< اول تواریخ 28 >

و داود جميع رؤساي اسرائيل را از رؤساي اسباط و رؤساي فرقه هايي که پادشاه را خدمت مي کردند و رؤساي هزاره و رؤساي صده و ناظران همه اندوخته ها و اموال پادشاه و پسرانش را با خواجه سرايان و شجاعان و جميع مردان جنگي در اورشليم جمع کرد. ۱ 1
ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.
پس داود پادشاه برپا ايستاده، گفت: « اي برادرانم و اي قوم من! مرا بشنويد! من اراده داشتم خانه اي که آرامگاه تابوت عهد خداوند و پاي انداز پايهاي خداي ما باشد بنا نمايم، و براي بناي آن تدارک ديده بودم. ۲ 2
ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.
ليکن خدا مرا گفت: تو خانه اي به جهت اسم من بنا نخواهي نمود، زيرا مرد جنگي هستي و خون ريخته اي. ۳ 3
ಆಗ ದೇವರು ನನಗೆ, ‘ನೀನು ಮಹಾಯುದ್ಧಗಳನ್ನು ಮಾಡಿ ಬಹಳ ರಕ್ತವನ್ನು ಸುರಿಸಿದವನು, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬಾರದು’ ಎಂದು ಹೇಳಿದನು.
ليکن يهُوَه خداي اسرائيل مرا از تمامي خاندان پدرم برگزيده است که بر اسرائيل تا ابد پادشاه بشوم، زيرا که يهودا را براي رياست اختيار کرد و از خاندان يهودا خاندان پدر مرا و از فرزندان پدرم مرا پسند کرد تا مرا بر تمامي اسرائيل به پادشاهي نصب نمايد. ۴ 4
ಇಸ್ರಾಯೇಲರ ದೇವರಾದ ಯೆಹೋವನು ತನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲರ ಅರಸನಾಗುವುದಕ್ಕೆ ಆರಿಸಿಕೊಂಡನು. ಆತನು ಯೆಹೂದ ಕುಲವು ರಾಜಕುಲವಾಗಬೇಕೆಂದು ನೇಮಿಸಿ, ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದನು.
و از جميع پسران من (زيرا خداوند پسران بسيار به من داده است)، پسرم سليمان را برگزيده است تا بر کرسي سلطنت خداوند بر اسرائيل بنشيند. ۵ 5
ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.
و به من گفت: پسر تو سليمان، او است که خانه مرا و صحن هاي مرا بنا خواهد نمود، زيرا که او را برگزيده ام تا پسر من باشد و من پدر او خواهم بود. ۶ 6
ಆತನು ನನಗೆ, ‘ನಿನ್ನ ಮಗನಾದ ಸೊಲೊಮೋನನೇ ನನ್ನ ಆಲಯವನ್ನೂ, ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ. ನಾನು ಅವನಿಗೆ ತಂದೆಯಾಗಿರುವೆನು.
و اگر او به جهت بجا آوردن فرايض و احکام من مثل امروز ثابت بماند، آنگاه سلطنت او را تا به ابد استوار خواهم گردانيد. ۷ 7
ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಕೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು ಎಂದು ಹೇಳಿದ್ದಾನೆ.’
پس الآن در نظر تمامي اسرائيل که جماعت خداوند هستند و به سمع خداي ما متوجه شده، تمامي اوامر يهُوَه خداي خود را بطلبيد تا اين زمين نيکو را به تصرف آورده، آن را بعد از خودتان به پسران خويش تا به ابد به ارثيت واگذاريد. ۸ 8
ಆದುದರಿಂದ ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಸಭೆಯಾದ ಸಮಸ್ತ ಇಸ್ರಾಯೇಲರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವತ್ತಾಗಿರುವುದು.
« و تو اي پسر من سليمان خداي پدر خود را بشناس و او را به دل کامل و به ارادت تمام عبادت نما زيرا خداوند همه دلها را تفتيش مي نمايد و هر تصور فکرها را ادراک مي کند؛ و اگر او را طلب نمايي، او را خواهي يافت؛ اما اگر او را ترک کني، تو را تا به ابد دور خواهد انداخت. ۹ 9
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
حال با حذر باش زيرا خداوند تو را برگزيده است تا به خانه اي به جهت مَقدَسِ او بنا نمايي. پس قوي شده، مشغول باش.» ۱۰ 10
೧೦ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈರ್ಯದಿಂದ ಕೆಲಸ ಮಾಡು” ಎಂಬುದೇ.
و داود به پسر خود سليمان نمونه رواق و خانه ها و خزاين و بالاخانه ها و حُجره هاي اندروني آن و خانه کرسي رحمت، ۱۱ 11
೧೧ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕಟ್ಟಡಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನ ಮಂದಿರ ಇವುಗಳ ನಕ್ಷೆಯನ್ನು ಕೊಟ್ಟನು.
