< मत्ती 28 >
1 अब शबाथको समय सकिनै लाग्दा हप्ताको पहिलो दिनको झिसमिसेमा मरियम मग्दलिनी र मरियम नाउँ गरेकी अर्की स्त्री चिहान हेर्न आए ।
೧ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು.
2 हेर, त्यहाँ विशाल भूकम्प गयो, किनकि परमप्रभुका एक स्वर्गदूत स्वर्गबाट तल ओर्ले; अनि ढुङ्गा हटाए, र त्यसमाथि बसे ।
೨ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.
3 तिनको रूप बिजुलीजस्तो थियो, र पहिरन हिउँजस्तै सेतो थियो ।
೩ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು;
4 पहरेदारहरू डरले थरथर काँपे र मरेका मानिसहरूजस्तै भए ।
೪ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು.
5 स्वर्गदूतले ती स्त्रीहरूलाई सम्बोधन गरे र भने, “भयभीत नहोओ, किनकि मलाई थाहा छ, कि तिमीहरूले क्रुसमा टाँगिनुभएका येशूलाई खोज्दै छौ ।
೫ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;
6 उहाँ यहाँ हुनुहुन्न, तर जस्तो उहाँले भन्नुभएको थियो, उहाँ जीवित भई उठ्नुभएको छ । आएर प्रभुलाई राखिएको ठाउँ हेर ।
೬ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ;
7 झट्टै जाओ र उहाँका चेलाहरूलाई भन, ‘उहाँ मृतकहरूबाट जीवित भई उठ्नुभएको छ । हेर, उहाँ तिमीहरूभन्दा अगि गालीलमा जाँदै हुनुहुन्छ । त्यहीँ नै तिमीहरूले उहाँलाई देख्नेछौ ।’ हेर, मैले तिमीहरूलाई बताइदिएको छु ।”
೭ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು.
8 ती स्त्रीहरू तुरुन्तै डर र आनन्दका साथ चिहानबाट निस्के, अनि उहाँका चेलाहरूलाई यो बताउनको निम्ति दौडे ।
೮ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು.
9 हेर, येशूले तिनीहरूलाई भेट्नुभयो र भन्नुभयो, “सबैलाई अभिवादन छ ।” ती स्त्रीहरू आए, उहाँका पाउ पक्रे, र उहाँलाई दण्डवत् गरे ।
೯ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.
10 त्यसपछि येशूले तिनीहरूलाई भन्नुभयो, “नडराओ । जाओ मेरा भाइहरूलाई गालीलमा जानू भनेर भनिदेओ । त्यहाँ तिनीहरूले मलाई भेट्नेछन् ।”
೧೦ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು.
11 जब ती स्त्रीहरू जाँदै थिए, हेर, केही पहरेदारहरू सहरमा गए र मुख्य पुजारीहरूलाई त्यहाँ भएका सबै घटना बताइदिए ।
೧೧ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು.
12 जब पुजारीहरूले एल्डरहरूलाई भेटे र ती सबै घटनाको बारेमा तिनीहरूसँग छलफल गरे, तिनीहरूले सिपाहीहरूलाई धेरै पैसा दिए,
೧೨ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು,
13 र तिनीहरूलाई भने, “तिमीहरूले अरूहरूलाई यस्तो भन, ‘हामी सुतिरहेका बेला येशूका चेलाहरू आए र उनको मृत शरीरलाई चोरेर लगे ।’
೧೩“‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ;
14 यदि यो खबर हाकिमकहाँ पुग्यो भने, हामी उहाँलाई राजी गराउनेछौँ र तिमीहरूलाई कुनै समस्यामा पर्न दिनेछैनौँ ।”
೧೪ಈ ಸುದ್ದಿಯು ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದರು.
15 अनि ती सिपाहीहरूले पैसा लिए र उनीहरूलाई जस्तो निर्देशन दिइएको थियो, त्यस्तै गरे । यही खबर यहूदीहरूका माझमा सर्वत्र फैलियो र आजको दिनसम्म पनि यही कायम छ ।
೧೫ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.
16 तर एघार जना चेला गालीलको त्यस डाँडामा गए जहाँ येशूले जानू भनी तिनीहरूलाई निर्देशन दिनुभएको थियो ।
೧೬ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು.
17 जब उनीहरूले उहाँलाई देखे, उनीहरूले उहाँलाई दण्डवत् गरे, तर कतिले चाहिँ शङ्का गरे ।
೧೭ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.
18 येशू उनीहरूकहाँ आउनुभयो र उनीहरूसँग बोल्नुभयो र भन्नुभयो, “स्वर्ग र पृथ्वीमा सबै अधिकार मलाई दिइएको छ ।
೧೮ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.
19 यसकारण, जाओ र सबै देशका जातिलाई चेला बनाओ । पिता, पुत्र र पवित्र आत्माको नाउँमा तिनीहरूलाई बप्तिस्मा देओ ।
೧೯ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.
20 मैले तिमीहरूलाई आज्ञा गरेका सबै कुरा पालन गर्न तिनीहरूलाई सिकाओ । र हेर, यस संसारको अन्तसम्म पनि म सधैँ तिमीहरूको साथमा छु ।” (aiōn )
೨೦ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗುಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು. (aiōn )