< हाग्गय 1 >
1 १ पारसाचा राजा दारयावेश राजा याच्या कारकिर्दीच्या दुसऱ्या वर्षाच्या, सहाव्या महिन्याच्या, पहिल्या दिवशी, शल्तीएलाचा मुलगा जरुब्बाबेल यहूदाचा राज्यपाल व यहोसादाकचा मुलगा यहोशवा, मुख्य याजक याच्याकडे हाग्गय संदेष्ट्याद्वारे परमेश्वराचे वचन आले, ते असे,
೧ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.
2 २ सेनाधीश परमेश्वर म्हणतो, “हे लोक म्हणतात, की आमची येण्याची अजून वेळ आली नाही, किंवा परमेश्वराचे मंदिर बांधण्याची वेळ अजून आली नाही.”
೨ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರಲ್ಲಾ.
3 ३ आणि परमेश्वराचे वचन हाग्गय संदेष्ट्याच्या द्वारे आले आणि म्हणाले,
೩ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಹೇಳಿದನು,
4 ४ “इकडे हे मंदिर ओसाड पडले असता, तुम्ही आपल्या परिपूर्ण घरात रहावे असा समय आहे काय?
೪“ಈ ನನ್ನ ಆಲಯವು ಹಾಳು ಬಿದ್ದಿರುವಾಗ, ನೀವು ನಿಮ್ಮ ಒಳಗೋಡೆಗೆಲ್ಲಾ ಸುಂದರ ಹಲಿಗೆ ಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವುದಕ್ಕೆ ಈ ಸಮುಯವು ತಕ್ಕದ್ದೋ?”
5 ५ आता सेनाधीश परमेश्वर म्हणतोः तुम्ही आपल्या मार्गाकडे लक्ष द्या!
೫ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.
6 ६ तुम्ही खूप बीज पेरता, पण तुमच्या हाती थोडेच पीक लागते; तुम्ही खाता पण ते तुम्हास पुरेसे नसते, तुम्ही पिता पण पिण्याने तुमची तृप्ती होत नाही, तुम्ही कपडे घालता परंतु त्यांनी ऊब येत नाही, आणि जो मजुरी मिळवतो तो ती छिद्र पडलेल्या पिशवीत घालण्यासाठी कमवतो.”
೬ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”
7 ७ सेनाधीश परमेश्वर असे म्हणतोः “आपल्या मार्गाकडे लक्ष द्या!
೭ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ; “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.
8 ८ पर्वतावर जा, लाकडे आणा आणि माझे मंदिर बांधा; मग मी त्यामध्ये आनंद करीन आणि मी गौरविला जाईन,” असे परमेश्वर म्हणतो.
೮ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು” ಇದು ಯೆಹೋವನ ನುಡಿ.
9 ९ “तुम्ही पुष्कळाची वाट पाहिली, परंतु पाहा! तुम्ही थोडके घरी आणले तेव्हा मी त्यावर फुंकर मारली! हे का? असे सेनाधीश परमेश्वर म्हणतो! कारण माझे घर ओसाड पडले असून प्रत्येक मनुष्य आपआपल्या स्वत: च्या घरात आनंद घेत आहे.
೯ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”
10 १० यास्तव तुमच्यापासून आकाशाने दहिवराला आवरून धरले आहे व भूमीने आपला उपज रोखून धरला आहे.”
೧೦ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ;
11 ११ “मी भूमीवर आणि पर्वतांवर, धान्यावर नव्या द्राक्षरसावर व तेलावर आणि भूमीच्या पिकावर, मनुष्यावर आणि पशूवर व तुमच्या हातच्या कमाईवर अवर्षणाची आज्ञा दिली आहे.”
೧೧ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ ಇವುಗಳಿಗೆಲ್ಲಾ ಕ್ಷಾಮವನ್ನು ತಂದಿದ್ದೇನೆ.
12 १२ मग शल्तीएलाचा मुलगा जरुब्बाबेल आणि मुख्य याजक यहोसादाकाचा मुलगा यहोशवा व उरलेले सर्व लोक यांनी, आपला देव परमेश्वर याची वाणी आणि हाग्गय संदेष्ट्याची वचने मानली, कारण आपला देव परमेश्वर ह्याने त्यास पाठवले होते आणि लोक परमेश्वराच्या मुखाचे भय धरू लागले.
೧೨ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.
13 १३ मग परमेश्वराचा निरोप्या, हाग्गय याने, परमेश्वराचा निरोप लोकांस सांगितला आणि म्हणाला; परमेश्वर असे म्हणतो, “मी तुमच्याबरोबर आहे!”
೧೩ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.”
14 १४ यहूदाचा राज्यपाल शल्तीएलाचा मुलगा जरुब्बाबेल, मुख्य याजक यहोसादाकाचा मुलगा यहोशवा आणि सर्व उरलेल्या लोकांच्या आत्म्याला परमेश्वराने उत्तेजित केले. तेव्हा ते जाऊन आपला देव सेनाधीश परमेश्वर याचे मंदिर बांधण्याच्या कामास लागले.
೧೪ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,
15 १५ दारयावेश राजाच्या कारकिर्दीच्या दुसऱ्या वर्षीच्या सहाव्या महिन्याच्या चोविसाव्या दिवशी हे झाले.
೧೫ಅವರು ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಬಂದು ತಮ್ಮ ದೇವರಾದ ಯೆಹೋವನ ಆಲಯದ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು.