< Salomos Ordsprog 9 >
1 Visdomsmøyi hev bygt seg hus, hev hogge til sine stolpar sju.
೧ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.
2 Ho hev slagta sitt slagt og blanda sin vin og attåt duka sitt bord.
೨ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ.
3 Sine ternor hev ho sendt ut, og ropar ovan frå haugarne i byen:
೩ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.
4 «Den som er fåkunnig, vende seg hit!» Til den vitlause segjer ho:
೪ಆಕೆಯು ಬುದ್ಧಿಹೀನರಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ,
5 «Kom, og et av mitt brød og drikk av den vin eg hev blanda!»
೫ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.
6 Lat fåkunna fara so de kann liva og vandra på vegen til vit!
೬ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
7 Den som refser ein spottar, fær skam yver seg, den som lastar ein gudlaus, fær seg ein flekk.
೭ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.
8 Lasta’kje spottaren, han vil hata deg! Lasta den vise, han vil elska deg!
೮ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.
9 Gjev ein vismann, so aukar hans visdom, lær ein rettferdig, so lærar han meir.
೯ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.
10 Otte for Herren er upphav til visdom, og vit er å kjenna den Heilage.
೧೦ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು.
11 «For ved meg dine dagar skal aukast, og fleire livs-år fær du.»
೧೧ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು.
12 Er du vis, so gagnar det deg sjølv, spottar du, so lyt du bera det åleine.
೧೨ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ.
13 Fru dårskap fer med ståk, fåkunnig som ho er og ingen ting veit.
೧೩ಅಜ್ಞಾನವೆಂಬವಳಾದರೋ ಕೂಗಾಟದವಳು, ಮೂಢಳು, ಏನೂ ತಿಳಿಯದವಳು.
14 Ho sit attmed husdøri si, på ein stol høgt uppe i byen,
೧೪ಅವಳು ತನ್ನ ಮನೆಯ ಬಾಗಿಲಿನಲ್ಲಿ, ಪಟ್ಟಣದ ರಾಜಮಾರ್ಗಗಳಲ್ಲಿ ಪೀಠದ ಮೇಲೆ ಕುಳಿತುಕೊಂಡವಳಾಗಿ,
15 og bed inn dei som ferdast på vegen, som gjeng sine stigar beint fram:
೧೫ತಮ್ಮ ಮಾರ್ಗವನ್ನು ಹಿಡಿದು, ಹೋಗಿ ಬರುವವರನ್ನು ನೋಡಿ,
16 «Den som er fåkunnig, vende seg hit!» Ja, til den vitlause segjer ho:
೧೬“ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ,
17 «Stole vatn er søtt, og ljuvlegt er løyn-ete brød.»
೧೭“ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ” ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ.
18 Og han veit’kje at der bur daudingar, at hennar gjester er i helheims djup. (Sheol )
೧೮ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು. (Sheol )