< Amahubo 8 >
1 Nkosi, Nkosi yethu, lilenkazimulo kangakanani ibizo lakho emhlabeni wonke! Omise ubukhosi bakho ngaphezu kwamazulu.
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು. ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.
2 Emlonyeni wezingane lowabamunyayo umisile amandla ngenxa yezitha zakho, ukuze uthulise isitha lomphindiseli.
೨ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.
3 Lapho ngikhangela amazulu akho, umsebenzi weminwe yakho, inyanga lenkanyezi owazimisayo,
೩ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,
4 uyini umuntu ukuthi umkhumbule, lendodana yomuntu ukuthi uyihambele?
೪ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
5 Kanti wamenza waba ngaphansi kancinyane kulengilosi, wamethwesa umqhele wobukhosi lodumo.
೫ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.
6 Wamenza wabusa phezu kwemisebenzi yezandla zakho, konke wakubeka ngaphansi kwenyawo zakhe,
೬ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.
7 izimvu lenkabi zonke, kanye lezinyamazana zeganga,
೭ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು,
8 inyoni zamazulu, lezinhlanzi zolwandle, okudlula ezindleleni zenlwandle.
೮ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.
9 Nkosi, Nkosi yethu, lilenkazimulo kangakani ibizo lakho emhlabeni wonke!
೯ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.