< Matteus 1 >
1 Soga um Jesus Kristus. Davids son og Abrahams son.
ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು:
2 Abraham fekk sonen Isak, og Isak fekk sonen Jakob, og Jakob fekk Juda og brørne hans,
ಅಬ್ರಹಾಮನು ಇಸಾಕನ ತಂದೆ, ಇಸಾಕನು ಯಾಕೋಬನ ತಂದೆ, ಯಾಕೋಬನು ಯೂದ ಮತ್ತು ಅವನ ಅಣ್ಣ ತಮ್ಮಂದಿರ ತಂದೆ,
3 og Juda fekk sønerne Peres og Zerah med Tamar, og Peres fekk sonen Hesron, og Hesron fekk sonen Ram,
ಯೂದನು ಪೆರೆಸ ಮತ್ತು ಜೆರಹನ ತಂದೆ, ತಾಮಾರಳು ಇವರ ತಾಯಿ, ಪೆರೆಸನು ಹೆಚ್ರೋನನ ತಂದೆ, ಹೆಚ್ರೋನನು ಅರಾಮನ ತಂದೆ,
4 og Ram fekk sonen Amminadab, og Amminadab fekk sonen Nahson, og Nahson fekk sonen Salmon,
ಅರಾಮನು ಅಮ್ಮೀನಾದಾಬನ ತಂದೆ, ಅಮ್ಮೀನಾದಾಬನು ನಹಶೋನನ ತಂದೆ, ನಹಶೋನನು ಸಲ್ಮೋನನ ತಂದೆ,
5 og Salmon fekk sonen Boaz med Rahab, og Boaz fekk sonen Obed med Rut, og Obed fekk sonen Isai,
ಸಲ್ಮೋನನು ಬೋವಜನ ತಂದೆ, ಬೋವಜನ ತಾಯಿ ರಾಹಾಬಳು, ಬೋವಜನು ಓಬೇದನ ತಂದೆ, ಓಬೇದನ ತಾಯಿ ರೂತಳು, ಓಬೇದನು ಇಷಯನ ತಂದೆ,
6 og Isai var far åt David, kongen. David fekk sonen Salomo med kona åt Uria,
ಇಷಯನು ರಾಜನಾದ ದಾವೀದನ ತಂದೆ. ದಾವೀದನು ಸೊಲೊಮೋನನ ತಂದೆ, ಇವನ ತಾಯಿ ಊರೀಯನ ಹೆಂಡತಿಯಾಗಿದ್ದವಳು,
7 og Salomo fekk sonen Rehabeam, og Rehabeam fekk sonen Abia, og Abia fekk sonen Asa,
ಸೊಲೊಮೋನನು ರೆಹಬ್ಬಾಮನ ತಂದೆ, ರೆಹಬ್ಬಾಮನು ಅಬೀಯನ ತಂದೆ, ಅಬೀಯನು ಆಸನ ತಂದೆ,
8 og Asa fekk sonen Josafat, og Josafat fekk sonen Joram, og Joram fekk sonen Uzzia,
ಆಸನು ಯೆಹೋಷಾಫಾಟನ ತಂದೆ, ಯೆಹೋಷಾಫಾಟನು ಯೆಹೋರಾಮನ ತಂದೆ, ಯೆಹೋರಾಮನು ಉಜ್ಜೀಯನ ತಂದೆ,
9 og Uzzia fekk sonen Jotam, og Jotam fekk sonen Ahaz, og Ahaz fekk sonen Hizkia,
ಉಜ್ಜೀಯನು ಯೋತಾಮನ ತಂದೆ, ಯೋತಾಮನು ಆಹಾಜನ ತಂದೆ, ಆಹಾಜನು ಹಿಜ್ಕೀಯನ ತಂದೆ,
10 og Hizkia fekk sonen Manasse, og Manasse fekk sonen Amon, og Amon fekk sonen Josia,
ಹಿಜ್ಕೀಯನು ಮನಸ್ಸೆಯ ತಂದೆ, ಮನಸ್ಸೆಯು ಆಮೋನನ ತಂದೆ, ಆಮೋನನು ಯೋಷೀಯನ ತಂದೆ,
11 og Josia fekk Jekonja og brørne hans; dei livde i den tidi då folket vart ført til Babylon.
ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು, ಈ ಸಮಯದಲ್ಲಿಯೇ ಯೆಹೂದ್ಯರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು.
