< Amahubo 85 >

1 Nkosi, ubulomusa elizweni lakho. Ubuyisile ukuthunjwa kukaJakobe.
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.
2 Wathethelela ububi babantu bakho, wasibekela zonke izono zabo. (Sela)
ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. (ಸೆಲಾ)
3 Ukususile konke ukuthukuthela kwakho, waphenduka ekuvutheni kolaka lwakho.
ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.
4 Siphendule, Nkulunkulu wosindiso lwethu, wenze ulaka lwakho kithi luphele.
ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.
5 Uzasithukuthelela kokuphela yini? Uzakwelulela ulaka lwakho esizukulwaneni lesizukulwana yini?
ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?
6 Kawuyikubuya usivuselele yini, ukuze abantu bakho bathokoze kuwe?
ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ?
7 Sitshengise umusa wakho, Nkosi, usinike usindiso lwakho.
ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು.
8 Ngizakuzwa lokho uNkulunkulu iNkosi azakukhuluma, ngoba uzakhuluma ukuthula ebantwini bakhe, lakwabangcwele bakhe, kodwa kabangabuyeli ebuwuleni.
ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.
9 Isibili usindiso lwakhe luseduze kulabo abamesabayo ukuze kuhlale udumo elizweni lakithi.
ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.
10 Umusa leqiniso kuyahlangabezana, ukulunga lokuthula kwangene.
೧೦ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.
11 Iqiniso lizaphuma emhlabeni, lokulunga kuzakhangela phansi kusemazulwini.
೧೧ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
12 Yebo, iNkosi izanika okuhle, lelizwe lethu lizathela isivuno salo.
೧೨ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು.
13 Ukulunga kuzahamba phambi kwayo, kwenzele izinyathelo zayo indlela.
೧೩ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.

< Amahubo 85 >