< Jeremias 44 >
1 Det ordet som kom til Jeremia åt alle dei jødarne som budde i Egyptarlandet, dei som budde i Migdol og i Tahpanhes og i Nof og i Patroslandet; han sagde:
೧ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,
2 So segjer Herren, allhers drott, Israels Gud: De hev set all den ulukka som eg hev late koma yver Jerusalem og yver alle Juda-byarne - og sjå, no er dei øydestader, og ingen bur i deim -
೨“ಇಸ್ರಾಯೇಲಿನ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ಯೆರೂಸಲೇಮಿಗೂ, ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ.
3 for vondskapen deira so dei for med til å harma meg med, med di dei gjekk og brende røykjelse og tente andre gudar som dei ikkje kjende, korkje dei eller de eller federne dykkar.
೩ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.
4 Og eg sende til dykk alle tenarane mine, profetarne, både jamt og samt, og sagde: Gjer då ikkje desse skræmelege ting som eg hatar!
೪ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,
5 Men dei høyrde ikkje og lagde ikkje øyra til, so dei snudde frå sin vondskap og heldt upp med å brenna røykjelse åt andre gudar.
೫ಅವರು ಕಿವಿಗೊಟ್ಟು ಕೇಳಲಿಲ್ಲ, ಅನ್ಯದೇವತೆಗಳಿಗೆ ಧೂಪಹಾಕುವುದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ.
6 Då vart min harm og min vreide utrend, og han brann i Juda-byarne og på Jerusalems-gatorne, so dei vart til ei audn, til ei øyda, so som dei er enn i dag.
೬ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ.
7 Og no, so segjer Herren, allhers drott, Israels Gud: Kvi gjer de so stort eit tjon på dykk sjølve, so mann og kvinna, barn og brjostbarn vert utrudde for dykk midt ut or Juda, so de ikkje vert att ein leivning av dykk -
೭ಹೀಗಿರಲು ಸೇನಾಧೀಶ್ವರಸ್ವಾಮಿಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ, ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವುದೇಕೆ? ಈ ದುರಾಚಾರದ ನಿಮಿತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯುವುದಿಲ್ಲ.
8 og harmar meg med dei verk dykkar hender gjer, med di de brenner røykjelse åt andre gudar i Egyptarlandet som de er komne til og vil bu i - so dei skal verta utrudde for dykk, og de verta til ei våbøn og ei hæding hjå alle folk på jordi?
೮ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತ ದೇಶದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುವುದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ.
9 Hev de gløymt det vonde som federne dykkar gjorde, og det vonde Juda-kongarne gjorde, og det vonde kvendi deira gjorde, og det vonde de sjølve gjorde, og det vonde kvendi dykkar gjorde i Judalandet og på Jerusalems-gatorne?
೯ನಿಮ್ಮ ಪೂರ್ವಿಕರು, ಯೆಹೂದದ ಅರಸರು, ಅವರ ಹೆಂಡತಿಯರು, ನೀವು ಮತ್ತು ನಿಮ್ಮ ಹೆಂಡತಿಯರು ಇವರೆಲ್ಲರೂ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ನಡೆಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?
10 Endå hev dei ikkje audmykt seg, og ikkje hev dei ottast og ikkje hev dei ferdast etter mi lov og etter mine bodord, som eg lagde fram for dykk og for federne dykkar.
೧೦ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.
11 Difor, so segjer Herren, allhers drott, Israels Gud: Sjå, eg snur andlitet mitt mot dykk til ulukka og eg vil rydja ut alt Juda.
೧೧“ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.
12 Og eg vil taka deim som er leivde etter Juda, deim som heldt stemneleidi til Egyptarlandet og for dit og vilde bu der. Og dei skal alle setja til, i Egyptarlandet skal dei falla; for sverd, av svolt skal dei setja til, både små og store; for sverd og av svolt skal dei døy. Og dei skal verta til ein eid, til ei skræma og til ei våbøn og til ei hæding.
೧೨ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.
13 Og eg vil heimsøkja deim som bur i Egyptarlandet, likeins som eg heimsøkte Jerusalem, med sverd, med svolt og med sott.
೧೩ನಾನು ಯೆರೂಸಲೇಮಿನವರನ್ನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು.
14 Og av Juda-leivningen, av deim som er komne og vil bu der i Egyptarlandet, skal ingen sleppa undan og verta att so han kann snu heim att til Judalandet som dei stundar å koma attende til, so dei kann bu der. For ingen skal koma dit att so nær som nokre få undanslopne.
೧೪ಐಗುಪ್ತಕ್ಕೆ ಹೋಗಿ ಪ್ರವಾಸ ಮಾಡುತ್ತಿರುವ ಯೆಹೂದದ ಉಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವುದಿಲ್ಲ; ಓಡಿಬರುವ ಸ್ವಲ್ಪ ಜನರೇ ಹೊರತು ಯಾರೂ ಹಿಂದಿರುಗುವುದಿಲ್ಲ.