12 Etter dei vart førde til Babylon, fekk Jekonja sonen Sealtiel, og Sealtiel fekk sonen Zerubbabel,
ಬಾಬಿಲೋನಿಗೆ ಸೆರೆಹೋದ ಮೇಲೆ: ಯೆಕೊನ್ಯನು ಶೆಯಲ್ತೀಯೇಲನನ್ನು ಪಡೆದನು, ಶೆಯಲ್ತೀಯೇಲನು ಜೆರುಬ್ಬಾಬೆಲನ ತಂದೆ,
13 og Zerubbabel fekk sonen Abiud, og Abiud fekk sonen Eljakim, og Eljakim fekk sonen Asor,
ಜೆರುಬ್ಬಾಬೆಲನು ಅಬಿಹೂದನ ತಂದೆ, ಅಬಿಹೂದನು ಎಲಿಯಕೀಮನ ತಂದೆ, ಎಲಿಯಕೀಮನು ಅಜೋರನ ತಂದೆ,
14 og Asor fekk sonen Sadok, og Sadok fekk sonen Akim, og Akim fekk sonen Eliud,
ಅಜೋರನು ಸದೋಕನ ತಂದೆ, ಸದೋಕನು ಅಖೀಮನ ತಂದೆ, ಅಖೀಮನು ಎಲಿಹೂದನ ತಂದೆ,
15 og Eliud fekk sonen Eleazar, og Eleazar fekk sonen Mattan, og Mattan fekk sonen Jakob,
ಎಲಿಹೂದನು ಎಲಿಯಾಜರನ ತಂದೆ, ಎಲಿಯಾಜರನು ಮತ್ತಾನನ ತಂದೆ, ಮತ್ತಾನನು ಯಾಕೋಬನ ತಂದೆ,
16 og Jakob var far åt Josef, mannen hennar Maria som fødde Jesus til verdi, han me kallar Kristus.
ಯಾಕೋಬನು ಯೋಸೇಫನ ತಂದೆ, ಯೋಸೇಫನು ಮರಿಯಳ ಪತಿ, ಮರಿಯಳು ಕ್ರಿಸ್ತ ಎಂದು ಕರೆಯಲಾದ, ಯೇಸುಸ್ವಾಮಿಯ ತಾಯಿ.
17 Soleis er det i alt fjortan ættleder frå Abraham til David, og fjortan ættleder frå David til Babylon-ferdi, og fjortan ættleder frå Babylon-ferdi til Kristus.
ಈ ರೀತಿಯಲ್ಲಿ ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿಗೆ ಸೆರೆ ಹೋಗುವವರೆಗೆ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿಗೆ ಸೆರೆಹೋದ ದಿನದಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.
18 Då Kristus vart fødd, gjekk det soleis til: Medan mor hans, Maria, var trulova med Josef, og fyrr dei kom i hop, synte det seg at ho var med barn av den Heilage Ande.
ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು.
19 Josef, festarmannen hennar, var ein rett-tenkt mann, og vilde ikkje føra skam yver henne; han sette seg fyre å skiljast med henne so stilt han kunde.
ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು.
20 Men best som han hadde rådt seg til det, synte Herren engel seg for honom i draume og sagde: «Josef, Davids son, ver ikkje rædd å taka Maria, festarmøyi di, heim til deg; for det ho ber under beltet, er av den Heilage Ande.
ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.
21 Ho skal eiga ein son, og honom skal du kalla Jesus; for han skal frelsa folket sitt frå synderne deira.»
ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.
22 Men alt dette hev hendt av di det laut sannast det som Herren hev tala gjenom profeten, når han segjer:
ದೇವರು ತಮ್ಮ ಪ್ರವಾದಿಯ ಮುಖಾಂತರ ಹೇಳಿದ ಈ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು:
23 «Ei møy mun barnsvon bera: Ein son ho eiga skal, og namnet han skal nemnast med, er Immanuel» - det er det same som: «Gud er med oss».
“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.
24 Då Josef vakna or svevnen, gjorde han som Herrens engel hadde sagt med honom, og flutte bruri si heim.
ಯೋಸೇಫನು ನಿದ್ದೆಯಿಂದ ಎದ್ದ ಮೇಲೆ, ಕರ್ತನ ದೂತನು ಆಜ್ಞಾಪಿಸಿದಂತೆ ಮರಿಯಳನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.
25 Men han kom ikkje nær henne fyrr ho hadde fenge sonen sin; honom kalla han Jesus.
ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.