< ପ୍ରଥମ ରାଜାବଳୀ 4 >
1 ଏହିରୂପେ ଶଲୋମନ ରାଜା ସମଗ୍ର ଇସ୍ରାଏଲ ଉପରେ ରାଜା ହେଲେ।
೧ಸೊಲೊಮೋನ ರಾಜನು ಎಲ್ಲಾ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು.
2 ଏମାନେ ତାଙ୍କର ଅଧିପତି ଥିଲେ, ଯଥା, ସାଦୋକର ପୁତ୍ର ଅସରୀୟ ଯାଜକ ଥିଲେ।
೨ಅವನ ಮುಖ್ಯ ಉದ್ಯೋಗಸ್ಥರು ಯಾರಾರೆಂದರೆ: ಚಾದೋಕನ ಮಗನಾದ ಅಜರ್ಯನು ಯಾಜಕನು.
3 ଶୀଶାର ପୁତ୍ର ଇଲୀହୋରଫ ଓ ଅହୀୟ ସମ୍ପାଦକ; ଅହୀଲୂଦର ପୁତ୍ର ଯିହୋଶାଫଟ୍ ଇତିହାସ ଲେଖକ
೩ಶೀಷನ ಮಕ್ಕಳಾದ ಎಲೀಹೋರೇಫ್ ಮತ್ತು ಅಹೀಯಾಹು ಎಂಬುವರು ಲೇಖಕರು. ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಮಂತ್ರಿಯು.
4 ଓ ଯିହୋୟାଦାର ପୁତ୍ର ବନାୟ ସେନାପତି ଥିଲା; ପୁଣି, ସାଦୋକ ଓ ଅବୀୟାଥର ଯାଜକ ଥିଲେ;
೪ಯೆಹೋಯಾದಾವನ ಮಗನಾದ ಬೆನಾಯನು ಸೈನ್ಯಾಧಿಪತಿ. ಚಾದೋಕನೂ ಮತ್ತು ಎಬ್ಯಾತಾರನೂ ಯಾಜಕರು.
5 ନାଥନର ପୁତ୍ର ଅସରୀୟ ଦେଶାଧ୍ୟକ୍ଷମାନଙ୍କର ପ୍ରଧାନ ଥିଲା ଓ ନାଥନର ପୁତ୍ର ସାବୁଦ୍ ଯାଜକ ଓ ରାଜାଙ୍କ ମିତ୍ର ଥିଲା।
೫ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು.
6 ପୁଣି, ଅହୀଶାର୍ ଗୃହାଧ୍ୟକ୍ଷ ଥିଲା ଓ ଅବ୍ଦର ପୁତ୍ର ଅଦୋନୀରାମ୍ ବେଠିକର୍ମର ଅଧ୍ୟକ୍ଷ ଥିଲା।
೬ಅಹೀಷಾರನು ರಾಜಗೃಹಾಧಿಪತಿಯು. ಅಬ್ದನ ಮಗನಾದ ಅದೋನೀರಾಮನು ಬಿಟ್ಟೀಕೆಲಸ ಮಾಡಿಸುವವರ ಮುಖ್ಯಸ್ಥನು.
7 ଆଉ ସମଗ୍ର ଇସ୍ରାଏଲ ଉପରେ ଶଲୋମନଙ୍କର ବାର ଜଣ ଦେଶାଧ୍ୟକ୍ଷ ଥିଲେ, ସେମାନେ ରାଜା ଓ ତାଙ୍କର ଗୃହ ପାଇଁ ଖାଦ୍ୟଦ୍ରବ୍ୟ ଯୋଗାଇଲେ; ପ୍ରତି ଜଣ ବର୍ଷ ମଧ୍ୟରେ ଏକ ଏକ ମାସ ପାଇଁ ଦ୍ରବ୍ୟ ଯୋଗାଇଲେ।
೭ಸೊಲೊಮೋನನು ಎಲ್ಲಾ ಇಸ್ರಾಯೇಲರ ಮೇಲ್ವಿಚಾರಣೆಗಾಗಿ ಹನ್ನೆರಡು ಕಾರ್ಯನಿರ್ವಾಹಕರನ್ನು ನೇಮಿಸಿದನು. ಅವರಲ್ಲಿ ಪ್ರತಿಯೊಬ್ಬನು ಒಂದೊಂದು ತಿಂಗಳು ಅರಸನಿಗೂ ಮತ್ತು ಅವನ ಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪ್ರತಿವರ್ಷವೂ ಒದಗಿಸಿಕೊಡಬೇಕಾಗಿತ್ತು.
