< ମାଥିଉ 21 >
1 ଯେତେବେଳେ ସେମାନେ ଯିରୂଶାଲମ ସହରର ନିକଟବର୍ତ୍ତୀ ହୋଇ ବୈଥ୍ଫାଗୀ ଓ ଜୀତପର୍ବତ ନିକଟରେ ଉପସ୍ଥିତ ହେଲେ, ସେତେବେଳେ ଯୀଶୁ ଦୁଇ ଶିଷ୍ୟଙ୍କୁ ଏହି କଥା କହି ପଠାଇଲେ।
೧ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ
2 “ତୁମ୍ଭମାନଙ୍କ ସମ୍ମୁଖସ୍ଥ ସେହି ଗ୍ରାମକୁ ଯାଅ, ଆଉ ଯିବା ମାତ୍ରେ ବନ୍ଧା ହୋଇଥିବା ଗୋଟିଏ ଗର୍ଦ୍ଦଭୀ ଓ ତାହା ସହିତ ଗୋଟିଏ ଶାବକକୁ ଦେଖିବ; ସେମାନଙ୍କୁ ଫିଟାଇ ମୋ ନିକଟକୁ ନେଇଆସ।
೨ಆತನು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರೊಂದಿಗೆ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತಿರಕ್ಕೆ ತನ್ನಿರಿ.
3 ଆଉ ଯେବେ କେହି ତୁମ୍ଭମାନଙ୍କୁ କିଛି କହେ, ତେବେ କହିବ ଏମାନଙ୍କଠାରେ ପ୍ରଭୁଙ୍କର ଆବଶ୍ୟକ ଅଛି। ସେହିକ୍ଷଣି ସେ ସେମାନଙ୍କୁ ପଠାଇଦେବ।”
೩ಯಾವನಾದರೂ ನಿಮಗೆ ಏನಾದರೂ ಹೇಳಿದರೆ, ‘ಇವು ನಮ್ಮ ಕರ್ತನಿಗೆ ಬೇಕಾಗಿವೆ’ ಎಂದು ನೀವು ಹೇಳಿರಿ; ಅವನು ಕೂಡಲೆ ಅವುಗಳನ್ನು ಬಿಟ್ಟು ಕೊಡುವನು” ಎಂದು ಹೇಳಿ ಕಳುಹಿಸಿದನು.
4 ଭାବବାଦୀଙ୍କ ଦ୍ୱାରା ଉକ୍ତ ଏହି ବାକ୍ୟ ଯେପରି ସଫଳ ହୁଏ, ସେଥିନିମନ୍ତେ ଏହା ଘଟିଲା,
೪ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದಾಯಿತು; ಅದೇನೆಂದರೆ,
5 ସିୟୋନର କନ୍ୟାକୁ କୁହ, ଦେଖ୍, ତୋର ରାଜା ତୋʼ ନିକଟକୁ ଆସୁଅଛନ୍ତି; ସେ ନମ୍ର ଓ ଗର୍ଦ୍ଦଭାରୋହୀ, ଶାବକ, ଗର୍ଦ୍ଦଭଶାବକାରୋହୀ।
೫“ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.
6 ସେଥିରେ ଶିଷ୍ୟମାନେ ଯାଇ ଯୀଶୁଙ୍କ ଆଦେଶ ଅନୁସାରେ କାମ କଲେ,
೬ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.
7 ପୁଣି, ଗର୍ଦ୍ଦଭୀ ଓ ଶାବକଟି ଆଣି ସେମାନଙ୍କ ଉପରେ ବସ୍ତ୍ର ପାତିଦେଲେ, ଆଉ ସେ ତାହା ଉପରେ ବସିଲେ।
೭ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಯೇಸು ಹತ್ತಿ ಕುಳಿತುಕೊಂಡನು.
8 ପୁଣି, ଲୋକମାନଙ୍କ ମଧ୍ୟରୁ ଅଧିକାଂଶ ଆପଣା ଆପଣା ଲୁଗା ପଥରେ ବିଛାଇଲେ ଓ ଅନ୍ୟମାନେ ଗଛରୁ ଡାଳ କାଟି ଆଣି ବାଟରେ ବିଛାଇ ଦେବାକୁ ଲାଗିଲେ।
೮ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.
