< 2 Korintierne 8 >
1 Me kunngjer dykk, brør, den Guds nåde som er gjeven i kyrkjelydarne i Makedonia,
೧ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯ ಕುರಿತು ನಿಮಗೆ ತಿಳಿಯಬೇಕೆಂದು ಬಯಸುತ್ತೇವೆ,
2 at endå dei var hardt røynde med trengsla, so hev deira rike gleda og deira djupe fatigdom i yverfullt mål verka hjå deim ein rikdom på ærleg kjærleik.
೨ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
3 For dei var viljuge etter si råd, det vitnar eg, ja yver si råd, av eigen hug,
೩ಅವರು ತಮ್ಮ ಶಕ್ತಿಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಿಷ್ಟಕ್ಕೆ ತಾವೇ ಉದಾರವಾಗಿ ದಾನಮಾಡಿದರು.
4 so dei inderleg bad oss um lov til å få vera med i hjelpi til dei heilage;
೪ಇದಕ್ಕೆ ನಾನೇ ಸಾಕ್ಷಿ. ದೇವಜನರಿಗೆ ಸಹಾಯ ಮಾಡುವ ಕೆಲಸದಲ್ಲಿ ತಾವು ಪಾಲುಗಾರರಾಗಲು ಅಪ್ಪಣೆಯಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
5 og dei gav ikkje berre soleis som me vona, men seg sjølve gav dei fyrst til Herren og so til oss ved Guds vilje,
೫ನಾವು ಇದನ್ನು ನಿರೀಕ್ಷಿಸದ ರೀತಿಯಲ್ಲಿ ಅವರು ಕೊಡದೆ, ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು.
6 so at me bad Titus, at liksom han fyrr hadde byrja, so skulde han og fullenda hjå dykk ogso dette kjærleiksverket.
೬ತೀತನು ಪ್ರಾರಂಭಿಸಿದ ಹಾಗೆಯೇ ಧರ್ಮಕಾರ್ಯವನ್ನು ಪೂರೈಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ.
7 Men liksom de er rike i alle måtar, på tru og tale og kunnskap og all umhug og på kjærleik som de hev vekt hjå oss, so vert no og rike i dette kjærleiksverket!
೭ನೀವು ದೇವರ ಮೇಲಣ ನಂಬಿಕೆಯಲ್ಲಿ, ವಾಕ್ಚಾತುರ್ಯದಲ್ಲಿ, ಜ್ಞಾನದಲ್ಲಿ, ಸಕಲ ವಿಧವಾದ ಆಸಕ್ತಿಯಲ್ಲಿ ಮತ್ತು ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿಯಲ್ಲಿ ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ ಈ ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿ ಮುಂದುವರೆಯಿರಿ.
8 Ikkje som eit påbod segjer eg dette, men ved ihugen hjå dei andre vil eg og røyna sanningi av dykkar kjærleik.
೮ಇದನ್ನು ಆಜ್ಞಾರೂಪವಾಗಿ ಹೇಳುತ್ತಿಲ್ಲ ಆದರೆ ಇತರರ ಆಸಕ್ತಿಗೆ ಹೋಲಿಸಿ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾದದ್ದೆಂಬುದನ್ನು ಸಾಬೀತು ಮಾಡಬೇಕೆಂದು ಹೇಳುತ್ತೇನೆ.
9 For de kjenner vår Herre Jesu Kristi nåde, at han for dykkar skuld vart fatig, då han var rik, so de ved hans fatigdom skulde verta rike.
೯ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.
10 Og eg segjer mi meining um dette; for det er til gagn for dykk, som fyreåt, alt frå i fjor, byrja ikkje berre å verka, men og å vilja.
೧೦ಈ ಧರ್ಮಕಾರ್ಯವನ್ನು ಕುರಿತ ನನ್ನ ಸಲಹೆಯನ್ನು ತಿಳಿಸುತ್ತೇನೆ, ಇದು ನಿಮ್ಮ ಸಹಾಯಕ್ಕೆ; ಈ ಕಾರ್ಯವನ್ನು ಒಂದು ವರ್ಷದ ಹಿಂದೆ ನಡೆಸುವುದಕ್ಕೆ ಪ್ರಾರಂಭಿಸಿದ ನೀವು, ಮುಂದುವರಿಯಲು ಮನಸ್ಸು ಮಾಡಿದ ಹಾಗೆಯೇ ಅದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಿರಿ.
11 Men fullfør no og verket, so liksom hugen var til å vilja, soleis og fullføringi kann verta etter utkoma.
೧೧ಈ ಕಾರ್ಯವನ್ನು ಪ್ರಾರಂಭಿಸುವುದಕ್ಕೆ ನಿಮ್ಮಲ್ಲಿ ಸಿದ್ಧ ಮನಸ್ಸು ಇರುವ, ಹಾಗೆಯೇ ನಿಮ್ಮ ನಿಮ್ಮ ಶಕ್ತ್ಯನುಸಾರವಾಗಿ ಅದನ್ನು ನೆರವೇರಿಸಿರಿ.
12 For er hugen der, so er han vellika etter det som han hev, ikkje etter det som han ikkje hev.
೧೨ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.
13 For det er ikkje for di at det skal vera lette for andre og trengsla for dykk, men at det skal vera jamnad:
೧೩ಇತರರಿಗೆ ಕಷ್ಟಪರಿಹಾರವೂ, ನಿಮಗೆ ಕಷ್ಟವೂ ಉಂಟಾಗಬೇಕೆಂದು ನನ್ನ ತಾತ್ಪರ್ಯವಲ್ಲ;
14 dykkar yvermål vert til hjelp for deira trong i den noverande tid, at og deira yvermål kann verta til hjelp for dykkar trong, so det vert jamnad,
೧೪ಸಮಾನತ್ವ ಇರಬೇಕೆಂಬುದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುತ್ತದೆ. ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವುದಕ್ಕೆ ಅನುಕೂಲವಾಗುವುದು. ಹೀಗೆ ಸಮಾನತ್ವವುಂಟಾಗುವುದು.
