< 3 Mosebok 11 >
1 Og Herren talte til Moses og Aron og sa til dem:
೧ಯೆಹೋವನು ಮೋಶೆ ಆರೋನರ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
2 Tal til Israels barn og si: Dette er de dyr som I kan ete av alle firføtte dyr på jorden:
೨“ನೀವು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ಭೂಮಿಯ ಮೇಲಿರುವ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು,
3 Alle de firføtte dyr som har klover og har klovene kløvd helt igjennem, og som tygger drøv, dem kan I ete.
೩ಅವು ಯಾವುವೆಂದರೆ ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.
4 Det er bare disse I ikke skal ete blandt dem som tygger drøv, og blandt dem som har klover: kamelen, for den tygger vel drøv, men den har ikke klover, den skal være uren for eder,
೪ಆದರೆ ಯಾವ ಪ್ರಾಣಿಯು ಮೆಲಕು ಹಾಕಿದರೂ ಗೊರಸು ಸೀಳಲಿರುವುದಿಲ್ಲವೋ ಮತ್ತು ಯಾವ ಪ್ರಾಣಿಯು ಗೊರಸು ಸೀಳಿದರೂ ಮೆಲಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆಯು ಮೆಲಕುಹಾಕುವಂಥದು ಸರಿ; ಆದರೂ ಅದಕ್ಕೆ ಸೀಳುಗೊರಸು ಇಲ್ಲವಾದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದೆಣಿಸಬೇಕು.
5 og fjellgrevlingen, for den tygger vel drøv, men har ikke klover, den skal være uren for eder,
೫ಬೆಟ್ಟದ ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದುದರಿಂದ ಅದು ನಿಮಗೆ ಅಶುದ್ಧ.
6 og haren, for den tygger vel drøv, men har ikke klover, den skal være uren for eder,
೬ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದೂ ನಿಮಗೆ ಅಶುದ್ಧ.
7 og svinet, for det har vel klover og har klovene kløvd helt igjennem, men det tygger ikke drøv, det skal være urent for eder.
೭ಹಂದಿಯ ಗೊರಸು ಸೀಳಿದೆ; ಆದರೂ ಅದು ಮೆಲಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ.
8 Av disse dyrs kjøtt skal I ikke ete, og ved deres døde kropper skal I ikke røre; de skal være urene for eder.
೮ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು; ಇವುಗಳನ್ನು ಅಶುದ್ಧವೆಂದೆಣಿಸಬೇಕು.
9 Dette kan I ete av alt det som er i vannet: Alt det i vannet - i havene og i elvene - som har finner og skjell, det kan I ete.
೯“‘ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.
10 Men det som ikke har finner og skjell av alt det som finnes i havene og i elvene, av alt det som vrimler i vannet, og av alt levende som er i vannet, det skal være en vederstyggelighet for eder.
೧೦ಆದರೆ ಸಮುದ್ರದಲ್ಲಿದ್ದರೂ ಅಥವಾ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.
11 En vederstyggelighet skal de være for eder; av deres kjøtt skal I ikke ete, og deres døde kropper skal I holde for en vederstyggelighet.
೧೧ಅಂತಹವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಅಸಹ್ಯವಾಗಿರಬೇಕು.
12 Alt i vannet som ikke har finner og skjell, det skal være en vederstyggelighet for eder.
೧೨ಜಲಜಂತುಗಳಲ್ಲಿ ಯಾವುದಕ್ಕೆ ರೆಕ್ಕೆಗಳೂ, ಪರೆಪರೆಯಾದ ಮೈ ಇಲ್ಲವೋ ಅವು ನಿಮಗೆ ಅಸಹ್ಯವಾಗಿರಬೇಕು.
