< Salmenes 87 >
1 Av Korahs born; ein salme, ein song. Det som han hev grunnfest på dei heilage fjelli,
೧ಕೋರಹೀಯರ ಕೀರ್ತನೆ; ಗೀತೆ. ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ.
2 Sions portar elskar Herren mest av alle Jakobs bustader.
೨ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.
3 Herlege ting er sagde um deg, du Guds by. (Sela)
೩ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,
4 «Eg vil nemna Rahab og Babel millom deim som kjenner meg; sjå Filistaren, Tyrus og Kusj: Denne er fødd der.»
೪“ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.
5 Og um Sion skal det verta sagt: «Kvar ein er fødd der», og han, den Høgste, gjer det fast.
೫ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು.
6 Herren skal telja soleis, når folki vert uppskrivne: «Denne er fødd der.» (Sela)
೬ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. (ಸೆಲಾ)
7 Og dei som syng og dei som dansar, skal segja: «Alle mine kjeldor er i deg.»
೭ಇವರು ಹಾಡುತ್ತಾ, ಕುಣಿಯುತ್ತಾ, “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.