15 som de stend skrive: «Den som sanka mykje, fekk ikkje yverfyllt, og den som sanka lite, leid ingen skort.»
೧೫ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಅತಿಯಾಗಿ ಶೇಖರಿಸಿದವನಿಗೆ ಅಧಿಕವಾಗಲಿಲ್ಲ ಮಿತಿಯಾಗಿ ಶೇಖರಿಸಿದವನಿಗೆ ಕೊರತೆಯಾಗಲಿಲ್ಲ.”
16 Men Gud vere takk, som inngav den same umhug for dykk i Titus’ hjarta!
೧೬ನಿಮ್ಮ ವಿಷಯವಾಗಿ ನನಗಿರುವ ಹಿತ ಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರಮಾಡುತ್ತೇನೆ.
17 for han tok gjerne imot mi påminning, ja, han er endå so ihuga at han fer sjølvminnt ut til dykk.
೧೭ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ಅವನು ಒಪ್ಪಿದ್ದನಲ್ಲದೆ ಅತ್ಯಾಸಕ್ತನಾಗಿದ್ದು, ತನ್ನ ಸ್ವಚಿತ್ತದಿಂದ ನಿಮ್ಮ ಬಳಿಗೆ ಬಂದನು.
18 Og me sender og med honom den broren som hev ros hjå alle kyrkjelydarne for sitt arbeid i evangeliet,
೧೮ಅವನ ಜೊತೆಯಲ್ಲಿ ಮತ್ತೊಬ್ಬ ಸಹೋದರನನ್ನು ಕಳುಹಿಸಿದ್ದೇವೆ. ಈ ಸಹೋದರನು ಸುವಾರ್ತಾ ಸೇವೆಯಲ್ಲಿ ಎಲ್ಲಾ ಸಭೆಗಳೊಳಗೆ ಕೀರ್ತಿ ಪಡೆದುಕೊಂಡವನಾಗಿದ್ದಾನೆ.
19 ja, ikkje berre det, men han er og av kyrkjelydarne utvald til vår fylgjesmann med denne kjærleiksgåva, som er framkomi ved vår tenesta, til å fremja Herrens eigi æra og vårt framtak,
೧೯ಇದು ಮಾತ್ರವಲ್ಲದೆ, ಕರ್ತನ ಮಹಿಮೆಗಾಗಿ ಮತ್ತು ನಮ್ಮ ಸಿದ್ಧ ಮನಸ್ಸನ್ನು ತೋರಿಸುವುದಕ್ಕಾಗಿ ನಾವು ನಡಿಸುವ ಧರ್ಮಕಾರ್ಯದ ಸಂಬಂಧವಾಗಿ ನಮ್ಮ ಸಂಗಡ ಪ್ರಯಾಣಮಾಡುವಂತೆ ಸಭೆಗಳಿಂದ ಇವನು ಆರಿಸಲ್ಪಟ್ಟಿದ್ದಾನೆ.
20 då me vil vara oss for at nokon skal lasta oss for noko som vedkjem denne rike gåva, som er framkomi ved vår tenesta,
೨೦ನಾವು ಸಂಗ್ರಹಿಸುತ್ತಿರುವಂತಹ ಈ ಉದಾರ ಕೊಡುಗೆಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದಕೊಡಬಾರದು.
21 og me legg vinn på det som godt er, ikkje berre for Herren, men og for menneskje.
೨೧ಯಾಕೆಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡುವುದು ನಮ್ಮ ಉದ್ದೇಶ.
22 Og me sender med deim vår bror, som me ofte på mange måtar hev funne ihuga, men no mykje meir ihuga ved si store tiltru til dykk.
೨೨ಇವರಿಬ್ಬರ ಸಂಗಡ ನಮ್ಮ ಸಹೋದರರಲ್ಲಿ ಮತ್ತೊಬ್ಬನನ್ನು ಕಳುಹಿಸಿದ್ದೇವೆ; ನಾವು ಅನೇಕ ಸಮಯದಲ್ಲಿಯೂ, ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತನೆಂದು ತಿಳಿದುಕೊಂಡಿದ್ದೇವೆ; ಈಗ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
23 Anten det då er tale um Titus, so er han min lagsmann og medarbeidar hjå dykk, eller um våre brør, so er dei sendemenner frå kyrkjelydarne, Kristi æra.
೨೩ತೀತನನ್ನು ಕುರಿತಾಗಿ ಹೇಳುವುದಾದರೆ, ಅವನು ನನ್ನ ಪಾಲುಗಾರನೂ ನಿಮ್ಮ ಪ್ರಯೋಜನಕ್ಕಾಗಿ ನನಗೆ ಸಹಕಾರಿಯೂ ಆಗಿದ್ದಾನೆ; ಆ ಸಹೋದರರನ್ನು ಕುರಿತಾಗಿ ಹೇಳುವುದಾದರೆ, ಅವರು ಸಭೆಗಳಿಂದ ಕಳುಹಿಸಲ್ಪಟ್ಟವರೂ ಮತ್ತು ಕ್ರಿಸ್ತನ ಮಹಿಮೆಯನ್ನು ಪ್ರಕಾಶಪಡಿಸುವವರೂ ಆಗಿದ್ದಾರೆ.
24 Syn deim då sanningi av dykkar kjærleik og av vår ros yver dykk, og det for augo på kyrkjelydarne!
೨೪ಆದಕಾರಣ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟು ಮಾಡಿಕೊಡಿರಿ.