< Vakolosai 4 >
1 Vakulu nyenye, mvakitila vavanda vinu kwa ubwina na gala geigana Chapanga, kuni mkumbuka kuvya na nyenye muvi wa Bambu kunani kwa Chapanga.
೧ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ.
2 Msindimala mkotoka kuleka kumuyupa Chapanga, na pemwiyupa mujiyangalila, na kumsengusa Chapanga.
೨ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
3 Mewawa, mutiyupila tete mewa muni Chapanga atidindulila mlyangu kukokosa ujumbi waki kuvala mfiyu wa Kilisitu. Ndava yeniyo nene nivili hinu muchifungu.
೩ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.
4 Hinu, ndi muniyupila muni nihotola kukokosa ujumbi wenuwo uvya hotohoto na ngati cheyiganikiwa.
೪ನಾನು ಆ ಸತ್ಯಾರ್ಥವನ್ನು ಹೇಳಬೇಕಾದ ರೀತಿಯಲ್ಲಿ ಸ್ಪಷ್ಟವಾಗಿ ಹೇಳುವಂತೆ ಪ್ರಾರ್ಥಿಸಿರಿ.
5 Muvya na luhala chemwitama na vandu vangamsadika Kilisitu muhengela lihengu bwina lukumbi ulo lwemumivili nawu.
೫ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.
6 Malongesi ginu giganikiwa kuvya gabwina na gakutangatila vandu, na mganikiwa kumanya kumyangula kila mundu.
೬ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.
7 Nikumtuma mlongo witu Tukiko mganu kwinu, muhenga lihengu mchakaka na mtumisi muyitu mulihengu la Bambu, yati akuvapela malovi gangu goha.
೭ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು.
8 Ndi ndava ya kumutuma kwinu muni avakangamalisa mitima yinu kwa kuvajovela malovi gitu.
೮ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ,
9 Ibwela pamonga na Onesimo, mlongo witu mganu na mchakaka, ndi mkolonjinji muyinu. Yati vakuvapela malovi ga mambu goha gegihengeka apa.
೯ಅವನನ್ನು ನಂಬಿಗಸ್ತನು ಮತ್ತು ಪ್ರಿಯ ಸಹೋದರನಾಗಿರುವ ನಿಮ್ಮ ಊರಿನವನೇ ಆದ ಓನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುತ್ತಿರುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.
10 Alistako, mweavi muchifungu, pamonga na nene, akuvajambusa, mewawa Maluko mlamu waki Banaba, mmali kulagaziwa ndava yaki akabwela kwinu mumkalibisa.
೧೦ನನ್ನ ಜೊತೆ ಸೆರೆಯವನಾದ ಅರಿಸ್ತಾರ್ಕನೂ ಮತ್ತು ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ.
11 Na Yoshua mweikemiwa Yusto, akuvajambusa. Pagati ya Vayawudi mwapokili sadika, venava ndu, ndi vevihenga lihengu pamonga na nene ndava ya unkosi wa Chapanga, venavo ndi vevakunitangatila neju.
೧೧ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು.
12 Epafla, mkolonjinji muyinu mtumisi wa Kilisitu Yesu, akuvajambusa. Magono goha akuvayupila nyenye kwa makakala muni muhotola kuyima chakukangamala, mkangala msadika hotohoto na mu mambu goha geigana Chapanga.
೧೨ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.
13 Nihotola kujova malovi ndava yaki kuvya ihenga lihengu kwa kukangamala ndava yinu na ndava ya vandu va Laodikea na Hilapoli.
೧೩ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ.
14 Nkozi witu mganu Luka yula mlamisa pamonga na Dema, vakuvajambusa.
೧೪ಪ್ರಿಯ ವೈದ್ಯನಾಗಿರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.
15 Jambusa yitu kwa valongo va Laodikea. Mumjambusa mlumbu Nimfa pamonga na vandu voha vevikonganeka kunyumba yaki, msambi wa vandu vevakumsadika Kilisitu vakumjambusa.
೧೫ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ.
16 Mkamala kusoma balua yeniyo muvapela na vayinu msambi wa vandu vevakumsadika Kilisitu va Laodikea, na balua yenivayandikili vene vavapela nyenye muyisoma.
೧೬ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ.
17 Mumjovela Alikipo lihengu leapewili na Bambu kuyihenga ayikamalisa.
೧೭ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ.
18 Niyandika aga kwa chiwoko changu namwene, jambusa kuhuma kwangu nene Pauli. Mkumbuka kuvya nivili muchifungu! Nikuvaganila ubwina wa Chapanga uvya na nyenye Ena.
೧೮ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.