8 ଆଉ ସେମାନଙ୍କର ନାମ ଏହି; ଇଫ୍ରୟିମର ପର୍ବତମୟ ଦେଶରେ ବିନ୍-ହୂର।
೮ಅವರು ಯಾರಾರೆಂದರೆ ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿದ್ದ ಹೂರನ ಮಗ,
9 ମାକସ୍, ଶାଲବୀମ୍, ବେଥ୍-ଶେମଶ ଓ ଏଲୋନ-ବେଥ୍-ହାନନ୍ରେ ବିନ୍-ଦେକର;
೯ಮಾಕಾಚ್, ಶಾಲ್ಬೀಮ್, ಬೇತ್‌ಷೆಮೆಷ್, ಏಲೋನ್ ಬೇತ್ ಹಾನಾನ್ ಎಂಬ ಊರುಗಳ ಒಡೆಯನಾದ ದೆಕೆರನ ಮಗನು.
10 ଅରୁବୋତରେ ବିନ୍-ହେଷଦ୍; ସୋଖୋ ଓ ସମୁଦାୟ ହେଫର ପ୍ରଦେଶ ତାହାର ଅଧୀନ ଥିଲା;
೧೦ಅರುಬ್ಬೋತಿನಲ್ಲಿ ವಾಸವಾಗಿದ್ದ ಹೆಸೆದನ ಮಗ, ಅವನು ಸೋಕೋ ಮತ್ತು ಹೇಫೆರ್ ಎಂಬ ಪ್ರದೇಶಗಳಿಗೆ ಅಧಿಪತಿಯಾಗಿದ್ದನು.
11 ସମୁଦାୟ ଦୋର ଉପପର୍ବତରେ ବିନ୍-ଅବୀନାଦବ୍; ତାହାର ଭାର୍ଯ୍ୟା ଶଲୋମନଙ୍କର କନ୍ୟା ଟାଫତ୍ ଥିଲା।
೧೧ದೋರ್ ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗ, ಸೊಲೊಮೋನನ ಮಗಳಾದ ಟಾಫತಳು ಅವನ ಹೆಂಡತಿಯಾಗಿದ್ದಳು.
12 ତାନକ୍, ମଗିଦ୍ଦୋ, ବେଥ୍-ଶାନ୍ ଠାରୁ ଆବେଲ୍-ମହୋଲା ଓ ଯକମୀୟାମ୍ ପାରି ପର୍ଯ୍ୟନ୍ତ ସର୍ତ୍ତନ ନିକଟବର୍ତ୍ତୀ ଯିଷ୍ରିୟେଲ ତଳେ ଥିବା ସମଗ୍ର ବେଥ୍-ଶାନରେ ଅହୀଲୂଦର ପୁତ୍ର ବାନା।
೧೨ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು.
13 ରାମୋତ୍-ଗିଲୀୟଦରେ ବିନ୍-ଗେବର; ମନଃଶିର ପୁତ୍ର ଯାୟୀରର ଗିଲୀୟଦସ୍ଥିତ ସମସ୍ତ ଗ୍ରାମ ତାହାର ଅଧୀନ ଥିଲା, ଅର୍ଥାତ୍ ବାଶନସ୍ଥ ଅର୍ଗୋବ-ଅଞ୍ଚଳରେ ଥିବା ପ୍ରାଚୀର-ବେଷ୍ଟିତ ଓ ପିତ୍ତଳ ଅର୍ଗଳବିଶିଷ୍ଟ ଷାଠିଏ ବୃହତ ନଗର ତାହାର ଅଧୀନ ଥିଲା;
೧೩ರಾಮೋತ್ ಗಿಲ್ಯಾದಿನಲ್ಲಿದ್ದ ಗೆಬೇರನ ಮಗ, ಅವನು ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದನು.
14 ମହନୟିମରେ ଇଦ୍ଦୋର ପୁତ୍ର ଅହୀନାଦବ୍।
೧೪ಮಹನಯಿಮಿನಲ್ಲಿದ್ದ ಇದ್ದೋವಿನ ಮಗನಾದ ಅಹೀನಾದಾಬನು.