9 ଆଉ ତାହାଙ୍କ ଆଗରେ ଓ ପଛରେ ଯାଉଥିବା ଲୋକମାନେ ଉଚ୍ଚସ୍ୱରରେ କହିବାକୁ ଲାଗିଲେ, ହୋଶାନ୍ନା ଦାଉଦଙ୍କ ସନ୍ତାନ! ପ୍ରଭୁଙ୍କ ନାମରେ ଯେ ଆସୁଅଛନ୍ତି, ସେ ଧନ୍ୟ! ଊର୍ଦ୍ଧ୍ୱଲୋକରେ ହୋଶାନ୍ନା।
೯ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.
10 ଆଉ ସେ ଯିରୂଶାଲମ ସହରରେ ପ୍ରବେଶ କରନ୍ତେ ନଗରଯାକ ଏ କିଏ ବୋଲି ଚହଳ ପଡ଼ିଗଲା।
೧೦ಯೇಸು ಯೆರೂಸಲೇಮನ್ನು ಪ್ರವೇಶಿಸಲು ಪಟ್ಟಣದಲ್ಲೆಲ್ಲಾ ಗದ್ದಲವಾಗಿ, “ಈತನು ಯಾರು?” ಅಂದರು.
11 ସେଥିରେ ଲୋକସମୂହ କହିଲେ, ଏ ଗାଲିଲୀସ୍ଥ ନାଜରିତର ଭାବବାଦୀ ଯୀଶୁ।
೧೧ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು.
12 ପରେ ଯୀଶୁ ଈଶ୍ବରଙ୍କ ମନ୍ଦିରରେ ପ୍ରବେଶ କରି ସେ ସ୍ଥାନରେ କିଣାବିକା କରୁଥିବା ସମସ୍ତ ଲୋକଙ୍କୁ ବାହାର କରିଦେଲେ, ପୁଣି, ମୁଦ୍ରା-ବ୍ୟବସାୟୀମାନଙ୍କର ମେଜ ଓ କାପ୍ତା-ବ୍ୟବସାୟୀମାନଙ୍କର ଆସନ ଓଲଟାଇ ପକାଇଲେ,
೧೨ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.
13 ଆଉ ଯୀଶୁ ସେମାନଙ୍କୁ କହିଲେ, “ଲେଖାଅଛି, ‘ଆମ୍ଭର ଗୃହ ପ୍ରାର୍ଥନାର ଗୃହ ବୋଲି ପରିଚିତ ହେବ, କିନ୍ତୁ ତୁମ୍ଭେମାନେ ତାହାକୁ ଡକାଇତମାନଙ୍କ ବାସସ୍ଥାନ କରୁଅଛ।’”
೧೩ಆತನು ಅವರಿಗೆ, “‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.
14 ପୁଣି, ମନ୍ଦିରରେ ଅନ୍ଧ ଓ ଖଞ୍ଜ ଲୋକେ ତାହାଙ୍କ ପାଖକୁ ଆସନ୍ତେ ସେ ସେମାନଙ୍କୁ ସୁସ୍ଥ କଲେ।
೧೪ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.
15 କିନ୍ତୁ ପ୍ରଧାନ ଯାଜକ ଓ ଶାସ୍ତ୍ରୀମାନେ ତାହାଙ୍କ କରିଥିବା ଆଶ୍ଚର୍ଯ୍ୟକର୍ମଗୁଡ଼ିକୁ ଓ ମନ୍ଦିର ମଧ୍ୟରେ ହୋଶାନ୍ନା ଦାଉଦଙ୍କ ସନ୍ତାନ ବୋଲି ଉଚ୍ଚସ୍ୱର କରୁଥିବା ପିଲାମାନଙ୍କୁ ଦେଖି ବିରକ୍ତ ହେଲେ,
೧೫ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.
16 ପୁଣି, ତାହାଙ୍କୁ ପଚାରିଲେ, ଏମାନେ କଅଣ କହୁଅଛନ୍ତି, ତାହା କି ତୁମ୍ଭେ ଶୁଣୁଅଛ? ଯୀଶୁ ସେମାନଙ୍କୁ କହିଲେ, “ହଁ, ‘ତୁମ୍ଭେ ଶିଶୁ ଓ ସ୍ତନ୍ୟପାୟୀମାନଙ୍କ ମୁଖ ଦ୍ୱାରା ଆପଣା ଉଦ୍ଦେଶ୍ୟରେ ସ୍ତବ ସିଦ୍ଧ କରିଅଛ,’ ଏହି କଥା କି ତୁମ୍ଭେମାନେ କେବେ ହେଁ ପାଠ କରି ନାହଁ?”
