< خروج 11 >
و خداوند به موسی گفت: «یک بلای دیگر بر فرعون و بر مصر میآورم، وبعد از آن شما را از اینجا رهایی خواهد داد، وچون شما را رها کند، البته شما را بالکلیه از اینجاخواهد راند. | ۱ 1 |
೧ಯೆಹೋವನು ಮೋಶೆಗೆ, “ಫರೋಹನಿಗೂ ಮತ್ತು ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆ ಕೊಡುವನು. ಮಾತ್ರವಲ್ಲದೆ ನಿಮ್ಮೆಲ್ಲರನ್ನು ಬಲವಂತದಿಂದ ಕಳುಹಿಸಿ ಬಿಡುವನು.
اکنون به گوش قوم بگو که هر مرداز همسایه خود، و هر زن از همسایهاش آلات نقره و آلات طلا بخواهند.» | ۲ 2 |
೨ಆದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು” ಎಂದನು.
و خداوند قوم را درنظر مصریان محترم ساخت. و شخص موسی نیزدر زمین مصر، در نظر بندگان فرعون و در نظرقوم، بسیار بزرگ بود. | ۳ 3 |
೩ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು.
و موسی گفت: «خداوندچنین میگوید: قریب به نصف شب در میان مصربیرون خواهم آمد. | ۴ 4 |
೪ಆಗ ಮೋಶೆ ಫರೋಹನಿಗೆ, “ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು.
و هر نخست زادهای که در زمین مصر باشد، از نخست زاده فرعون که برتختش نشسته است، تا نخست زاده کنیزی که درپشت دستاس باشد، و همه نخست زادگان بهایم خواهند مرد. | ۵ 5 |
೫ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು.
و نعره عظیمی در تمامی زمین مصر خواهد بود که مثل آن نشده، و مانند آن دیگر نخواهد شد. | ۶ 6 |
೬ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವುದು, ಅಂಥ ಗೋಳಾಟವು ಈವರೆಗೆ ದೇಶದಲ್ಲಿ ಎಂದೂ ಉಂಟಾಗಿರಲಿಲ್ಲ, ಮುಂದೆಯೂ ಉಂಟಾಗುವುದಿಲ್ಲ.
اما بر جمیع بنیاسرائیل سگی زبان خود را تیز نکند، نه بر انسان و نه بربهایم، تا بدانید که خداوند در میان مصریان واسرائیلیان فرقی گذارده است. | ۷ 7 |
೭ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’
و این همه بندگان تو به نزد من فرود آمده، و مرا تعظیم کرده، خواهند گفت: تو و تمامی قوم که تابع تو باشند، بیرون روید! و بعد از آن بیرون خواهم رفت.» | ۸ 8 |
೮ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.
و خداوند به موسی گفت: «فرعون به شماگوش نخواهد گرفت، تا آیات من در زمین مصرزیاد شود.» | ۹ 9 |
೯ಯೆಹೋವನು ಮೋಶೆಗೆ, “ಐಗುಪ್ತ ದೇಶದಲ್ಲಿ ನನ್ನ ಮಹತ್ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ನಡೆಯಬೇಕಾಗಿರುವುದರಿಂದ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ” ಎಂದು ಹೇಳಿದನು.
و موسی و هارون جمیع این آیات را به حضور فرعون ظاهر ساختند. اما خداوند دل فرعون را سخت گردانید، و بنیاسرائیل را از زمین خود رهایی نداد. | ۱۰ 10 |
೧೦ಮೋಶೆ ಮತ್ತು ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು.