< KwabaseRoma 4 >

1 Pho-ke sizakuthi uAbrahama ubaba wethu wazuzani ngokwenyama?
ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?
2 Ngoba uba uAbrahama walungisiswa ngemisebenzi, ulokuzincoma, kodwa kungekho phambi kukaNkulunkulu.
ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ.
3 Ngoba umbhalo uthini? Uthi: Kodwa uAbrahama wakholwa kuNkulunkulu, kwasekubalelwa kuye ukuthi yikulunga.
ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, “ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು” ಎಂದು ಹೇಳುತ್ತದೆ.
4 Kodwa kulowo osebenzayo kabalelwa iholo ngokomusa, kodwa ngokomlandu.
ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು.
5 Kodwa kulowo ongasebenziyo, kodwa ekholwa kuye olungisisa oweyisa uNkulunkulu, ukholo lwakhe lubalelwa ukuthi yikulunga.
ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.
6 Njengoba laye uDavida ekhuluma ngokubusiswa komuntu, uNkulunkulu ambalela ukulunga ngaphandle kwemisebenzi esithi:
ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ,
7 Babusisiwe abaziphambeko zabo zithethelelwe labazono zabo zisitshekelwe.
“ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು.
8 Ubusisiwe umuntu iNkosi engasoze yambalela isono.
ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಆ ಮನುಷ್ಯನೇ ಧನ್ಯನು.”
9 Ngakho lokhukubusiswa kuphezu kokusoka yini, kumbe laphezu kokungasoki? Ngoba sithi: Ukholo lwabalelwa kuAbrahama ukuthi luyikulunga.
ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ.
10 Pho lwabalelwa njani? Lapho esekusokeni yini, kumbe ekungasokini? Kungekho ekusokeni, kodwa ekungasokini.
೧೦ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು.
11 Wasesemukela isibonakaliso sokusoka, uphawu lokulunga kokholo ayelakho ekungasokini; ukuze abe nguyise wabo bonke abakholwayo lanxa bengasokanga, ukuze ukulunga kubalelwe lakibo;
೧೧ಅನಂತರ ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.
12 loyise wokusoka kulabo abangayisibo bokusoka kuphela, kodwa futhi abahamba ezinyathelweni zokholo lukababa wethu uAbrahama ayelalo engakasokwa.
೧೨ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.
13 Ngoba kasingomlayo isithembiso kuAbrahama kumbe kunzalo yakhe, ukuthi uzakuba yindlalifa yomhlaba, kodwa ngokulunga kokholo.
೧೩ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.
14 Ngoba uba labo abomlayo beyizindlalifa, ukholo lwenziwe ize, lesithembiso senziwa ize;
೧೪ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವು ನಿರರ್ಥಕವಾಯಿತು.
15 ngoba umlayo ubanga ulaka; ngoba lapho okungekho khona umlayo, kakukho lokweqa.
೧೫ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.
16 Ngakho kungokholo, ukuze kube ngokomusa; ukuze isithembiso siqiniseke kuyo yonke inzalo; kungeyisiyo engeyomlayo kuphela kodwa lakuyo engeyokholo lukaAbrahama, ongubaba wethu sonke,
೧೬ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.
17 (njengokulotshiweyo ukuthi: Ngikumisile ukuthi ube nguyise wezizwe ezinengi) phambi kwakhe akholwa kuye, uNkulunkulu, ophilisa abafileyo, lobiza izinto ezingekho ngokungathi zikhona.
೧೭“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.
18 Owathi emelane lethemba wakholwa ngethemba, ukuze abe nguyise wezizwe ezinengi, njengalokho okwatshiwoyo ukuthi: Izakuba njalo inzalo yakho.
೧೮“ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.
19 Njalo kabanga buthakathaka ekholweni, kanakananga umzimba wakhe uqobo owawusufile, ngoba wayesengaba leminyaka elikhulu, lokufa kwesizalo sikaSara;
೧೯ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.
20 njalo kathandabuzanga ngesithembiso sikaNkulunkulu ngokungakholwa, kodwa waqiniswa ekholweni, enika uNkulunkulu udumo,
೨೦ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.
21 njalo eqinisekile ngokupheleleyo ukuthi lokho ayekuthembisile, ulamandla ngitsho okukwenza.
೨೧ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವುದಕ್ಕೆ ಸಮರ್ಥನೆಂದು ಪೂರ್ಣದೃಢತೆಯುಳ್ಳವನಾದನು.
22 Ngalokho-ke kwabalelwa kuye ukuthi yikulunga.
೨೨ಆದ್ದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು.
23 Kakubhalwanga-ke ngenxa yakhe yedwa, ukuthi kwabalelwa kuye;
೨೩ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬುದು ಅವನಿಗೋಸ್ಕರ ಮಾತ್ರವಲ್ಲದೆ ನಮಗೋಸ್ಕರವೂ ಬರೆದಿರುವುದು.
24 kodwa langenxa yethu, esizabalelwa khona, thina esikholwa kuye owavusa uJesu iNkosi yethu kwabafileyo,
೨೪ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.
25 owanikelwa ngenxa yeziphambeko zethu, wavuswa ngenxa yokulungisiswa kwethu.
೨೫ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.

< KwabaseRoma 4 >