೧೬ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.
17 ଆଉ, ସେ ସେମାନଙ୍କୁ ଛାଡ଼ିଦେଇ ଯିରୂଶାଲମ ସହରରୁ ବାହାରି ବେଥନୀୟାକୁ ଯାଇ ସେଠାରେ ରାତି କଟାଇଲେ।
೧೭ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು.
18 ସକାଳେ ସେ ଯିରୂଶାଲମ ସହରକୁ ଫେରିବା ସମୟରେ କ୍ଷୁଧିତ ହେଲେ,
೧೮ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು.
19 ଆଉ ବାଟ ପାଖରେ ଗୋଟିଏ ଡିମ୍ବିରିବୃକ୍ଷ ଦେଖି ତାହା ନିକଟକୁ ଗଲେ, ପୁଣି, କେବଳ ପତ୍ର ଛଡ଼ା ତାହାଠାରେ ଆଉ କିଛି ନ ପାଇ ତାହାକୁ କହିଲେ, “ଆଉ କଦାପି ତୋʼଠାରେ ଫଳ ନ ହେଉ।” ସେଥିରେ ସେହିକ୍ଷଣି ସେହି ଡିମ୍ବିରିବୃକ୍ଷ ଶୁଖିଗଲା। (aiōn )
೧೯ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು. (aiōn )
20 ଶିଷ୍ୟମାନେ ତାହା ଦେଖି ଚମତ୍କୃତ ହୋଇ କହିଲେ, ଡିମ୍ବିରିବୃକ୍ଷଟି କିପରି ସେହିକ୍ଷଣି ଶୁଖିଗଲା?
೨೦ಶಿಷ್ಯರು ಅದನ್ನು ನೋಡಿ ಬೆರಗಾಗಿ, “ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ” ಎಂದು ಆಶ್ಚರ್ಯಗೊಂಡರು.
21 ଯୀଶୁ ସେମାନଙ୍କୁ ଉତ୍ତର ଦେଲେ, “ମୁଁ ତୁମ୍ଭମାନଙ୍କୁ ସତ୍ୟ କହୁଅଛି, ଯଦି ତୁମ୍ଭମାନଙ୍କର ବିଶ୍ୱାସ ଥାଏ, ଆଉ ତୁମ୍ଭେମାନେ ସନ୍ଦେହ ନ କର, ତେବେ ଏହି ଡିମ୍ବିରିବୃକ୍ଷ ପ୍ରତି ଯେପରି ହୋଇଅଛି, କେବଳ ଯେ ସେପରି ହେବ, ତାହା ନୁହେଁ, ମାତ୍ର ଯଦି ଏ ପର୍ବତକୁ ସୁଦ୍ଧା ‘ତୁ ଉଠି ସମୁଦ୍ରରେ ଯାଇ ପଡ଼’ ବୋଲି କହିବ, ତାହାହେଲେ ତାହା ହେବ।
೨೧ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.
22 ପୁଣି, ବିଶ୍ୱାସ କରି ପ୍ରାର୍ଥନାରେ ଯାହା କିଛି ମାଗିବ, ସେହିସବୁ ପାଇବ।”
೨೨ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.
23 ପରେ ସେ ମନ୍ଦିରରେ ପ୍ରବେଶ କରି ଶିକ୍ଷା ଦେବା ସମୟରେ ପ୍ରଧାନ ଯାଜକମାନେ ଓ ଲୋକଙ୍କର ପ୍ରାଚୀନବର୍ଗ ତାହାଙ୍କ ନିକଟକୁ ଆସି ପଚାରିଲେ, ତୁମ୍ଭେ କେଉଁ ଅଧିକାରରେ ଏସମସ୍ତ କରୁଅଛ? ଆଉ ତୁମ୍ଭକୁ କିଏ ଏହି ଅଧିକାର ଦେଲା?
೨೩ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.