15 Då svara dei Jeremia, alle dei menner som visste at konorne deira brende røykjelse åt andre gudar, og alle kvinnorne som stod der i ein stor hop, og alt folket som budde i Egyptarlandet, i Patros, og sagde:
೧೫“ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ” ಹೀಗೆ ಹೇಳಿದರು,
16 «Me vil ikkje lyda på deg i det som du hev tala til oss i Herrens namn,
೧೬“ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ.
17 men me vil gjera etter alt det som me hev lova med vår munn; å brenna røykjelse åt himmeldronningi og renna ut drykkoffer åt henne, so som me fyrr hev gjort, me og federne våre og kongarne våre og hovdingarne våre, i Juda-byarne og på Jerusalems-gatorne. Då hadde me nøgdi av brød, og det gjekk oss vel, og me såg ingi ulukka kom yver oss.
೧೭ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.
18 Men sidan me heldt upp med å brenna røykjelse åt himmeldronningi og renna ut drykkoffer åt henne, hev me vanta alt, og av sverd og svolt er me tynte.
೧೮ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.
19 Og når me brenner røykjelse åt himmeldronningi og renner ut drykkoffer åt henne, er det då mennerne våre uviljande at me hev laga henne kakor og dyrka henne og rent ut drykkoffer åt henne?»
೧೯ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?” ಎಂದರು.
20 Då sagde Jeremia med all lyden, med mennerne og med kvinnorne og med all lyden som svara honom, han sagde:
೨೦ಆಗ ಯೆರೆಮೀಯನು ಗಂಡಸರಿಗೂ, ಹೆಂಗಸರಿಗೂ ಅಂತು ತನಗೆ ಆ ಉತ್ತರಕೊಟ್ಟ ಎಲ್ಲಾ ಜನರಿಗೂ,
21 «Den offer-røykjingi som de hev gjort i Juda-byarne og på Jerusalems-gatorne, de og federne dykkar og kongarne dykkar og hovdingarne dykkar og landslyden - skulde Herren ikkje minnast henne og koma henne i hug?
೨೧“ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?
22 Og Herren kunde ikkje lenger tola det for den vonde åtferdi dykkar, for alle dei styggjorne som de hev gjort. Og soleis vart landet dykkar til ei audn og ei øyda og til ei våbøn, folketomt so som det er enn i dag.
೨೨ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.
23 For di de brende røykjelse og synda mot Herren og ikkje lydde på Herrens røyst og ikkje ferdast i hans lov, i hans bodord og vitnemål, difor kom denne ulukka yver dykk, so som det er enn i dag.»
೨೩ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ, ನಿಬಂಧನೆಗಳನ್ನೂ, ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪ ಮಾಡಿ ಅನ್ಯದೇವತೆಗಳಿಗೆ ಧೂಪಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ” ಎಂದನು.
24 Og Jeremia sagde til alt folket og til alle kvinnorne: «Høyr Herrens ord, alle de Juda-menner som er i Egyptarlandet!
೨೪ಇದಲ್ಲದೆ ಯೆರೆಮೀಯನು ಹೆಂಗಸರಿಗೂ, ಎಲ್ಲಾ ಜನರಿಗೂ ಹೀಗೆ ಹೇಳಿದನು, “ಐಗುಪ್ತದಲ್ಲಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ.
25 So segjer Herren, allhers drott, Israels Gud: De og konorne dykkar tala det med munnen dykkar og fullførde det med henderne dykkar med di de sagde: «Me vil halda lovnaderne våre som me hev gjort: å brenna røykjelse åt himmeldronningi og renna ut drykkoffer åt henne.» So berre haldt lovnaderne dykkar, og fullfør lovnaderne dykkar!
೨೫ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!
26 Difor, høyr Herrens ord, alle de Juda-menner som bur i Egyptarlandet: Sjå, eg hev svore ved mitt store namn, segjer Herren: Sanneleg, ikkje ein einaste Juda-mann skal taka namnet mitt på tunga si i alt Egyptarlandet so han segjer: «So sant som Herren, Herren liver!»
೨೬ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.
27 Sjå, eg vil vaka yver deim til deira ulukka, og ikkje til deira lukka, og alle Juda-menner som er i Egyptarlandet, skal verta tynte av sverd og svolt til det er gjort ende på deim.
೨೭ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗ, ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.
28 Men dei som kjem seg undan sverdet, skal snu heim att frå Egyptarlandet og til Judalandet, berre ein liten flokk. Og all Juda-leivningen, dei som er komne til Egyptarlandet og vil bu der, skal få vita kva ord som stend ved lag, mitt eller deira.
೨೮ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.
29 Og dette skal vera teiknet for dykk, segjer Herren, at eg vil heimsøkja dykk på denne staden, so de skal få vita at mine ord til dykk um ulukka stend ved lag:
೨೯ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು.
30 So segjer Herren: Sjå, eg gjev Farao Hofra, egyptarkongen, i fiendehender og i henderne på deim som ligg honom etter livet, likeins som eg hev gjeve Sidkia, Juda-kongen, i henderne på Nebukadressar, Babel-kongen, som var fienden hans og låg honom etter livet.»
೩೦ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ’” ಎಂಬುದೇ.