< Nehemias 5 >

1 Men so reiste det seg eit stort skrik frå folket og frå konorne deira mot dei jødiske brørne deira.
ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.
2 Sume sagde: «Me og sønerne og døtterne våre er mange, so lat oss få korn, so me kann eta og berga livet!»
ಅವರಲ್ಲಿ ಕೆಲವರು, “ನಾವೂ ನಮ್ಮ ಗಂಡು ಹೆಣ್ಣು ಮಕ್ಕಳೂ ಬಹು ಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಧಾನ್ಯವು ಬೇಕಾಗಿದೆ” ಎಂದು ಹೇಳಿದರು.
3 Og sume sagde: «Åkrarne og vinhagarne og husi våre lyt me setja i pant for å få korn i dyrtidi!»
ಇನ್ನು ಕೆಲವರು, “ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಲು ನಮ್ಮ ಹೊಲ, ದ್ರಾಕ್ಷಿತೋಟ, ಮನೆಗಳನ್ನು ಒತ್ತೆ ಇಟ್ಟಿದ್ದೇವೆ” ಎಂದು ಹೇಳಿದರು.
4 Og andre sagde: «Me hev lote låne pengar på åkrarne og vinhagarne våre til å greida skatten til kongen.
ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.
5 No er då våre kroppar likso gode som kropparne åt brørne våre, og våre born er jamgode med deira born. Like vel lyt me gjera sønerne og døtterne våre til trælar. Ja, sume av døtterne våre er alt trælka; og me hev ikkje magt til å hindra det; for åkrarne og vinhagarne våre høyrer dei hine til.»
ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು.
6 Eg vart brennande harm då eg høyrde skriket deira og desse ordi.
ಅವರ ಬೊಬ್ಬೆಯನ್ನೂ, ಮಾತುಗಳನ್ನೂ ಕೇಳಿದಾಗ ನಾನು ಬಹಳ ಸಿಟ್ಟುಗೊಂಡೆನು.
7 Då eg hadde samrådt meg med meg sjølv, skjemde eg på dei adelborne og formennerne og sagde til deim: «Oker er det de driv med brørne dykkar!» So stemde eg saman til eit stort folkemøte mot deim.
ನಾನು ಮನಸ್ಸಿನಲ್ಲಿ ಸ್ವಲ್ಪ ಆಲೋಚಿಸಿಕೊಂಡು ಶ್ರೀಮಂತರಿಗೂ, ಅಧಿಕಾರಿಗಳಿಗೂ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದೆಂದರೇನು” ಎಂದು ಹೇಳಿ ಮಹಾಸಭೆಯನ್ನು ಕೂಡಿಸಿ
8 Og eg sagde til deim: «Etter evna hev me kjøpt frie dei jødiske brørne våre som var selde til heidningarne. Og so gjeng det burt og sel brørne dykkar, so dei lyt selja seg til oss!» Då tagde dei og fann inkje ord for seg.
ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.
9 Og eg sagde: «Det er ikkje fint å fara åt soleis som det hev gjort. De burde då ferdast i otte for vår Gud, so ikkje heidningarne, fiendarne våre, skulde få grunn til å spotta oss.
ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.
10 Eg og frendarne mine og drengjerne mine hev og pengar og korn å krevja av deim. Lat oss strukja den skuldi!
೧೦ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿತೆಗೆದುಕೊಳ್ಳುವ ಈ ಪದ್ಧತಿಯನ್ನು ಬಿಟ್ಟುಬಿಡೋಣ.
11 Og de - kjære væne, gjev attende i dag åkrane og vinhagarne og oljeplantingarne og husi deira, og gjev deim etter rentorne det kunde krevja av deim av pengarne og kornet og druvesafti og oljen!»
೧೧ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.
12 Dei svara: «Me gjev det attende og gjev upp kravi på deim. So som du hev sagt, vil me gjera.» Eg tok deim i eid, etter eg hadde kalla prestarne til, at dei skulde halda dette vedtaket.
೧೨ಅದಕ್ಕೆ ಅವರು, “ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.
13 Og eg skok kappelumma mi med dei ordi: «Soleis skal Gud skaka frå hus og eiga kvar ein som ikkje held dette vedtaket; ja, soleis skal han verta skjeken og tom.» Og heile lyden sagde: «Ja, ja!» Og dei lova Herren, og heile folket gjorde etter dette vedtaket.
೧೩ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು.
14 Dessutan lyt eg nemna: Frå den dagen eg vart utnemnd til jarl yver Jødeland, frå det tjugande til det tvo og trettiande styringsåret åt kong Artahsasta, i tolv år, hev korkje eg eller frendarne mine ete av jarlekosten.
೧೪ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳ ವರೆಗೆ ಅಂದರೆ ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಭತ್ಯದಿಂದ ಜೀವನಮಾಡಲಿಲ್ಲ.
15 Dei fyrre jarlarne, fyre min tid, tyngde på folket, og tok brød og vin av deim til yver fyrti lodd sylv. Jamvel drengjerne deira spela meister yver folket. Av age for Gud for ikkje eg åt soleis.
೧೫ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.
16 Dessutan var eg med og bygde på muren. Og ingen åker hev me kjøpt oss. Endå alle drengjerne mine hev vore samla til byggjearbeidet.
೧೬ಮತ್ತು ನನ್ನ ಎಲ್ಲಾ ಸೇವಕರೂ ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆನು. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.
17 Og jødarne og formennerne, eit hundrad og femti mann, åt ved mitt bord, umfram deim som kom til oss frå heidningfolki rundt ikring.
೧೭ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳೂ ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು.
18 Og det vart tillaga på min kostnad kvar dag ein ukse og seks utvalde sauer, umfram fuglar, og tiande kvar dag mykje vin av alle slag; like vel kravde eg ikkje jarlekosten, for arbeidet låg tungt på dette folket.
೧೮ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕುರಿ, ಕೆಲವು ಪಕ್ಷಿಗಳು ನಮ್ಮ ಭೋಜನಕ್ಕಾಗಿ ಸಿದ್ಧವಾಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲಾ ಬಗೆಯ ದ್ರಾಕ್ಷಾರಸವನ್ನು ಬೇಕಾದಷ್ಟು ಒದಗಿಸಲು ವ್ಯವಸ್ಥೆಮಾಡಿದೆ. ಇಷ್ಟೆಲ್ಲಾ ಇದ್ದರೂ ಆ ಜನರು ಮಾಡುತ್ತಿದ್ದ ಕೆಲಸವು ಬಹು ಕಠಿಣವಾಗಿದ್ದದರಿಂದ ನಾನು ದೇಶಾಧಿಪತಿಗೆ ಸಲ್ಲತಕ್ಕ ಭತ್ಯವನ್ನು ಕೇಳಲೇ ಇಲ್ಲ.
19 Kom meg i hug, min Gud, og rekna meg til godes alt det eg hev gjort for dette folket!
೧೯ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.

< Nehemias 5 >