< 1 Peters 3 >

1 Like eins de konor: De skal vera dykkar eigne menner undergjevne, so endå slike som ikkje trur ordet, må verta vunne utan ord ved den ferd konorne deira syner,
ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.
2 når dei ser for augo dykkar reine ferd i otte.
3 Deira prydnad skal ikkje vera utanpå, med hårflettingar eller påhengt gull eller klædebunad,
ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.
4 men hjartans løynde menneskje i den uforgjengelege prydnad med den mjuke og stille ånd, som er gjæv for Gud.
ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.
5 For soleis prydde fordom dei heilage kvinnorne seg, dei som sette si von til Gud og var sine eigne menner undergjevne,
ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು.
6 liksom Sara lydde Abraham og kalla honom herre; hennar døtter hev de vorte når de gjer godt og ikkje ottast for nokor skræmsla.
ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ.
7 Like eins de menner: De skal liva vitugt saman med konorne som det veikare kjerald, og visa deim æra, sidan dei og er medervingar til livsens nåde, so dykkar bøner ikkje skal verta hindra!
ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.
8 Og til slutt: Ver alle samhuga, medlidande, kjærlege mot brørne, miskunnsame, audmjuke!
ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.
9 Løn ikkje vondt med vondt eller skjelling med skjelling, men tvertimot velsigna! for det vart de kalla til, at de skal erva velsigning.
ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.
10 For «den som vil elska livet og sjå gode dagar, han skal halda tunga frå det som vondt er og lipporne frå svikfull tale;
೧೦ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, “ಜೀವವನ್ನು ಬಯಸುತ್ತಾ ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ.
11 han vike frå vondt og gjere godt, han søkje fred og trå etter honom!
೧೧ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ. ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.
12 For Herrens augo er yver dei rettferdige, og hans øyro vende til deira bøn; men Herrens åsyn er yver deim som gjer vondt.»
೧೨ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”
13 Og kven er det som kann gjera dykk vondt når de stræver etter det gode?
೧೩ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
14 Men um de og skulde lida for rettferds skuld, so er de sæle. Men ottast ikkje for deim og ræddast ikkje; men helga Kristus til herre i hjarto dykkar!
೧೪ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.
15 Og ver alltid ferdige til å forsvara dykk for kvar ein som krev rekneskap av dykk for den voni som bur i dykk, men med spaklynde og age!
೧೫ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.
16 Og hav eit godt samvit, so dei som lastar dykkar gode ferd i Kristus, må verta til skammar i det som dei baktalar dykk for som illgjerdsmenner.
೧೬ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.
17 For det er betre, um so er Guds vilje, å lida når ein gjer godt, enn når ein gjer vondt.
೧೭ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.
18 For Kristus leid og ein gong for synder, ein rettferdig for urettferdige, for å føra oss fram til Gud, han som leid dauden i kjøtet, men vart livandegjord i åndi,
೧೮ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.
19 og i denne gjekk han og burt og preika for ånderne som var i varetekt,
೧೯ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು.
20 dei som fordom hadde vore stride, den gong Guds langmod venta i Noahs dagar, då arki vart bygd, der nokre få, det er åtte sjæler, vart frelste gjenom vatn,
೨೦ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.
21 det som no og frelser oss i motbilætet dåpen, som ikkje er avleggjing av ureinskap på kroppen, men eit godt samvits pakt med Gud ved Jesu Kristi uppstoda,
೨೧ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.
22 han som er uppfaren til himmelen og er ved Guds høgre hand, der englar og magter og krafter er honom underlagde.
೨೨ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.

< 1 Peters 3 >