< Faarfannaa 3 >
1 Faarfannaa Daawit yeroo ilma isaa Abesaaloom jalaa baqatetti faarfate. Yaa Waaqayyo, diinonni koo akkam baayʼatu! Namoonni baayʼeen natti kaʼaniiru!
೧ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಿದ ಕೀರ್ತನೆ. ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ.
2 Namoonni baayʼeen, “Waaqni isa hin baraaru” jedhanii waaʼee koo dubbatu.
೨ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. (ಸೆಲಾ)
3 Yaa Waaqayyo, ati garuu naannoo kootti gaachana koo ti; ulfina kootis; mataa koos kan ol qabdu suma.
೩ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.
4 Ani guddisee Waaqayyotti nan iyyadha; innis tulluu isaa qulqulluu irraa deebii naa kenna.
೪ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. (ಸೆಲಾ)
5 Ani nan ciisa; nan rafas; waan Waaqayyo ol na qabuuf nan dammaqa.
೫ಯೆಹೋವನು ನನ್ನನ್ನು ಕಾಪಾಡುವವನು, ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು.
6 Saba kumaatama qixa hundaan kaʼee na marse ani hin sodaadhu.
೬ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು.
7 Yaa Waaqayyo kaʼi! Yaa Waaqa koo na baraari! Mangaagaa diinota kootii hundumaa rukuti; ilkaan hamootaa illee caccabsi.
೭ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.
8 Fayyinni kan Waaqayyoo ti. Eebbi kee saba kee irra haa jiraatu.
೮ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. (ಸೆಲಾ)