15 ନପ୍ତାଲିରେ ଅହୀମାସ୍; ସେ ଶଲୋମନଙ୍କର କନ୍ୟା ବାସମତ୍କୁ ବିବାହ କରିଥିଲା।
೧೫ನಫ್ತಾಲಿ ಪ್ರದೇಶದಲ್ಲಿದ್ದ ಅಹೀಮಾಚನು, ಅವನು ಸೊಲೊಮೋನನ ಮಗಳಾದ ಬಾಸೆಮತಳನ್ನು ಮದುವೆಮಾಡಿಕೊಂಡಿದ್ದನು.
16 ଆଶେର ଓ ବାଲୋତ୍ରେ ହୂଶୟର ପୁତ୍ର ବାନା।
೧೬ಅಶೇರಿಗೂ ಮತ್ತು ಆಲೋತಿಗೂ ಒಡೆಯನಾದ ಹೂಷೈಯ ಮಗನಾದ ಬಾಣನು,
17 ଇଷାଖରରେ ପାରୁହର ପୁତ୍ର ଯିହୋଶାଫଟ୍;
೧೭ಇಸ್ಸಾಕಾರ್ ಪ್ರಾಂತ್ಯದಲ್ಲಿದ್ದ ಫಾರೂಹನ ಮಗನಾದ ಯೆಹೋಷಾಫಾಟನು,
18 ବିନ୍ୟାମୀନ୍ରେ ଏଲାର ପୁତ୍ର ଶିମୀୟି;
೧೮ಬೆನ್ಯಾಮೀನಿನಲ್ಲಿದ್ದ ಏಲನ ಮಗನಾದ ಶಿಮ್ಮೀ,
19 ଇମୋରୀୟମାନଙ୍କ ରାଜା ସୀହୋନର ଓ ବାଶନର ରାଜା ଓଗ୍ର ଗିଲୀୟଦ ଦେଶରେ ଊରିର ପୁତ୍ର ଗେବର; ସେ ଦେଶରେ ସେ ଏକମାତ୍ର ଦେଶାଧ୍ୟକ୍ଷ ଥିଲା।
೧೯ಅಮೋರಿಯರ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ರಾಜ್ಯವಾಗಿದ್ದ ಗಿಲ್ಯಾದ್ ಪ್ರದೇಶಕ್ಕೆಲ್ಲಾ ಒಬ್ಬನೇ ಅಧಿಪತಿಯಾಗಿದ್ದನು ಅವನು ಊರಿಯನ ಮಗನಾದ ಗೆಬೆರ್ ಎಂಬುವವನು.
20 ଯିହୁଦା ଓ ଇସ୍ରାଏଲ ଭୋଜନପାନ ଓ ଆମୋଦ ପ୍ରମୋଦ କରି ବାହୁଲ୍ୟ ହେତୁରୁ ସମୁଦ୍ରତୀରସ୍ଥ ବାଲୁକା ନ୍ୟାୟ ବହୁସଂଖ୍ୟକ ଥିଲେ।
೨೦ಇಸ್ರಾಯೇಲರು ಮತ್ತು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯರಾಗಿ ಅಭಿವೃದ್ಧಿಯಾದರು. ಅವರು ಅನ್ನಪಾನಗಳನ್ನು ಮಾಡುತ್ತಾ ತೃಪ್ತರಾಗಿ ಸಂತೋಷದಿಂದಿದ್ದರು.
21 ପୁଣି, ଶଲୋମନ (ଫରାତ୍) ନଦୀଠାରୁ ପଲେଷ୍ଟୀୟମାନଙ୍କ ଦେଶ ଓ ମିସର-ସୀମା ପର୍ଯ୍ୟନ୍ତ ସମସ୍ତ ରାଜ୍ୟ ଉପରେ ରାଜତ୍ୱ କଲେ; ଶଲୋମନଙ୍କର ଯାବଜ୍ଜୀବନ ସେମାନେ ଭେଟି ଆଣିଲେ ଓ ତାଙ୍କର ସେବା କଲେ।
೨೧ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.
22 ଶଲୋମନଙ୍କର ପ୍ରାତ୍ୟହିକ ଆୟୋଜନୀୟ ଦ୍ରବ୍ୟ ତିରିଶ ମହଣ ସରୁ ମଇଦା ଓ ଷାଠିଏ ମହଣ ସୁଜି,
೨೨ಸೊಲೊಮೋನನ ಅರಮನೆಗೆ ಪ್ರತಿದಿನ ಬೇಕಾಗುವ ಆಹಾರಪದಾರ್ಥಗಳು, ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆಗೋದಿಯ ಹಿಟ್ಟು,
23 ଆଉ ଦଶ ପୁଷ୍ଟ ଗୋରୁ ଓ ଚରାସ୍ଥାନରୁ କୋଡ଼ିଏ ଗୋରୁ ଓ ଏକ ଶହ ମେଷ, ଏହାଛଡ଼ା ଅନେକ ହରିଣ ଓ କୃଷ୍ଣସାର ଓ ବନଗୋରୁ ଓ ପୁଷ୍ଟ ପକ୍ଷୀ ଥିଲା।
೨೩ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಹುಲ್ಲುಗಾವಲಿನಲ್ಲಿರುವ ಎತ್ತುಗಳು, ನೂರು ಕುರಿಗಳು ಇವುಗಳಲ್ಲದೆ ಕಡವೆ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು ಇವುಗಳೇ.
24 କାରଣ, ସେ ତିପ୍ସହଠାରୁ ଘସା ପର୍ଯ୍ୟନ୍ତ (ଫରାତ୍) ନଦୀର ଏପାରିସ୍ଥିତ ସମସ୍ତ ଅଞ୍ଚଳର ରାଜାମାନଙ୍କ ଉପରେ କର୍ତ୍ତୃତ୍ୱ କଲେ; ପୁଣି, ତାଙ୍କର ଚତୁର୍ଦ୍ଦିଗସ୍ଥ ସବୁଆଡ଼େ ଶାନ୍ତି ଥିଲା।
೨೪ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.
25 ଏଣୁ ଶଲୋମନଙ୍କର ଯାବଜ୍ଜୀବନ ଦାନ୍ଠାରୁ ବେର୍ଶେବା ପର୍ଯ୍ୟନ୍ତ ଯିହୁଦା ଓ ଇସ୍ରାଏଲର ପ୍ରତ୍ୟେକ ଲୋକ ଆପଣା ଆପଣା ଦ୍ରାକ୍ଷାଲତା ଓ ଆପଣା ଆପଣା ଡିମ୍ବିରିବୃକ୍ଷ ମୂଳରେ ନିରାପଦରେ ବାସ କଲେ।
೨೫ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.
26 ଆଉ ଶଲୋମନଙ୍କର ରଥ ନିମନ୍ତେ ଚାଳିଶ ସହସ୍ର ଅଶ୍ୱଶାଳା ଓ ବାର ସହସ୍ର ଅଶ୍ୱାରୋହୀ ଥିଲେ।
೨೬ಸೊಲೊಮೋನನ ಲಾಯಗಳಲ್ಲಿ ನಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು. ಅವನಿಗೆ ಹನ್ನೆರಡು ಸಾವಿರ ಕುದುರೆಸವಾರರಿದ್ದರು.
27 ଆଉ ଶଲୋମନ ରାଜାଙ୍କ ନିମନ୍ତେ ଓ ଶଲୋମନ ରାଜାଙ୍କର ମେଜରେ ଭୋଜନକାରୀ ସମସ୍ତଙ୍କ ନିମନ୍ତେ ପୂର୍ବୋକ୍ତ ଦେଶାଧ୍ୟକ୍ଷମାନଙ୍କର ପ୍ରତ୍ୟେକ ଜଣ ଆପଣା ଆପଣା ନିରୂପିତ ମାସରେ ଖାଦ୍ୟଦ୍ରବ୍ୟ ଯୋଗାଇଲେ; ସେମାନେ କିଛି ଊଣା କଲେ ନାହିଁ।
೨೭ಮೇಲೆ ಕಾಣಿಸಿರುವ ಕಾರ್ಯನಿರ್ವಾಹಕರು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ, ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುವವರೆಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು.
28 ସେମାନଙ୍କର ପ୍ରତ୍ୟେକ ଜଣ ମଧ୍ୟ ଆପଣା ଆପଣା ନିରୂପିତ କର୍ମାନୁସାରେ ଅଶ୍ୱ ଓ ଦ୍ରୁତଗାମୀ ବାହନସକଳ ନିମନ୍ତେ ଅଧ୍ୟକ୍ଷମାନଙ୍କ ଥିବା ସ୍ଥାନକୁ ଯବ ଓ ତୃଣ ଆଣିଲେ।
೨೮ಇದಲ್ಲದೆ ಅವರು ರಥಾಶ್ವಗಳಿಗಾಗಿಯೂ ಮತ್ತು ಸವಾರಿಕುದುರೆಗಳಿಗಾಗಿಯೂ ನೇಮಕವಾದಷ್ಟು ಜವೆಗೋದಿಯನ್ನು, ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೇ ತಂದೊಪ್ಪಿಸುತ್ತಿದ್ದರು.
29 ଆହୁରି ପରମେଶ୍ୱର ଶଲୋମନଙ୍କୁ ଅତିଶୟ ଜ୍ଞାନ ଓ ବୁଦ୍ଧି, ପୁଣି, ସମୁଦ୍ରତୀରସ୍ଥ ବାଲୁକା ନ୍ୟାୟ ମନର ବିସ୍ତୀର୍ଣ୍ଣତା ପ୍ରଦାନ କଲେ।
೨೯ದೇವರು ಸೊಲೊಮೋನನಿಗೆ ವಿಶೇಷವಾದ ಜ್ಞಾನ, ವಿವೇಕಗಳನ್ನೂ, ಸಮುದ್ರ ತೀರದ ಮರಳಿನಷ್ಟು ಅಪರಿಮಿತವಾದ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.
30 ପୂର୍ବଦେଶୀୟ ଓ ମିସରୀୟ ସମସ୍ତ ଲୋକଙ୍କର ସମୁଦାୟ ଜ୍ଞାନ ଅପେକ୍ଷା ଶଲୋମନଙ୍କର ଜ୍ଞାନ ଅଧିକ ହେଲା।
೩೦ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ಮಿಗಿಲಾದುದಾಗಿತ್ತು.
31 କାରଣ, ସେ ସମସ୍ତ ଲୋକଙ୍କଠାରୁ, ଇଷ୍ରାହୀୟ ଏଥନ୍ ଓ ମାହୋଲର ପୁତ୍ର ହେମନ ଓ କଲ୍କୋଲ୍ ଓ ଦର୍ଦା, ଏମାନଙ୍କଠାରୁ ଅଧିକ ଜ୍ଞାନବାନ ଥିଲେ ଓ ଚତୁର୍ଦ୍ଦିଗସ୍ଥ ସକଳ ଗୋଷ୍ଠୀ ମଧ୍ୟରେ ତାଙ୍କର ସୁଖ୍ୟାତି ବ୍ୟାପିଲା।
೩೧ಅವನು ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಸುಪ್ರಸಿದ್ಧವಾಯಿತು.
32 ସେ ତିନି ସହସ୍ର ନୀତିକଥା କହିଲେ ଓ ତାଙ୍କର ଗୀତ ଏକ ସହସ୍ର ପାଞ୍ଚ ଥିଲା।
೩೨ಅವನ ಜ್ಞಾನೋಕ್ತಿಗಳು ಮೂರು ಸಾವಿರ ಮತ್ತು ಗೀತೆಗಳು ಸಾವಿರದ ಐದು.
33 ପୁଣି, ସେ ଲିବାନୋନର ଏରସ ବୃକ୍ଷଠାରୁ ପ୍ରାଚୀରରେ ଉତ୍ପନ୍ନ ଏସୋବ ତୃଣ ପର୍ଯ୍ୟନ୍ତ ବୃକ୍ଷମାନର ବର୍ଣ୍ଣନା କଲେ; ସେ ପଶୁ ଓ ପକ୍ଷୀ ଓ ଉରୋଗାମୀ ପ୍ରାଣୀ ଓ ମତ୍ସ୍ୟମାନଙ୍କର ମଧ୍ୟ ବର୍ଣ୍ଣନା କଲେ।
೩೩ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು.
34 ପୁଣି, ପୃଥିବୀସ୍ଥ ଯେଉଁ ଯେଉଁ ରାଜା ଶଲୋମନଙ୍କର ଜ୍ଞାନ ବିଷୟ ଶୁଣିଥିଲେ, ସେମାନଙ୍କ ନିକଟରୁ ସର୍ବଦେଶୀୟ ଲୋକେ ତାଙ୍କର ଜ୍ଞାନର କଥା ଶୁଣିବାକୁ ଆସିଲେ।
೩೪ಎಲ್ಲಾ ಜನಾಂಗಗಳಲ್ಲಿಯೂ ಸೊಲೊಮೋನನ ಜ್ಞಾನದ ವಿಶೇಷತೆಯನ್ನು ಕುರಿತು ಕೇಳಿದ ಅನೇಕ ರಾಜರೂ ಮತ್ತು ವಿದ್ವಾಂಸರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಬರುತ್ತಿದ್ದರು.