< अनुवाद 16 >

1 अबीब महिन्यात लक्षात ठेवून तुमचा देव परमेश्वराप्रित्यर्थ वल्हांडण सण साजरा करा. कारण याच महिन्यात तुमचा देव परमेश्वर याने तुम्हास रात्रीच्या वेळी मिसरदेशातून बाहेर काढले.
ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.
2 परमेश्वराने आपल्या निवासासाठी निवडलेल्या जागी जा. तेथे वल्हांडणाचा यज्ञपशू परमेश्वरास अर्पण करा. शेळ्यामेंढ्या किंवा गाय बैल यापैकी हा पशू असावा.
ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.
3 त्यावेळी खमीर घातलेली भाकर खाऊ नका. बेखमीर भाकरी तुम्ही सात दिवस खावी. ही भाकरी म्हणजे दु: ख स्मरणाची भाकर होय. त्याने तुम्हास मिसरमधील कष्टांची जन्मभर आठवण राहील. किती गडबडीने तुम्हास तो देश सोडावा लागला होता! त्याचा तुम्ही आमरण विसर पडू देऊ नका.
ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.
4 तेव्हा या सात दिवसात देशभर कोणाच्याही घरी खमीर दिसता कामा नये. तसेच पहिल्या दिवशी संध्याकाळी जो बली द्याल तो सूर्योदयापूर्वी खाऊन संपवून टाका.
ಆ ಏಳು ದಿನಗಳು ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನೂ ಮರುದಿನದ ವರೆಗೆ ಉಳಿಸಬಾರದು.
5 वल्हांडणाच्या पशूचे यज्ञार्पण तुमचा देव परमेश्वर याने तुम्हास वस्तीसाठी दिलेल्या कोणत्याही नगराच्या आत करु नका.
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸ್ಕದ ಪಶುವನ್ನು ವಧಿಸದೆ,
6 देव आपले निवासस्थान निवडील तेथेच व सूर्यास्त होण्याच्या वेळीच ते केले पाहिजे. मिसरमधून परमेश्वराने तुम्हास बाहेर काढल्याप्रित्यर्थ वल्हांडण सण आहे.
ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು.
7 तुझा देव परमेश्वर जे स्थान निवडील तेथेच हा यज्ञपशू शिजवून खा. मग सकाळी आपापल्या घरी परत जा.
ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿನ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟು ಹೋಗಬಹುದು.
8 सहा दिवस बेखमीर भाकर खा. सातव्या दिवशी कोणतेही कामकाज करु नये. या दिवशी तुमचा देव परमेश्वर ह्याच्याप्रीत्यर्थ पवित्र मेळा भरवावा.
ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು.
9 पीक काढल्यापासून सात आठवडे मोजा उभ्या पिकाला विळा लागल्यापासून सात आठवडे मोजा.
ಬೆಳೆ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ,
10 १० मग, आपल्या खुशीने एखादी विशेष भेटवस्तू आणून आपला देव परमेश्वर याच्यासाठी सप्ताहांचा सण साजरा करा. आपल्याला परमेश्वर देवाच्या कृपेने किती मिळाले याचा अंदाज घेऊन किती द्यायचे ते ठरवा.
೧೦ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.
11 ११ परमेश्वराने निवडलेल्या त्याच्या विशेष निवासस्थानी जा. तेथे तुमचा देव परमेश्वर याच्या सान्निध्यात सहकुटुंब सहपरिवार आनंदात वेळ घालवा. आपली मुलेबाळे, दास, गावातील लेवी, परके, अनाथ, विधवा या सर्वांना बरोबर घ्या.
೧೧ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
12 १२ तुम्ही मिसरमध्ये दास होता हे विसरु नये म्हणून हे विधी न चुकता पाळा.
೧೨ಐಗುಪ್ತದೇಶದಲ್ಲಿ ದಾಸರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.
13 १३ खळ्यातील आणि द्राक्षकुंडामधील उत्पन्न जमा केल्यावर सात दिवसानी मंडपाचा सण साजरा करा.
೧೩ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.
14 १४ हा सणही मुले आणि मुली, दासदासी, लेवी, शहरातील वाटसरु, परके, अनाथ, विधवा, यांच्यासह साजरा करा.
೧೪ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.
15 १५ तुमचा देव परमेश्वर याने निवडलेल्या निवासस्थानी, त्याच्या सन्मानार्थ सात दिवस हा सण साजरा करा. तुमच्या पिकांवर आणि तुम्ही घेतलेल्या कष्टांवर तुमचा देव परमेश्वर याची कृपादृष्टी आहे. तेव्हा आनंदात राहा.
೧೫ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.
16 १६ तुमचा देव परमेश्वर याच्या पवित्र निवासस्थानी तुम्हातील सर्व पुरुषांनी वर्षातून तीनदा एकत्र जमले पाहिजे. बेखमीर भाकरीचा सण, सप्ताहांचा सण आणि मंडपाचा सण हे ते तीन प्रसंग होत. येताना प्रत्येकाने भेटवस्तू आणली पाहिजे.
೧೬ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.
17 १७ प्रत्येकाने यथाशक्ती दिले पाहिजे परमेश्वराने आपल्याला काय आशीर्वाद दिला याचा विचार करून आपण काय द्यायचे ते ठरवावे.
೧೭ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯಾನುಸಾರ ಕೊಡಬೇಕು.
18 १८ तुमचा देव परमेश्वर याने तुम्हास दिलेल्या नगरांमध्ये आपापल्या वंशाप्रमाणे न्यायाधीश व अधिकारी यांच्या नेमणुका कराव्यात. या व्यक्तींनी नीतीने न्यायदान करावे.
೧೮ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.
19 १९ त्यांनी नेहमी नि: पक्षपाती असले पाहिजे. त्यांनी लाच घेऊन न्यायनिवाडा करता कामा नये. पैसे पाहून भल्या भल्यांचेही डोळे फिरतात व ते निरपराध लोकांच्या म्हणण्याचा विपर्यास करतात.
೧೯ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
20 २० चांगुलपणा आणि नि: पक्षपातीपणा यांचीच नेहमी कास धरावी. म्हणजे तुमचा देव परमेश्वर याने तुम्हास दिलेला हा प्रदेश संपादन करून तेथे तुम्ही सुखाने रहाल.
೨೦ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
21 २१ जेव्हा तुमचा देव परमेश्वर यासाठी तुम्ही वेदी उभाराल तेव्हा तिच्याशेजारी अशेरा देवीच्या सन्मानार्थ लाकडी स्तंभ उभारू नका.
೨೧ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.
22 २२ कोणत्याही खोट्या दैवतांसाठी स्तंभ उभारू नका. तुमचा देव परमेश्वर ह्याला अशा गोष्टींचा तिरस्कार वाटतो.
೨೨ಪವಿತ್ರ ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದದ್ದು.

< अनुवाद 16 >