< Amahubo 122 >

1 Ngathokoza lapho besithi kimi: Kasiye endlini yeNkosi.
ಯಾತ್ರಾಗೀತೆ; ದಾವೀದನ ಕೀರ್ತನೆ. “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.
2 Inyawo zethu zimi emasangweni akho, Jerusalema.
ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ.
3 IJerusalema yakhiwe njengomuzi ohlangeneyo ngokwawo,
ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ.
4 lapho izizwe ezenyukela khona, izizwe zeNkosi, kubufakazi bukaIsrayeli, ukuze zibonge ibizo leNkosi.
ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.
5 Ngoba kumiswe khona izihlalo zobukhosi zesahlulelo, izihlalo zobukhosi zendlu kaDavida.
ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.
6 Khulekelani ukuthula kweJerusalema; bazaphumelela abakuthandayo.
ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.
7 Kakube khona ukuthula phakathi kwemiduli yakho, inhlalakahle ezigodlweni zakho.
ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.”
8 Ngenxa yabafowethu labangane bami sengizakuthi: Ukuthula kakube phakathi kwakho.
ನನ್ನ ಬಂಧುಮಿತ್ರರ ನಿಮಿತ್ತವಾಗಿ, “ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ.
9 Ngenxa yendlu yeNkosi uNkulunkulu wethu ngizakudingela okuhle.
ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.

< Amahubo 122 >