< 4 Mosebok 23 >
1 Da sa Bileam til Balak: Bygg syv alter for mig her, og la mig få hit syv okser og syv værer!
೧ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು.
2 Balak gjorde som Bileam sa; og Balak og Bileam ofret en okse og en vær på hvert alter.
೨ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಯಜ್ಞವೇದಿಯ ಮೇಲೆ ಒಂದು ಹೋರಿಯನ್ನು ಮತ್ತು ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು.
3 Så sa Bileam til Balak: Bli stående her ved ditt brennoffer, så vil jeg gå bort en stund; kanskje Herren kommer mig i møte, og hvad han lar mig skue, det skal jeg la dig få vite. Så gikk han op på en bar høide.
೩ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
4 Der kom Gud Bileam i møte, og Bileam sa til ham: Nu har jeg stelt til syv alter og ofret en okse og en vær på hvert alter.
೪ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಆ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಒಂದೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನು, ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.
5 Da la Herren et ord i Bileams munn og sa: Vend tilbake til Balak og tal som jeg har sagt dig!
೫ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.
6 Da han kom tilbake, så han Balak stå ved sitt brennoffer sammen med alle Moabs høvdinger.
೬ಬಿಳಾಮನು ಬಾಲಾಕನ ಬಳಿಗೆ ಹಿಂತಿರುಗಿ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ್ದ ಯಜ್ಞವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನ ಬಳಿಯಲ್ಲಿದ್ದರು.
7 Da tok han til å kvede og sa: Fra Aram henter mig Balak, fra Østens fjell Moabs konge: Kom og forbann for mig Jakob! Kom og tal ondt over Israel!
೭ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’
8 Hvorledes skal jeg forbanne den Gud ikke forbanner? Hvorledes skal jeg tale ondt over den Herren ikke taler ondt over?
೮ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವನು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?
9 For fra fjellets tinde ser jeg ham, og fra høidene skuer jeg ham: Se, det er et folk som bor for sig selv, og blandt hedningefolkene regner det sig ikke.
೯ಬಂಡೆಗಳ ಶಿಖರದಿಂದ ನಾನು ಅವರನ್ನು ನೋಡುತ್ತೇನೆ; ಗುಡ್ಡದಿಂದ ಅವರನ್ನು ದೃಷ್ಟಿಸುತ್ತೇನೆ. ಆ ಜನಾಂಗವು ಪ್ರತ್ಯೇಕವಾಗಿ ವಾಸಿಸುವುದು. ಆ ಜನಾಂಗವು ಇತರ ಜನಾಂಗಗಳಂತೆ ಸಾಧಾರಣ ಜನರೆಂದು ಎಣಿಸಲ್ಪಡುವುದಿಲ್ಲ.
10 Hvem teller Jakobs ætt, tall-løs som støvet, eller endog bare fjerdedelen av Israel? Min sjel dø de opriktiges død, og mitt endelikt vorde som deres!
೧೦ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು.
11 Da sa Balak til Bileam: Hvad har du gjort mot mig? Til å forbanne mine fiender hentet jeg dig, og se, du har velsignet!
೧೧ಬಾಲಾಕನು ಬಿಳಾಮನಿಗೆ, “ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿದೆ” ಎಂದು ಹೇಳಿದನು.
12 Men han svarte: Skulde jeg ikke akte på det Herren legger i min munn, og tale det?
೧೨ಅದಕ್ಕೆ ಬಿಳಾಮನು, “ಯೆಹೋವನು ಹೇಳುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ?” ಎಂದನು.
13 Da sa Balak til ham: Kjære, kom og vær med mig til et annet sted, hvorfra du kan se dem - dog vil du bare få se den ytterste del av folket, det hele folk får du ikke se - og forbann dem for mig derfra!
೧೩ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು.
14 Så tok han ham med sig til speider-haugen på toppen av Pisga og bygget der syv alter og ofret en okse og en vær på hvert alter.
೧೪ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.
15 Og Bileam sa til Balak: Bli stående her ved ditt brennoffer mens jeg går der bort for å få en åpenbaring.
೧೫ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು.