و نمونه هر آنچه را که از روح به او داده شده بود، براي صحن هاي خانه خداوند و براي همه حجره هاي گرداگردش و براي خزاين خانه خدا و خزاين موقوفات داد. ۱۲ 12
೧೨ಇವನು ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳು, ಭಂಡಾರಗಳು ಇವುಗಳ ವಿಷಯವಾಗಿಯೂ,
و براي فرقه هاي کاهنان و لاويان و براي تمامي کار خدمت خانه خداوند و براي همه اسباب خدمت خانه خداوند. ۱۳ 13
೧೩ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಆಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ, ಆರಾಧನೆಯ ಎಲ್ಲಾ ಸಾಮಗ್ರಿಗಳು
و از طلا به وزن براي همه آلات طلا به جهت هر نوع خدمتي و از نقره به وزن براي همه آلات نقره به جهت هر نوع خدمتي. ۱۴ 14
೧೪ಇವುಗಳ ವಿಷಯವಾಗಿ ಪವಿತ್ರಾತ್ಮನು ತನ್ನ ಮನಸ್ಸಿನಲ್ಲಿ ಕೊಟ್ಟಿದ್ದ ಯೋಜನೆಗಳನ್ನು ವಿವರಿಸಿದನು.
و طلا را به وزن به جهت شمعدانهاي طلا و چراغهاي آنها به جهت هر شمعدان و چراغهايش، آن را به وزن داد و براي شمعدانهاي نقره نيز نقره را به وزن به جهت هر چراغدان موافق کار هر شمعدان و چراغهاي آن. ۱۵ 15
೧೫ಇದಲ್ಲದೆ ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗವಾಗಬೇಕಾದ ಎಲ್ಲಾ ಸಾಮಾನುಗಳ ಬೆಳ್ಳಿ ಬಂಗಾರದ ತೂಕ, ಅಂದರೆ ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,
و طلا را به وزن به جهت ميزهاي نان تَقدِمه براي هر ميز عليحده و نقره را براي ميزهاي نقره. ۱۶ 16
೧೬ಮೀಸಲು ರೊಟ್ಟಿಗಳನ್ನಿಡುವ ಬಟ್ಟಲುಗಳು ಹಾಗೂ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ,
و زر خالص را براي چنگالها و کاسها و پياله ها و به جهت طاسهاي طلا موافق وزن هر طاس و به جهت طاسهاي نقره موافق وزن هر طاس. ۱۷ 17
೧೭ಚೊಕ್ಕ ಬಂಗಾರದ ಮುಳ್ಳು ಬೋಗುಣಿ, ಹೂಜಿಗಳ ಮತ್ತು ಬೆಳ್ಳಿ ಬಂಗಾರದ ಆಯಾ ಪಾತ್ರೆಗಳ ತೂಕ,
و طلاي مصفّي را به وزن به جهت مذبح بخور و طلا را به جهت نمونه مرکب کروبيان که بالهاي خود را پهن کرده، تابوت عهد خداوند را مي پوشانيدند. ۱۸ 18
೧೮ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕ ಬಂಗಾರದ ತೂಕ ಎಷ್ಟೆಷ್ಟಾಗಿರಬೇಕೆಂಬುದನ್ನು ವಿವರಿಸಿ, ರೆಕ್ಕೆಗಳನ್ನು ಹರಡಿಕೊಂಡು ಯೆಹೋವನ ಒಡಂಬಡಿಕೆ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು.
(و داود گفت): «خداوند اين همه را يعني تمامي کارهاي اين نمونه را از نوشته دست خود که بر من بود به من فهمانيد.» ۱۹ 19
೧೯ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು.
و داود به پسر خود سليمان گفت: « قوي و دلير باش و مشغول شو و ترسان و هراسان مباش، زيرا يهُوَه خدا که خداي من مي باشد، با تو است و تا همه کار خدمت خانه خداوند تمام نشود، تو را وا نخواهد گذاشت و تو را ترک نخواهد نمود. ۲۰ 20
೨೦ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.
اينک فرقه هاي کاهنان و لاويان براي تمام خدمت خانه خدا (حاضرند) و براي هر گونه عمل همه کسان دلگرم که براي هر صنعتي مهارت دارند، با تو هستند و سروران و تمامي قوم مطيع کامل اوامر تو مي باشند.» ۲۱ 21
೨೧ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ದೇವಾಲಯಕ್ಕೆ ಸಂಬಂಧಪಟ್ಟ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನು ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸು ಉಳ್ಳವರು ನಿನ್ನ ಹತ್ತಿರ ಬೆಂಬಲವಾಗಿ ಇರುತ್ತಾರೆ. ಅಧಿಪತಿಗಳೂ, ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ಒಳಗಾಗುವರು” ಎಂದು ಹೇಳಿದನು.

< اول تواریخ 28 >