13 Dette er de fugler I skal holde for en vederstyggelighet, de skal ikke etes, de er en vederstyggelighet: landørnen og havørnen og fiskeørnen
೧೩“‘ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು,
14 og glenten, og falken efter sine arter,
೧೪ಕ್ರೌಂಚ, ಹದ್ದು,
15 alle ravner efter sine arter,
೧೫ಸಕಲವಿಧವಾದ ಗಿಡುಗ,
16 og strutsen og gjøken og måken, og høken efter sine arter,
೧೬ಸಕಲವಿಧವಾದ ಕಾಗೆ, ಉಷ್ಟ್ರಪಕ್ಷಿ, ಉಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ,
17 og kattuglen og dykkeren og hubroen
೧೭ಗೂಬೆ, ಹೆಗ್ಗೂಬೆ, ನೀರುಕಾಗೆ,
18 og nattravnen og pelikanen og gribben
೧೮ಬಿಳಿಗೂಬೆ, ಕರೇಟು, ಕಣಜ ಗೂಬೆ, ರಣಹದ್ದು, ಕಡಲ ಡೇಗೆ,
19 og storken, og heiren efter sine arter, og hærfuglen og flaggermusen.
೧೯ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಇವುಗಳ ಮಾಂಸವನ್ನು ತಿನ್ನಬಾರದು.
20 Alt kryp som har vinger og går på fire føtter, skal være en vederstyggelighet for eder.
೨೦“‘ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ನಿಷಿದ್ಧವಾಗಿರಬೇಕು.
21 Av alt kryp som har vinger og går på fire føtter, må I bare ete dem som har springben ovenfor sine føtter til å hoppe på marken med.
೨೧ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು.
22 Av dem kan I ete: arbe efter sine arter og solam efter sine arter og hargol efter sine arter og hagab efter sine arter.
೨೨ಸಕಲವಿಧವಾದ ಮಿಡತೆಗಳನ್ನು, ಬೋಳುಮಿಡತೆಗಳನ್ನು, ಜಿಟ್ಟಿಮಿಡತೆಗಳನ್ನು ಮತ್ತು ಸಣ್ಣಮಿಡತೆ ಇವುಗಳನ್ನೆಲ್ಲಾ ತಿನ್ನಬಹುದು.
23 Men alt annet kryp som har vinger og fire føtter, skal være en vederstyggelighet for eder.
೨೩ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವಾಗಿವೆ.
24 Ved disse dyr blir I urene; enhver som rører ved deres døde kropper, skal være uren til om aftenen,
೨೪“‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
25 og enhver som har båret slik en død kropp, skal tvette sine klær og være uren til om aftenen.
೨೫ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.
26 Ethvert firføtt dyr som vel har klover, men ikke har klovene kløvd helt igjennem og ikke tygger drøv, skal være urent for eder; enhver som rører ved dem, blir uren.
೨೬ಅವು ಯಾವುವೆಂದರೆ, ಯಾವ ಪಶುವಿನ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲಕುಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಯಾರನ್ನು ಅವು ಸೋಂಕುವವೋ ಅವನು ಅಶುದ್ಧನಾಗುವನು.
27 Og alle firføtte dyr som går på labber, skal være urene for eder; enhver som rører ved deres døde kropper, skal være uren til om aftenen,
೨೭ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವ ಎಲ್ಲವುಗಳು ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣವನ್ನು ಯಾರು ಮುಟ್ಟುವರೋ ಅವರು ಆ ದಿನದ ಸಾಯಂಕಾಲದ ವರೆಗೂ ಅಶುದ್ಧರಾಗಿರುವರು.
28 og den som har båret deres døde kropper, skal tvette sine klær og være uren til om aftenen; de skal være urene for eder.
೨೮ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.
29 Og blandt de smådyr som kryper på jorden, skal disse være de ureneste for eder: muldvarpen og musen og alle slags firben,
೨೯“‘ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ,
30 og pinnsvinet og jordrotten og padden og sneglen og kameleonen.
೩೦ಹಾವರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ.
31 Disse skal være de ureneste for eder blandt alle smådyr; enhver som rører ved dem når de er døde, skal være uren til om aftenen.
೩೧ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವನ್ನು ಮುಟ್ಟುವವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
32 Og alt det som noget av disse dyr faller på når de er døde, blir urent, enten det er et trekar eller klær eller skinn eller sekker, eller hvad redskap det kan være som det gjøres noget arbeid med; det skal legges i vann og være urent til om aftenen; da er det rent.
೩೨ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.
