< उत्पत्ति 25 >
1 अब्राहामले अर्की एउटी पत्नी विवाह गरे ।
೧ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬ ಹೆಂಡತಿಯನ್ನು ಮದುವೆ ಮಾಡಿಕೊಂಡನು.
2 तिनको नाउँ कतूरा थियो । तिनले अब्राहामबाट जिम्रान, योक्षान, मदान, मिद्यान, यिशबाक र शूहलाई जन्माइन् ।
೨ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.
3 योक्षान शेबा र ददानका पिता भए । अश्शूरी, लतूशी र लऊम्मीहरू ददानका सन्तान थिए ।
೩ಯೊಕ್ಷಾನನು ಶೆಬಾ, ದೆದಾನ್ ಎಂಬಿವರನ್ನು ಪಡೆದನು. ಅಶ್ಮೂರ್ಯರೂ, ಲೆಟೂಶ್ಯರೂ, ಲೆಯುಮ್ಯರೂ ದೆದಾನನಿಂದ ಹುಟ್ಟಿದವರು.
4 मिद्यानका छोराहरूचाहिँ एपा, एपेर, हानोक, अबीदा र एल्दा थिए । यी सबै कतूराका सन्तान थिए ।
೪ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು.
5 अब्राहामले आफूसँग भएका सबै थोक इसहाकलाई दिए ।
೫ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು.
6 तर आफू जीवित छँदै तिनका उपपत्नीपट्टिका छोराहरूलाई उनले उपहारहरू दिए, र आफ्ना छोरा इसहाकबाट छुट्याएर तिनीहरूलाई पूर्व देशतिर पठाए ।
೬ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು.
7 अब्राहाम जम्मा एक सय पचहत्तर वर्षसम्म बाँचे ।
೭ಅಬ್ರಹಾಮನು ನೂರ ಎಪ್ಪತ್ತೈದು ವರ್ಷ ಬದುಕಿದನು.
8 अब्राहाम पुरा जीवन जिएर बुढ़ेसकालमा मरे, र आफ्ना मरेका पिता-पुर्खाहरूसँग मिल्न गए ।
೮ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
9 तिनका छोराहरू इसहाक र इश्माएलले तिनलाई हित्ती सोहोरको छोरा एप्रोनको खेतमा भएको मम्रेनजिकको मक्पेलाको ओडारमा गाडे ।
೯ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.
10 त्यो खेत अब्राहामले हेतका छोराहरूबाट किनेका थिए । अब्राहाम आफ्नी पत्नी सारासित त्यहीँ नै गाडिए ।
೧೦ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.
11 अब्राहामको मृत्युपछि परमेश्वरले तिनका छोरा इसहाकलाई आशिष् दिनुभयो, र इसहाक बेअर-लहै-रोइ नजिकै बसोबास गरे ।
೧೧ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹೈರೋಯಿಯ ಹತ್ತಿರ ವಾಸವಾಗಿದ್ದನು.
12 साराकी कमारी मिश्री हागारपट्टिबाट जन्मेको अब्राहामको छोरो इश्माएलका सन्तान यिनै थिए ।
೧೨ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ.
13 जन्म क्रमको सूचीअनुसार इश्माएलका छोराहरूका नाउँ यी नै थिएः इश्माएलको जेठो छोरो नबायोत, केदार, अदबेल,
೧೩ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,
14 मिब्साम, मिश्मा, दुमा, मस्सा,
೧೪ಮಿಷ್ಮಾ, ದೂಮಾ, ಮಸ್ಸಾ,
15 हदद, तेमा, यतूर, नापीश र केदमा ।
೧೫ಹದದ್, ತೇಮಾ, ಯಟೂರ್, ನಾಫೀಷ್, ಕೇದ್ಮಾ ಎಂಬುವವರೇ.
16 इश्माएलका छोराहरू यी नै थिए । तिनीहरूका बस्ती र छाउनीहरूअनुसार ती बाह्र कुलनायकका नाउँ यी नै थिए ।
೧೬ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ.
17 इश्माएलको जम्मा उमेर एक सय सैँतिस वर्ष हुँदा तिनको मृत्यु भयो र तिनी आफ्ना पिता-पुर्खाहरूसँगै मिल्न गए ।
೧೭ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
18 तिनीहरूको बसोबास मिश्रको सिमानानजिक भएको अश्शूर देशतिर पर्ने हवीलादेखि शूरसम्म थियो । तिनीहरू एक-अर्काको शत्रुतामा बसे ।
೧೮ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತ ದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ ಎದುರಾಗಿ ವಾಸಿಸಿದರು.