24 ଯୀଶୁ ସେମାନଙ୍କୁ ଉତ୍ତର ଦେଲେ, “ମୁଁ ମଧ୍ୟ ତୁମ୍ଭମାନଙ୍କୁ ଗୋଟିଏ କଥା ପଚାରିବି, ଯଦି ତୁମ୍ଭେମାନେ ମୋତେ ତାହା କହିବ, ତେବେ କେଉଁ ଅଧିକାରରେ ମୁଁ ଏହି ସମସ୍ତ କରୁଅଛି, ତାହା ମୁଁ ମଧ୍ୟ ତୁମ୍ଭମାନଙ୍କୁ କହିବି।
೨೪ಯೇಸು ಅವರಿಗೆ ಹೇಳಿದ್ದೇನೆಂದರೆ, “ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
25 ଯୋହନଙ୍କର ବାପ୍ତିସ୍ମ କେଉଁଠାରୁ ହୋଇଥିଲା? ସ୍ୱର୍ଗରୁ ବା ମନୁଷ୍ୟଠାରୁ?” ସେଥିରେ ସେମାନେ ପରସ୍ପର ତର୍କବିତର୍କ କରି କହିବାକୁ ଲାଗିଲେ, ଯଦି ସ୍ୱର୍ଗରୁ ବୋଲି କହିବୁ, ତାହାହେଲେ ସେ ଆମ୍ଭମାନଙ୍କୁ କହିବେ, ତେବେ ତୁମ୍ଭେମାନେ କାହିଁକି ତାହାଙ୍କୁ ବିଶ୍ୱାସ କଲ ନାହିଁ?
೨೫ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು;
26 କିନ୍ତୁ ଯଦି ମନୁଷ୍ୟଠାରୁ ବୋଲି କହିବୁ, ତେବେ ଲୋକସମୂହକୁ ତ ଭୟ! କାରଣ ସମସ୍ତେ ଯୋହନଙ୍କୁ ଭାବବାଦୀ ବୋଲି ମାନନ୍ତି।
೨೬‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
27 ଏଣୁ ସେମାନେ ଯୀଶୁଙ୍କୁ ଉତ୍ତର ଦେଲେ, ଆମ୍ଭେମାନେ ଜାଣୁ ନାହୁଁ। ସେ ମଧ୍ୟ ସେମାନଙ୍କୁ କହିଲେ, “ତେବେ ମୁଁ କେଉଁ ଅଧିକାରରେ ଏସମସ୍ତ କରୁଅଛି, ତାହା ମୁଁ ମଧ୍ୟ ତୁମ୍ଭମାନଙ୍କୁ କହିବି ନାହିଁ।”
೨೭ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.
28 “ମାତ୍ର ତୁମ୍ଭେମାନେ କଅଣ ମନେ କର? ଜଣେ ବ୍ୟକ୍ତିଙ୍କର ଦୁଇଟି ପୁତ୍ର ଥିଲେ। ସେ ପ୍ରଥମ ନିକଟକୁ ଆସି କହିଲେ, ‘ପୁଅ, ଯା, ଆଜି ଦ୍ରାକ୍ଷାକ୍ଷେତ୍ରରେ କାମ କର।’”
೨೮ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು
29 ସେ ଉତ୍ତର ଦେଲା, “‘ମୋହର ଇଚ୍ଛା ନାହିଁ,’ କିନ୍ତୁ ପରେ ଅନୁତାପ କରି ଗଲା।
೨೯ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು.
30 ପୁଣି, ସେ ଦ୍ୱିତୀୟ ପାଖକୁ ଆସି ସେହି ପ୍ରକାର କହିଲେ। ସେ ଉତ୍ତର ଦେଲା, ‘ମହାଶୟ, ମୁଁ ଯାଉଅଛି, କିନ୍ତୁ ଗଲା ନାହିଁ।’
೩೦ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ.
