< Amahubo 60 >
1 Nkulunkulu, ubusilahlile, wasibhidliza, wathukuthela; buyela kithi.
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಷೂಷನ್ ಎದೂತೆಂಬ ರಾಗ; ದಾವೀದನು ಅರಾಮ್ ರಾಜ್ಯಗಳ ಸಂಗಡ ಯುದ್ಧ ಮಾಡುವಷ್ಟರೊಳಗೆ ಯೋವಾಬನು ಹಿಂದಿರುಗಿ ಹೋಗಿ ಉಪ್ಪಿನ ತಗ್ಗಿನಲ್ಲಿ ಹನ್ನೆರಡು ಸಾವಿರ ಎದೋಮ್ಯರನ್ನು ಹೊಡೆದಾಗ ದಾವೀದನು ರಚಿಸಿದ ಕಾವ್ಯ. ಬಾಯಿಪಾಠ ಮಾಡಿಸತಕ್ಕದ್ದು. ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.
2 Uzamazamisile umhlaba, wawuqhekeza; silisa imikenke yawo, ngoba uyazamazama.
೨ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; ಅದು ನಡುಗುತ್ತಿರುವುದಲ್ಲಾ. ಅದರ ಒಡಕುಗಳನ್ನು ಸರಿಮಾಡು;
3 Abantu bakho ubabonisile okulukhuni; usinathise iwayini lokudiyazela.
೩ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.
4 Ubanikile labo abakwesabayo isiboniso, ukuze siphakanyiswe ngenxa yeqiniso. (Sela)
೪ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, ಆದ್ದರಿಂದ ಅವರು ಬಿಲ್ಲಿನಿಂದ ತಪ್ಪಿಸಿಕೊಳ್ಳಬಹುದು. (ಸೆಲಾ)
5 Ukuze abathandekayo bakho bakhululwe; sindisa ngesandla sakho sokunene, usiphendule.
೫ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
6 UNkulunkulu ukhulumile ebungcweleni bakhe. Ngizathaba, ngilabe iShekema, ngilinganise isihotsha seSukothi.
೬ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು.
7 Ngeyami iGileyadi, njalo ngowami uManase, loEfrayimi ungamandla ekhanda lami, uJuda ngumnikumthetho wami.
೭ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.
8 UMowabi ungumganu wami wokugezela; phezu kukaEdoma ngizaphosela inyathela lami; mayelana lami, wena Filisti, memeza ngokunqoba.
೮ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು.
9 Ngubani ozangisa emzini oqinileyo? Ngubani ozangiholela eEdoma?
೯ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
10 Kawusilahlanga yini, Nkulunkulu; kawuphumanga, Nkulunkulu, lamabutho ethu?
೧೦ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ?
11 Siphe usizo ekuhlupheni, ngoba luyize uncedo lomuntu.
೧೧ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು; ಮನುಷ್ಯರ ಸಹಾಯವು ವ್ಯರ್ಥ.
12 KuNkulunkulu sizakwenza ngobuqhawe, ngoba yena uzanyathelela phansi izitha zethu.
೧೨ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.