< Hebreerne 5 >
1 For kvar øvsteprest vert teken bland menneskje og vert innsett for menneskje til tenesta for Gud, til å bera fram gåvor og slagtoffer for synder,
೧ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ನೇಮಿಸಲಾಗಿದ್ದು. ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು.
2 som ein sovoren som kann vera linnhjarta mot dei vankunnige og villfarande, av di han og sjølv ligg under vesaldom,
೨ತಾನೂ ಸಹ ಬಲಹೀನನಾಗಿರುವುದರಿಂದ ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು.
3 og for den skuld lyt han bera fram syndoffer, liksom for folket, so og for seg sjølv.
೩ಆದ್ದರಿಂದ, ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣೆಗಾಗಿ ಯಜ್ಞಗಳನ್ನು ಸಮರ್ಪಿಸಬೇಕು.
4 Og ingen tek seg sjølv den æra til, men den som vert kalla av Gud liksom Aron.
೪ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
5 So hev ikkje Kristus heller tillagt seg den æra å verta øvsteprest, men han som sagde til honom: «Du er min son, eg hev født deg i dag.»
೫ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ “ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು.
6 Liksom han og segjer ein annan stad: «Du er prest til æveleg tid etter Melkisedeks vis.» (aiōn )
೬ಆತನು ಇನ್ನೊಂದು ಕಡೆಯಲ್ಲಿ, “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನು” ಎಂದು ಹೇಳುತ್ತಾನೆ. (aiōn )
7 Og han hev i sitt kjøts dagar med sterkt rop og tåror bore fram bøner og naudbeding til honom som kunde frelsa honom frå dauden, og vart bønhøyrd for sin gudlegdom,
೭ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.
8 og soleis lærde han, endå han var son, lydnad av det han leid;
೮ಹೀಗೆ ಆತನು ಮಗನಾಗಿದ್ದರೂ ತಾನು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.
9 og då han var fullenda, vart han upphav til æveleg frelsa for alle deim som lyder honom, (aiōnios )
೯ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು. (aiōnios )
10 med di Gud kalla honom øvsteprest etter Melkisedeks vis.
೧೦ಅಲ್ಲದೆ ಆತನು ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ದೇವರಿಂದ ನೇಮಿಸಲ್ಪಟ್ಟನು.
11 Um dette hev me mykje å segja, som og er vandt å leggja ut, då de hev vorte seinføre til å høyra.
೧೧ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.
12 For de som etter tidi skulde vore lærarar, de treng atter til at ein lærer dykk dei fyrste grunnar i Guds ord; og de hev vorte slike som treng til mjølk og ikkje fast føda.
೧೨ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.
13 For kvar den som fær mjølk, er urøynd i rettferds ord; for han er eit barn.
೧೩ಹಾಲು ಕುಡಿಯುವವನು ಕೂಸಿನಂತಿದ್ದು ನೀತಿಯ ಸಂದೇಶದಲ್ಲಿ ಅನುಭವ ಇಲ್ಲದವನಾಗಿದ್ದಾನೆ.
14 Men fast føda er for vaksne, for deim som ved tame hev tilvande sansar til å skilja millom godt og vondt.
೧೪ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.