31 ଏହି ଦୁହିଁଙ୍କ ମଧ୍ୟରୁ କିଏ ପିତାଙ୍କର ଇଚ୍ଛା ସାଧନ କଲା?” ସେମାନେ କହିଲେ, “ପ୍ରଥମ ଜଣକ।” ଯୀଶୁ ସେମାନଙ୍କୁ କହିଲେ, “ମୁଁ ତୁମ୍ଭମାନଙ୍କୁ ସତ୍ୟ କହୁଅଛି, କରଗ୍ରାହୀ ଓ ବେଶ୍ୟାମାନେ ତୁମ୍ଭମାନଙ୍କ ଆଗେ ଈଶ୍ବରଙ୍କ ରାଜ୍ୟରେ ପ୍ରବେଶ କରୁଅଛନ୍ତି।
೩೧ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
32 କାରଣ ଯୋହନ ତୁମ୍ଭମାନଙ୍କ ନିକଟକୁ ଧାର୍ମିକତାର ପଥ ଦେଇ ଆସିଲେ, ଆଉ ତୁମ୍ଭେମାନେ ତାହାଙ୍କୁ ବିଶ୍ୱାସ କଲ ନାହିଁ, ମାତ୍ର କରଗ୍ରାହୀ ଓ ବେଶ୍ୟାମାନେ ତାହାଙ୍କୁ ବିଶ୍ୱାସ କଲେ, କିନ୍ତୁ ତୁମ୍ଭେମାନେ ଯେପରି ତାହାଙ୍କୁ ବିଶ୍ୱାସ କରିପାର, ଏଥିନିମନ୍ତେ ତାହା ଦେଖି ସୁଦ୍ଧା ଅନୁତାପ କଲ ନାହିଁ।”
೩೨ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.
33 “ଆଉ ଗୋଟିଏ ଦୃଷ୍ଟାନ୍ତ ଶୁଣ। ଜଣେ ଗୃହକର୍ତ୍ତା ଥିଲେ, ସେ ଗୋଟିଏ ଦ୍ରାକ୍ଷାକ୍ଷେତ୍ର କରି ଚାରିଆଡ଼େ ବାଡ଼ ଦେଲେ ଓ ତହିଁ ମଧ୍ୟରେ ଦ୍ରାକ୍ଷାକୁଣ୍ଡ ଖୋଳି ପ୍ରହରୀ-ଗୃହ ତିଆରି କଲେ, ପୁଣି, କୃଷକମାନଙ୍କୁ ସେହି କ୍ଷେତ୍ର ଭାଗରେ ଦେଇ ବିଦେଶକୁ ଚାଲିଗଲେ।
೩೩“ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನುಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನುಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.
34 ପରେ ଫଳର ସମୟ ପାଖେଇ ଆସନ୍ତେ ସେ ଆପଣା ଫଳ ପାଇବା ପାଇଁ କୃଷକମାନଙ୍କ ପାଖକୁ ନିଜ ଦାସମାନଙ୍କୁ ପଠାଇଲେ।
೩೪ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,
35 କିନ୍ତୁ କୃଷକମାନେ ତାହାଙ୍କ ଦାସମାନଙ୍କୁ ଧରି ଜଣକୁ ପ୍ରହାର କଲେ, ଅନ୍ୟ ଜଣକୁ ବଧ କଲେ, ପୁଣି, ଆଉ ଜଣକୁ ପଥର ଫୋପାଡ଼ି ମାରିପକାଇଲେ।
೩೫ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.
36 ପୁଣି, ଥରେ ସେ ପ୍ରଥମ ଥର ଅପେକ୍ଷା ଅଧିକ ସଂଖ୍ୟକ ଦାସ ପଠାଇଲେ, ଆଉ ସେମାନେ ସେମାନଙ୍କ ପ୍ରତି ସେହି ପ୍ରକାର କଲେ।
೩೬ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು.
37 ‘କିନ୍ତୁ ମୋହର ପୁଅକୁ ସେମାନେ ମାନ୍ୟ କରିବେ,’ ଏହା କହି ସେ ପରେ ଆପଣା ପୁତ୍ରକୁ ସେମାନଙ୍କ ନିକଟକୁ ପଠାଇଲେ।
೩೭ಕಡೆಯಲ್ಲಿ ‘ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.
38 ମାତ୍ର ସେହି କୃଷକମାନେ ପୁତ୍ରଙ୍କୁ ଦେଖି ପରସ୍ପର କହିଲେ, ‘ଏ ତ ଉତ୍ତରାଧିକାରୀ; ଆସ, ଏହାକୁ ମାରି ଦେଇ ଆମ୍ଭେମାନେ ଏହାର ଅଧିକାର ଦଖଲ କରୁ।’
೩೮ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು
39 ଆଉ ସେମାନେ ତାହାଙ୍କୁ ଧରି ଦ୍ରାକ୍ଷାକ୍ଷେତ୍ରର ବାହାରେ ପକାଇ ମାରିଦେଲେ।
೩೯ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು.
