< Salmenes 76 >

1 Til songmeisteren, med strengleik; ein salme av Asaf, ein song. Gud er kjend i Juda, i Israel er hans namn stort.
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಆಸಾಫನ ಹಾಡು. ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.
2 Han bygde si hytta i Salem og sin bustad på Sion.
ಸಾಲೇಮಿನಲ್ಲಿ ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ.
3 Der braut han sund ljoni frå bogen, skjold og sverd og ufred. (Sela)
ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. (ಸೆಲಾ)
4 Strålande er du, herleg framfor rans-bergi.
ನೀನು ತೇಜೋಮಯನು; ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು.
5 Dei hjarte-sterke menner hev vorte plundra, dei søv sin svevn, og ingen av kjemporne fann sine hender.
ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು.
6 Ved ditt trugsmål, Jakobs Gud, vart både vogn og hest djupt svævde.
ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.
7 Du - skræmeleg er du, og kven kann standa for di åsyn når du vert vreid?
ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?
8 Frå himmelen let du høyrast dom; jordi ræddast og vart still
ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,
9 då Gud stod upp til dom, til å frelsa alle spaklyndte på jordi. (Sela)
ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. (ಸೆಲಾ)
10 For manne-harm må prisa deg, med endå større harm gyrder du deg.
೧೦ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.
11 Gjer lovnad og haldt det de lova til Herren, dykkar Gud! Alle kring honom skal føra gåvor til den skræmelege.
೧೧ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.
12 Han staggar stormodet hjå hovdingar, han er skræmeleg for kongarne på jordi.
೧೨ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.

< Salmenes 76 >