33 Og om noget av dem faller i et lerkar, så blir alt det som er i karet urent, og karet selv skal I slå i stykker;
೩೩ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.
34 all mat som folk eter, og som tillages med vann, blir da uren, og alt drikke som folk drikker, blir urent, hvad kar det enn er i.
೩೪ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದರೆ ಅಶುದ್ಧವಾಗುವುದು. ಪಾನ ದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು.
35 Og alt det som slik en død kropp faller på, blir urent; enten det er ovn eller gryte, skal de brytes i stykker, de er urene og skal være urene for eder.
೩೫ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.
36 Bare kilder og brønner som det samler sig vann i, blir like rene; men den som rører ved deres døde kropper, blir uren.
೩೬ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು.
37 Og om slik en død kropp faller på korn som skal såes, er kornet like rent;
೩೭ಬಿತ್ತಬೇಕಾದ ಬೀಜದ ಮೇಲೆ ಈ ಜಂತುಗಳ ಹೆಣ ಬಿದ್ದರೆ ಆ ಬೀಜವು ಅಶುದ್ಧವಾಗುವುದಿಲ್ಲ.
38 men slåes det vann på såkornet, og en av de døde kropper faller på det, da skal kornet være urent for eder.
೩೮ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ.
39 Dør noget av de firføtte dyr som er til føde for eder, da skal den som rører ved dets døde kropp, være uren til om aftenen,
೩೯“‘ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
40 og den som har ett av dets døde kropp, skal tvette sine klær og være uren til om aftenen; og den som har båret dets døde kropp, skal tvette sine klær og være uren til om aftenen.
೪೦ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
41 Alle smådyr som kryper på jorden, skal være en vederstyggelighet; de skal ikke etes.
೪೧“‘ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಅಸಹ್ಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.
42 Hverken det som kryper på buken, eller det som går på fire føtter, eller det som har flere føtter iblandt alle smådyr som kryper på jorden, må I ete; det skal være en vederstyggelighet.
೪೨ಹೊಟ್ಟೆಯಿಂದ ಹರಿದು ಹೋಗುವುದನ್ನು, ಕಾಲಿನಿಂದ ಹರಿದಾಡುವಂಥದನ್ನು, ಬಹಳ ಕಾಲುಳ್ಳದ್ದನ್ನು ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನು ನೀವು ತಿನ್ನಬಾರದು; ಅವು ಅಸಹ್ಯವಾಗಿವೆ.
43 Gjør ikke eder selv vederstyggelige ved noget sådant kryp, og la eder ikke smitte ved dem, så I blir urene!
೪೩ನೀವು ಅಂತಹ ಯಾವ ಸಣ್ಣ ಜೀವಿಯನ್ನು ತಿಂದು ನಿಮ್ಮನ್ನು ನೀವೇ ಹೇಸಿಗೆಮಾಡಿಕೊಂಡು ಅಶುದ್ಧರಾಗಬಾರದು.
44 For jeg er Herren eders Gud, og I skal hellige eder, og I skal være hellige, for jeg er hellig; I skal ikke gjøre eder selv urene ved noget av det kryp som rører sig på jorden.
೪೪ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.
45 For jeg er Herren, som førte eder op fra Egyptens land for å være eders Gud, og I skal være hellige, for jeg er hellig.
೪೫ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.
46 Dette er loven om de firføtte dyr og fuglene og alle de liv som rører Sig i vannet, og om alle de dyr som kryper på jorden,
೪೬“‘ಇದೇ ಪಶು, ಪಕ್ಷಿ, ಜಲಚರ ಮತ್ತು ಕ್ರಿಮಿಕೀಟಗಳ ವಿಷಯವಾದ ನಿಯಮ.
47 så I kan skille mellem urent og rent, mellem dyr som kan etes, og dyr som ikke skal etes.
೪೭ಇದರಿಂದ ಶುದ್ಧ ಹಾಗು ಅಶುದ್ಧಗಳನ್ನು, ತಿನ್ನಬಹುದಾದ ಜೀವಿಗಳು ಮತ್ತು ತಿನ್ನಬಾರದಾದ ಜೀವಿಗಳ ಕುರಿತು ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು.’”