40 ଅତଏବ ଯେତେବେଳେ ସେହି ଦ୍ରାକ୍ଷାକ୍ଷେତ୍ରର ମାଲିକ ଆସିବେ, ସେତେବେଳେ ସେହି କୃଷକମାନଙ୍କ ପ୍ରତି ସେ କଅଣ କରିବେ?”
೪೦ಹಾಗಾದರೆ ದ್ರಾಕ್ಷಾತೋಟದ ಧಣಿಯು ಬಂದಾಗ ಆ ತೋಟಗಾರರಿಗೆ ಏನು ಮಾಡುವನು?” ಅಂದನು.
41 ସେମାନେ ତାହାଙ୍କୁ କହିଲେ, ସେ ସେହି ଦୁଷ୍ଟମାନଙ୍କୁ ନିଷ୍ଠୁର ଭାବରେ ବିନାଶ କରିବେ ଓ ଯେଉଁ ଅନ୍ୟ କୃଷକମାନେ ତାହାଙ୍କୁ ଠିକ୍ ସମୟରେ ଫଳ ଯୋଗାଇବେ, ସେମାନଙ୍କୁ ଦ୍ରାକ୍ଷାକ୍ଷେତ୍ର ଭାଗରେ ଦେବେ।
೪೧ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.
42 ଯୀଶୁ ସେମାନଙ୍କୁ କହିଲେ, “ତୁମ୍ଭେମାନେ କି କେବେ ହେଁ ଧର୍ମଶାସ୍ତ୍ରରେ ଏହି କଥା ପାଠ କରି ନାହଁ, ‘ଗୃହନିର୍ମାଣକାରୀମାନେ ଯେଉଁ ପ୍ରସ୍ତରକୁ ଅଗ୍ରାହ୍ୟ କଲେ, ତାହା କୋଣର ପ୍ରଧାନ ପ୍ରସ୍ତର ହେଲା; ପ୍ରଭୁଙ୍କଠାରୁ ଏହା ହେଲା, ଆଉ ତାହା ଆମ୍ଭମାନଙ୍କ ଦୃଷ୍ଟିରେ ଆଶ୍ଚର୍ଯ୍ୟଜନକ?’
೪೨ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’
43 ଏଣୁ ମୁଁ ତୁମ୍ଭମାନଙ୍କୁ କହୁଅଛି, ଈଶ୍ବରଙ୍କ ରାଜ୍ୟ ତୁମ୍ଭମାନଙ୍କଠାରୁ କାଢ଼ି ନିଆଯିବ, ପୁଣି, ଯେଉଁ ଜାତି ସେଥିର ଫଳ ଫଳିବ, ତାହାକୁ ଦିଆଯିବ।
೪೩ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.
44 ଆଉ ଯେ ଏହି ପ୍ରସ୍ତର ଉପରେ ପଡ଼ିବ, ସେ ଖଣ୍ଡବିଖଣ୍ଡ ହେବ, ପୁଣି, ଏହି ପ୍ରସ୍ତର ଯାହା ଉପରେ ପଡ଼ିବ, ତାହାକୁ ତାହା ଚୂର୍ଣ୍ଣବିଚୂର୍ଣ୍ଣ କରିବ।”
೪೪ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು” ಎಂದು ಹೇಳಿದನು.
45 ପ୍ରଧାନ ଯାଜକ ଓ ଫାରୂଶୀମାନେ ତାହାଙ୍କର ଏହି ସମସ୍ତ ଦୃଷ୍ଟାନ୍ତ ଶୁଣି, ସେ ଯେ ସେମାନଙ୍କ ବିଷୟରେ କହୁଅଛନ୍ତି, ଏହା ବୁଝିଲେ।
೪೫ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;
46 ଆଉ ସେମାନେ ତାହାଙ୍କୁ ଧରିବାକୁ ଚେଷ୍ଟା କଲେ, କିନ୍ତୁ ଲୋକସମୂହକୁ ଭୟ କଲେ, କାରଣ ସେମାନେ ତାହାଙ୍କୁ ଭାବବାଦୀ ବୋଲି ମାନୁଥିଲେ।
೪೬ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.