झाला आहे.
೧೦ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.
11 ११ दावीद सकाळी उठला, तेव्हा दावीदाचा संदेष्टा गाद याला परमेश्वराची वाणी प्रकट झाली.”
೧೧ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ,
12 १२ परमेश्वर त्यास म्हणाला, “दावीदाला जाऊन सांग, परमेश्वर म्हणतो, तुझ्यापुढे मी तीन गोष्टी ठेवतो त्यापैकी एकीची निवड कर.”
೧೨“ನೀನು ದಾವೀದನ ಬಳಿ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಟ್ಟಿದ್ದೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ’ ಎಂಬುದಾಗಿ ಹೇಳು” ಎಂದು ಆಜ್ಞಾಪಿಸಿದನು.
13 १३ गादने दावीदाकडे येऊन त्यास हे सर्व सांगितले. तो दावीदाला म्हणाला, “तिन्हीपैकी एकीची निवड कर. तुझ्या देशात सात वर्षे दुष्काळ पडावा, किंवा शत्रूंनी तीन महिने तुझा पाठलाग करावा, की तीन दिवस रोगराई पसरावी? विचार कर आणि मी परमेश्वरास काय सांगावे ते सांग.”
೧೩ಆಗ ಗಾದನು ದಾವೀದನ ಬಳಿಗೆ ಹೋಗಿ, “ನಿನ್ನ ದೇಶದಲ್ಲಿ ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು” ಎಂದನು.
14 १४ दावीद गादला म्हणाला, “मी पेचात सापडलो आहे खरा! पण परमेश्वर दयाळू आहे. परमेश्वरच मला शिक्षा देवो लोकांच्या हाती मी पडू नये.”
೧೪ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.
15 १५ तेव्हा परमेश्वराने इस्राएलवर रोगराई ओढवू दिली. सकाळी तिची सुरुवात होऊन नेमलेल्या काळपर्यंत ती राहिली. दानपासून बैर-शेबापर्यंत सत्तर हजार माणसे मृत्युमुखी पडली.
೧೫ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
16 १६ यरूशलेमेच्या संहारासाठी देवदूताचा हात उंचावला. पण झाल्या गोष्टीबद्दल परमेश्वरास फार वाईट वाटले. लोकांचा संहार करणाऱ्या देवदूताला परमेश्वर म्हणाला, “आता पुरे तुझा हात खाली घे.” तेव्हा हा देवदूत अरवना यबूसी याच्या खळ्याजवळ होता.
೧೬ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.
17 १७ लोकांस मारणाऱ्या देवदूताला दावीदाने पाहिले. दावीद परमेश्वरास म्हणाला, “माझे चुकले माझ्या हातून पाप घडले आहे. पण हे लोक मेंढरांसारखे माझ्या मागून आले. त्यांचे काहीच चुकले नाही. तेव्हा तू मला आणि माझ्या कुटुंबियांना शिक्षा कर.”
೧೭ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ” ಎಂದು ಬೇಡಿಕೊಂಡನು.
18 १८ त्या दिवशी गाद दावीदाकडे आला. तो म्हणाला, “अरवना यबूसीच्या खळ्यावर परमेश्वराप्रीत्यर्थ एक वेदी बांध.”
೧೮ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
19 १९ दावीदाने मग परमेश्वराच्या इच्छेनुसार गादच्या म्हणण्याप्रमाणे केले. तो अरवनाला भेटायला गेला.
೧೯ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.
20 २० अरवनाने राजाला आणि त्याच्या सेवकांना येताना पाहिले. त्याने पुढे होऊन जमिनीपर्यंत लवून नमस्कार केला.
೨೦ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು.
21 २१ अरवना म्हणाला, “माझे स्वामी का बरे आले आहेत? दावीद म्हणाला, तुझे खळे विकत घ्यायला. म्हणजे मग मी परमेश्वरा प्रित्यर्थ इथे एक वेदी बांधीन. मग रोगराई संपुष्टात येईल.”
೨೧ಅವನು, “ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವುದಕ್ಕೆ ಕಾರಣವೇನು?” ಎಂದು ಕೇಳಿದನು. ದಾವೀದನು ಅವನಿಗೆ, “ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟುವುದಕ್ಕೆ ಬಂದಿದ್ದೇನೆ” ಎಂದು ಉತ್ತರಕೊಟ್ಟನು.
22 २२ अरवना म्हणाला, “स्वामींनी मनाला येईल ते अर्पण करण्यासाठी घ्यावे. होमबलीसाठी हे बैल आहेत. इंधनासाठी मळणीची औते आणि बैलांचे सामान आहे.
೨೨ಆಗ ಅರೌನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ, ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ನೊಗ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.
23 २३ अरवना महाराज, हवे ते मी तुम्हास देईन, महराजांवर परमेश्वराची मर्जी असावी. अशीही कामना त्याने पुढे व्यक्त केली.”
೨೩ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ” ಎಂದು ಹೇಳಿದನು.
24 २४ पण राजा अरवनाला म्हणाला नाही, “तुला मी खरे सांगतो, मी ही जमीन विकतच घेणार आहे फुकटात मिळालेले मी होमबली म्हणून परमेश्वर देवाला अर्पण करणार नाही.” तेव्हा दावीदाने खळे आणि बैल पन्नास शेकेल चांदी देऊन विकत घेतले.
೨೪ಅರಸನು ಅರೌನನಿಗೆ, “ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ” ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು.
25 २५ मग तेथे परमेश्वराप्रीत्यर्थ वेदी बांधली, होमबली आणि शांत्यर्पणे केली. परमेश्वराने त्याची प्रार्थना ऐकली. इस्राएलवरील रोगराई परमेश्वराने संपुष्टात आणली.
೨೫ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.