< Isambulo 22 +
1 Wasengitshengisa umfula ocengekileyo wamanzi empilo, ukhazimula njengekristali, uphuma esihlalweni sobukhosi sikaNkulunkulu, leseWundlu.
೧ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,
2 Laphakathi kwesitalada sawo, njalo ngapha langapha komfula kwakulesihlahla sempilo, sithela izithelo ezilitshumi lambili, ileyo laleyo inyanga sithela isithelo saso; lamahlamvu esihlahla ngawokwelatshwa kwezizwe.
೨ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.
3 Kakusayikuba khona lakanye isiqalekiso; kodwa isihlalo sobukhosi sikaNkulunkulu leseWundlu sizakuba kuwo; lenceku zakhe zizamkhonza,
೩ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು.
4 zizabona ubuso bakhe; lebizo lakhe lizakuba semabunzini azo.
೪ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು.
5 Lobusuku kabuyikuba khona lapho, njalo kazisweli isibane lokukhanya kwelanga, ngoba iNkosi uNkulunkulu iyazikhanyisela; njalo zizabusa kuze kube nini lanini. (aiōn )
೫ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು. (aiōn )
6 Wasesithi kimi: Lamazwi athembekile aqotho; njalo iNkosi, uNkulunkulu wabaprofethi abangcwele, ithumele ingilosi yayo ukutshengisa inceku zayo izinto okumele zenzeke ngokuphangisa.
೬ಆ ಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.
7 Khangela, ngiyeza masinyane. Ubusisiwe owagcinayo amazwi esiprofetho salolugwalo.
೭“ಇಗೋ ನೋಡು! ನಾನುಅತಿಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು.
8 Futhi mina Johane nginguye owazibonayo lezizinto lowazizwayo. Kuthe sengizizwile ngazibona, ngawela phansi ukukhonza phambi kwenyawo zengilosi eyangitshengisa lezizinto.
೮ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
9 Yasisithi kimi: Qaphela ungakwenzi; ngoba ngiyinceku kanye lawe, labazalwane bakho abaprofethi, lalabo abagcina amazwi alolugwalo; khonza uNkulunkulu.
೯ಆದರೆ ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.
10 Yasisithi kimi: Unganamathiseli ngophawu amazwi esiprofetho salolugwalo; ngoba isikhathi siseduze.
೧೦ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ “ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ.
11 Owenza okungalunganga kahlale esenza okungalunganga; longcolileyo ahlale engcolile; lolungileyo ahlale elungisisiwe; longcwele ahlale engcwelisiwe.
೧೧ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”
12 Khangela-ke, ngiyeza masinyane, lomvuzo wami ukimi, ukuvuza ngulowo lalowo njengokuzakuba ngumsebenzi wakhe.
೧೨“ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕಪ್ರತಿಫಲವು ನನ್ನಲ್ಲಿದೆ.
13 Mina nginguAlfa loOmega, isiqalo lesicino, owokuqala lowokucina.
೧೩ನಾನೇಆದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.
14 Babusisiwe labo abenza imilayo yakhe, ukuze babe lelungelo esihlahleni sempilo, babe sebengena emzini ngamasango;
೧೪“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.
15 kodwa ngaphandle kukhona izinja labathakathi leziphingi lababulali labakhonza izithombe laye wonke othanda njalo esenza amanga.
೧೫ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂಹೊರಗಿರುವರು” ಎಂದು ಹೇಳಿದನು.
16 Mina Jesu ngithume ingilosi yami ukufakaza lezizinto kini emabandleni. Mina ngiyimpande lenzalo kaDavida, indonsakusa ekhazimulayo.
೧೬“ಯೇಸುವೆಂಬ ನಾನುನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನುದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂಅವನ ಸಂತತಿಯೂಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”
17 UMoya-ke lomakoti bathi: Woza! Lozwayo kathi: Woza! Lowomileyo keze; lothandayo kathathe amanzi empilo ngesihle.
೧೭ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.
18 Ngoba ngiyafakaza kuye wonke ozwa amazwi esiprofetho salolugwalo: Uba umuntu esengeza kulezizinto, uNkulunkulu uzakwengezelela kuye izinhlupheko ezilotshwe kulolugwalo;
೧೮ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.
19 njalo uba umuntu esusa okwamazwi ogwalo lwalesisiprofetho, uNkulunkulu uzasusa isabelo sakhe egwalweni lwempilo, lemzini ongcwele, lezintweni ezilotshiweyo kulolugwalo.
೧೯ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.
20 Ofakaza lezizinto uthi: Yebo, ngiyeza masinyane. Ameni. Yebo, woza, Nkosi Jesu!
೨೦ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.
21 Umusa weNkosi yethu uJesu Kristu kawube lani lonke. Ameni.
೨೧ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!