16 Og Herren kom Bileam i møte og la et ord i hans munn og sa: Vend tilbake til Balak og tal som jeg har sagt dig!
೧೬ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟನು. ಆಗ ಅವನು ಹೇಳಿದ್ದೇನೆಂದರೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಹೀಗೆ ಹೇಳಬೇಕು” ಎಂದನು.
17 Da han kom til ham, så han ham stå ved sitt brennoffer sammen med Moabs høvdinger; og Balak sa til ham: Hvad har Herren talt?
೧೭ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದನು.
18 Da tok han til å kvede og sa: Stå op, Balak, og hør! Lytt til mig, du Sippors sønn!
೧೮ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು. ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.
19 Gud er ikke et menneske at han skulde lyve, ei heller et menneskes barn at han skulde angre; skulde han si noget og ikke gjøre det, skulde han tale og ikke sette det i verk?
೧೯ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
20 Se, å velsigne blev mig gitt; han har velsignet, og jeg kan ikke omstøte det.
೨೦ಅವರನ್ನು ಆಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು. ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.
21 Ei skuer han urett i Jakob, ei ser han elendighet i Israel; Herren hans Gud er med ham, og kongejubel lyder der.
೨೧ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.
22 Gud førte dem ut av Egypten; styrke har de som en villokse.
೨೨ಅವರನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದವನು ದೇವರೇ, ಅವರು ಕಾಡುಕೋಣದಷ್ಟು ಬಲವುಳ್ಳವರು.
23 For ikke finnes det trolldom i Jakob, og ikke spådomskunster i Israel; når tiden er der, blir det sagt til Jakob og til Israel hvad Gud vil gjøre.
೨೩ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’
24 Se - et folk som reiser sig som en løvinne, springer op som en løve; ei legger det sig før det har mettet sig med rov og drukket dreptes blod.
೨೪ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ಮಾಂಸವನ್ನು ತಿಂದು ತೃಪ್ತಿಹೊಂದದ ಹೊರತು ಮಲಗುವುದಿಲ್ಲ ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.”
25 Da sa Balak til Bileam: Du skal hverken forbanne det eller velsigne det.
೨೫ಆಗ ಬಾಲಾಕನು ಬಿಳಾಮನಿಗೆ, “ನೀನು ಅವರನ್ನು ಶಪಿಸಲೂ ಬೇಡ; ಆಶೀರ್ವದಿಸಲೂ ಬೇಡ” ಎಂದು ಹೇಳಿದನು.
26 Men Bileam svarte Balak: Har jeg ikke allerede sagt dig at jeg i ett og alt må gjøre som Herren sier?
೨೬ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, “ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಲಿಲ್ಲವೇ?” ಎಂದನು.
27 Da sa Balak til Bileam: Kjære, kom, så vil jeg ta dig med til et annet sted; kanskje Gud vil tillate at du forbanner dem for mig derfra.
೨೭ತರುವಾಯ ಬಾಲಾಕನು ಬಿಳಾಮನಿಗೆ, “ಬೇರೊಂದು ಸ್ಥಳಕ್ಕೆ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವುದಕ್ಕೆ ದೇವರು ಅನುಮತಿ ಕೊಡಬಹುದು” ಎಂದು ಹೇಳಿದನು.
28 Så tok Balak Bileam med op på toppen av Peor, hvorfra en skuer ut over ørkenen.
೨೮ಆದಕಾರಣ ಬಾಲಾಕನು ಬಿಳಾಮನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ.
29 Da sa Bileam til Balak: Bygg syv alter for mig her og la mig få syv okser og syv værer!
೨೯ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು” ಎಂದು ಹೇಳಿದನು
30 Og Balak gjorde som Bileam sa, og ofret en okse og en vær på hvert alter.
೩೦ಬಿಳಾಮನ ಅಪ್ಪಣೆಯ ಪ್ರಕಾರ ಬಾಲಾಕನು ಪ್ರತಿಯೊಂದು ಯಜ್ಞ ವೇದಿಯಲ್ಲಿ ಒಂದು ಹೋರಿಯನ್ನೂ. ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.