19 अब्राहामका छोरा इसहाकको वृत्तान्त यही हो । अब्राहाम इसहाकका पिता भए ।
೧೯ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ.
20 पद्दन-आरामका अरामी बतूएलकी छोरी अरामी लाबानकी बहिनी रिबेकासँग विवाह गर्दा इसहाक जम्मा चालिस वर्षका थिए ।
೨೦ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.
21 तिनी बाँझी भएकी हुनाले इसहाकले आफ्नी पत्नीको निम्ति परमप्रभुसँग प्रार्थना गरे । परमप्रभुले तिनको प्रार्थना सुन्नुभयो, र तिनकी पत्नी रिबेका गर्भवती भइन् ।
೨೧ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
22 तिनको गर्भमा भएका बालकहरू एक-अर्कासँग लड्न लागे, र तिनले भनिन् “मलाई किन यस्तो भयो?” तिनले यसको बारेमा परमप्रभुसँग सोधिन् ।
೨೨ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು.
23 परमप्रभुले तिनलाई भन्नुभयो, “तेरो कोखमा दुई जाति छन्, तेरो गर्भदेखि नै दुई जाति छुट्टिनेछन् । एक जाति अर्कोभन्दा बलवान् हुनेछ, र जेठाले कान्छाको सेवा गर्नेछ ।”
೨೩ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.
24 तिनको सुत्केरी हुने बेला आउँदा तिनको कोखमा जुम्ल्याहा थिए ।
೨೪ಆಕೆ ದಿನತುಂಬಿದಾಗ ಅವಳಿ ಮಕ್ಕಳನ್ನು ಹೆತ್ತಳು.
25 जेठोचाहिँ शरीरभरि रौँको लुगा लगाएजस्तै रातो वर्णको जन्म्यो । तिनीहरूले त्यसको नाउँ एसाव राखे ।
೨೫ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು. ಅದಕ್ಕೆ “ಏಸಾವ” ಎಂದು ಹೆಸರಿಟ್ಟರು.
26 त्यसपछि त्यसको भाइ बाहिर निस्क्यो । त्यसको हातले एसावको कुर्कुच्चा समातिरहेको थियो । त्यसको नाउँ याकूब राखियो । इसाहककी पत्नीले तिनीहरूलाई जन्माउँदा तिनी साठी वर्ष पुगेका थिए ।
೨೬ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು.
27 बालकहरू बढे, र एसावचाहिँ सिपालु सिकारी र मैदानमा डुलिहिँड्ने मानिस भए, र याकूबचाहिँ पालमा बसिरहने शान्त स्वभावका मानिस भए ।
೨೭ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.
28 इसहाकले एसावलाई माया गर्थे, किनभने उनले शिकार गरेर ल्याएको मासु तिनले खान पाउँथे । तर रिबेकाले चाहिँ याकूबलाई माया गर्थिन् ।
೨೮ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.
29 याकूबले सुरुवा पकाए । एसाव मैदानबाट आए, र उनी भोकले कमजोर भएका थिए ।
೨೯ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ;
30 एसावले याकूबलाई भने, “कृपया, मलाई त्यो रातो सुरुवा खान देऊ, म थकित छु ।” यसैकारण उनलाई एदोम भनियो ।
೩೦ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು.
31 याकूबले भने, “पहिले तपाईंको ज्येष्ठ-अधिकार मलाई बेच्नुहोस् ।”
೩೧ಯಾಕೋಬನು ಅವನಿಗೆ, “ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿ ಬಿಡು” ಅನ್ನಲು.
32 एसावले भने, “हेर, म त मर्नै आँटेको छु । मलाई त्यो ज्येष्ठ-अधिकारको के काम?”
೩೨ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು.
33 याकूबले भने, “पहिले मसँग शपथ खानुहोस् ।” तब एसावले शपथ खाए, र यसरी उनले आफ्नो ज्येष्ठ-अधिकार याकूबलाई बेचे ।
೩೩ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.
34 याकूबले एसावलाई रोटी र दालको सुरुवा दिए । एसावले खानपान गरे अनि उठेर आफ्नो बाटो लागे । यसरी एसावले आफ्नो ज्येष्ठ-अधिकारलाई लत्त्याए ।
೩೪ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು.