< ଯୋହନ 2 >
1 ତୃତୀୟ ଦିବସରେ ଗାଲିଲୀର କାନ୍ନାରେ ଗୋଟିଏ ବିବାହ ହେଲା, ଆଉ ଯୀଶୁଙ୍କ ମାତା ସେଠାରେ ଥିଲେ;
೧ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.
2 ଯୀଶୁ ମଧ୍ୟ ଆପଣା ଶିଷ୍ୟମାନଙ୍କ ସହିତ ସେହି ବିବାହକୁ ନିମନ୍ତ୍ରିତ ହେଲେ।
೨ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.
3 ପରେ ଦ୍ରାକ୍ଷାରସ ସରିଯିବାରୁ ଯୀଶୁଙ୍କ ମାତା ତାହାଙ୍କୁ କହିଲେ, ସେମାନଙ୍କର ଦ୍ରାକ୍ଷାରସ ନାହିଁ।
೩ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು.
4 ସେଥିରେ ଯୀଶୁ ତାହାଙ୍କୁ କହିଲେ, “ଗୋ ନାରୀ, ମୋତେ କାହିଁକି ଏଥିରେ ଜଡ଼ିତ କରୁଅଛ? ମୋହର ସମୟ ଏପର୍ଯ୍ୟନ୍ତ ଉପସ୍ଥିତ ହୋଇ ନାହିଁ।”
೪ಯೇಸು ಆಕೆಗೆ “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.
5 ତାହାଙ୍କ ମାତା ପରିଚାରକମାନଙ୍କୁ କହିଲେ, ସେ ତୁମ୍ଭମାନଙ୍କୁ ଯାହା କିଛି କହନ୍ତି, ତାହା କର।
೫ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು.
6 ଆଉ, ସେଠାରେ ଯିହୁଦୀମାନଙ୍କ ଶୁଚିକରଣ ରୀତି ଅନୁସାରେ ଦୁଇ ବା ତିନି ମହଣିଆ ଛଅଗୋଟା ପଥର ଜାହାଲା ରଖାଯାଇଥିଲା।
೬ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.
7 ଯୀଶୁ ସେମାନଙ୍କୁ କହିଲେ, “ଜାହାଲାଗୁଡ଼ିକରେ ପାଣି ଭର୍ତ୍ତି କର।” ସେଥିରେ ସେମାନେ ସେହିସବୁ ଫନ୍ଦ ପର୍ଯ୍ୟନ୍ତ ଭର୍ତ୍ତି କଲେ।
೭ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.
8 ଆଉ, ସେ ସେମାନଙ୍କୁ କହିଲେ, “ଏବେ କାଢ଼ିନେଇ ଭୋଜର ଅଧ୍ୟକ୍ଷଙ୍କ ନିକଟକୁ ଘେନିଯାଅ।” ସେଥିରେ ସେମାନେ ଘେନିଗଲେ।
೮ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು.
9 ଭୋଜର ଅଧ୍ୟକ୍ଷ ଦ୍ରାକ୍ଷାରସରେ ପରିବର୍ତ୍ତନ ହୋଇଥିବା ସେହି ପାଣିକୁ ଚାଖି ତାହା କେଉଁଠାରୁ ଆସିଲା, ଏହା ଜାଣି ନ ଥିବାରୁ (କିନ୍ତୁ ଯେଉଁ ପରିଚାରକମାନେ ପାଣି କାଢ଼ିଥିଲେ, ସେମାନେ ଜାଣିଥିଲେ) ବରଙ୍କୁ ଡାକି କହିଲେ,
೯ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,
10 ସମସ୍ତେ ପ୍ରଥମରେ ଭଲ ଦ୍ରାକ୍ଷାରସ ଦେଇଥାଆନ୍ତି, ଆଉ ଲୋକେ ମାତାଲ ହେଲା ଉତ୍ତାରେ ମନ୍ଦ ଦିଅନ୍ତି; ତୁମ୍ଭେ ଏପର୍ଯ୍ୟନ୍ତ ଭଲ ଦ୍ରାକ୍ଷାରସ ରଖିଅଛ।
೧೦“ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.
11 ଯୀଶୁ ଏହି ପ୍ରକାରେ ଗାଲିଲୀର କାନ୍ନାରେ ଆଶ୍ଚର୍ଯ୍ୟକର୍ମ ଆରମ୍ଭ କରି ଆପଣା ମହିମା ପ୍ରକାଶ କଲେ, ଆଉ ତାହାଙ୍କ ଶିଷ୍ୟମାନେ ତାହାଙ୍କଠାରେ ବିଶ୍ୱାସ କଲେ।
೧೧ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.
12 ଏଥିଉତ୍ତାରେ ସେ ଆପଣା ମାତା, ଭାଇବୃନ୍ଦ ଓ ଶିଷ୍ୟମାନଙ୍କ ସହିତ କଫର୍ନାହୂମକୁ ଗଲେ; ପୁଣି, ସେମାନେ ସେଠାରେ ଅଧିକ ଦିନ ରହିଲେ ନାହିଁ।
೧೨ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು.
13 ସେତେବେଳେ ଯିହୁଦୀମାନଙ୍କର ନିସ୍ତାର ପର୍ବ ସନ୍ନିକଟ ହୋଇଥିଲା, ଆଉ ଯୀଶୁ ଯିରୂଶାଲମ ସହରକୁ ଗଲେ।
೧೩ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.
14 ପୁଣି, ସେ ମନ୍ଦିରରେ ଗୋରୁ, ମେଣ୍ଢା ଓ କାପ୍ତା-ବ୍ୟବସାୟୀମାନଙ୍କୁ ଆଉ ମୁଦ୍ରା-ବ୍ୟବସାୟୀମାନଙ୍କୁ ବସିଥିବା ଦେଖି ଦଉଡ଼ିରେ ଗୋଟିଏ କୋରଡ଼ା ବନାଇ ମେଣ୍ଢା ଓ ଗୋରୁ ସହିତ ସମସ୍ତଙ୍କୁ ମନ୍ଦିରରୁ ବାହାର କରିଦେଲେ;
೧೪ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು.
15 ପୁଣି, ମୁଦ୍ରା-ବ୍ୟବସାୟୀମାନଙ୍କର ମୁଦ୍ରାସବୁ ବିଞ୍ଚିଦେଇ ସେମାନଙ୍କ ମେଜଗୁଡ଼ାକ ଓଲଟାଇ ପକାଇଲେ;
೧೫ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.
16 ଆଉ, ସେ କାପ୍ତା-ବ୍ୟବସାୟୀମାନଙ୍କୁ କହିଲେ, “ଏଗୁଡ଼ିକ ଏଠାରୁ ଘେନିଯାଅ, ମୋହର ସ୍ୱର୍ଗସ୍ଥ ପିତା ଈଶ୍ବରଙ୍କର ଗୃହକୁ ବାଣିଜ୍ୟର ଗୃହ କର ନାହିଁ।”
೧೬ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು.
17 ତୁମ୍ଭ ଗୃହ ନିମନ୍ତେ ଉଦ୍ଯୋଗ ମୋତେ ଗ୍ରାସ କରିବ, ଏହା ଲେଖାଅଛି ବୋଲି ତାହାଙ୍କ ଶିଷ୍ୟମାନଙ୍କର ମନରେ ପଡ଼ିଲା।
೧೭ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.
18 ସେଥିରେ କେତେକ ଯିହୁଦୀ ନେତାମାନେ ତାହାଙ୍କୁ ଉତ୍ତର ଦେଲେ, ତୁମ୍ଭେ ଯେ ଏସମସ୍ତ କରିବାକୁ ଅଧିକାର ପାଇଅଛ, ଆମ୍ଭମାନଙ୍କୁ ସେଥିର କି ଚିହ୍ନ ଦେଖାଉଅଛ?
೧೮ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.
19 ଯୀଶୁ ସେମାନଙ୍କୁ ଉତ୍ତର ଦେଲେ, “ତୁମ୍ଭେମାନେ ଏହି ମନ୍ଦିରକୁ ବିନାଶ କର, ଆଉ ତିନି ଦିନ ମଧ୍ୟରେ ମୁଁ ତାହା ତୋଳି ଦେବି।”
೧೯ಅದಕ್ಕೆ ಯೇಸು “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು.
20 ସେଥିରେ ଯିହୁଦୀମାନେ କହିଲେ, ଏହି ମନ୍ଦିର ନିର୍ମାଣ କରିବା ନିମନ୍ତେ ଛୟାଳିଶ ବର୍ଷ ଲାଗିଅଛି; ଆଉ ତୁମ୍ଭେ କଅଣ ତାହାକୁ ତିନି ଦିନରେ ତୋଳି ଦେବ?
೨೦ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು.
21 କିନ୍ତୁ ସେ ଆପଣା ଶରୀରରୂପ ମନ୍ଦିର ସମ୍ବନ୍ଧରେ କହୁଥିଲେ।
೨೧ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು.
22 ଏଣୁ ସେ ମୃତମାନଙ୍କ ମଧ୍ୟରୁ ଉତ୍ଥିତ ହେଲା ଉତ୍ତାରେ ତାହାଙ୍କ ଶିଷ୍ୟମାନେ ସେ ଏହା କହିଥିଲେ ବୋଲି ସ୍ମରଣ କଲେ; ପୁଣି, ସେମାନେ ଧର୍ମଶାସ୍ତ୍ର ଓ ଯୀଶୁଙ୍କ କଥିତ ବାକ୍ୟ ବିଶ୍ୱାସ କଲେ।
೨೨ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.
23 ନିସ୍ତାର ପର୍ବର ଉତ୍ସବ ସମୟରେ ସେ ଯିରୂଶାଲମ ସହରରେ ଥିବା ସମୟରେ ଅନେକେ ତାହାଙ୍କ ସାଧିତ ଆଶ୍ଚର୍ଯ୍ୟକର୍ମଗୁଡ଼ିକ ଦେଖି ତାହାଙ୍କ ନାମରେ ବିଶ୍ୱାସ କଲେ,
೨೩ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
24 କିନ୍ତୁ ଯୀଶୁ ସେମାନଙ୍କୁ ବିଶ୍ୱାସ ନ କରି ସେମାନଙ୍କଠାରୁ ଆପଣାକୁ ପୃଥକ ରଖିଲେ, କାରଣ ସେ ସମସ୍ତଙ୍କୁ ଜାଣିଥିଲେ,
೨೪ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ,
25 ପୁଣି, କେହି ଯେ ମନୁଷ୍ୟ ବିଷୟରେ ସାକ୍ଷ୍ୟ ଦେବ, ଏହା ତାହାଙ୍କର ପ୍ରୟୋଜନ ନ ଥିଲା, ଯେଣୁ ମନୁଷ୍ୟ ଅନ୍ତରରେ କଅଣ ଅଛି, ତାହା ସେ ଆପେ ଜାଣିଥିଲେ।
೨೫ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.