< خروج 20 >
و خدا تکلم فرمود و همه این کلمات را بگفت: | ۱ 1 |
೧ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು:
«من هستم یهوه، خدای تو، که تو را از زمین مصر و از خانه غلامی بیرون آوردم. | ۲ 2 |
೨“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’
تو را خدایان دیگر غیر از من نباشد. | ۳ 3 |
೩ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು.
صورتی تراشیده و هیچ تمثالی از آنچه بالا درآسمان است، و از آنچه پایین در زمین است، و ازآنچه در آب زیر زمین است، برای خود مساز. | ۴ 4 |
೪“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
نزد آنها سجده مکن، و آنها را عبادت منما، زیرامن که یهوه، خدای تو میباشم، خدای غیورهستم، که انتقام گناه پدران را از پسران تا پشت سوم و چهارم از آنانی که مرا دشمن دارندمی گیرم. | ۵ 5 |
೫ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.
و تا هزار پشت بر آنانی که مرا دوست دارند و احکام مرا نگاه دارند، رحمت میکنم. | ۶ 6 |
೬ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.
نام یهوه، خدای خود را به باطل مبر، زیراخداوند کسی را که اسم او را به باطل برد، بیگناه نخواهد شمرد. | ۷ 7 |
೭ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
روز سبت را یاد کن تا آن راتقدیس نمایی. | ۸ 8 |
೮“ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.
شش روز مشغول باش و همه کارهای خود را بجا آور. | ۹ 9 |
೯ಆರು ದಿನಗಳು ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಿಕೊಳ್ಳಬೇಕು.
اما روز هفتمین، سبت یهوه، خدای توست. در آن هیچ کار مکن، تو و پسرت و دخترت و غلامت و کنیزت وبهیمه ات و مهمان تو که درون دروازه های توباشد. | ۱۰ 10 |
೧೦ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.
زیرا که در شش روز، خداوند آسمان وزمین و دریا و آنچه را که در آنهاست بساخت، ودر روز هفتم آرام فرمود. از این سبب خداوند روزهفتم را مبارک خوانده، آن را تقدیس نمود. | ۱۱ 11 |
೧೧ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
پدر و مادر خود را احترام نما، تا روزهای تو درزمینی که یهوه خدایت به تو میبخشد، درازشود. | ۱۲ 12 |
೧೨“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
بر همسایه خود شهادت دروغ مده. | ۱۶ 16 |
೧೬“ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.
به خانه همسایه خود طمع مورز، و به زن همسایه ات وغلامش و کنیزش و گاوش و الاغش و به هیچچیزی که از آن همسایه تو باشد، طمع مکن.» | ۱۷ 17 |
೧೭“ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”
و جمیع قوم رعدها و زبانه های آتش وصدای کرنا و کوه را که پر از دود بود دیدند، وچون قوم این را بدیدند لرزیدند، و از دوربایستادند. | ۱۸ 18 |
೧೮ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.
و به موسی گفتند: «تو به ما سخن بگو و خواهیم شنید، اما خدا به ما نگوید، مبادابمیریم.» | ۱۹ 19 |
೧೯ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ” ಎಂದು ಹೇಳಿದರು.
موسی به قوم گفت: «مترسید زیراخدا برای امتحان شما آمده است، تا ترس اوپیش روی شما باشد و گناه نکنید.» | ۲۰ 20 |
೨೦ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.
پس قوم ازدور ایستادند و موسی به ظلمت غلیظ که خدا درآن بود، نزدیک آمد. | ۲۱ 21 |
೨೧ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು.
و خداوند به موسی گفت: «به بنیاسرائیل چنین بگو: شما دیدید که ازآسمان به شما سخن گفتم: | ۲۲ 22 |
೨೨ಯೆಹೋವನು ಮೋಶೆಗೆ ಹೀಗೆಂದನು, “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
با من خدایان نقره مسازید و خدایان طلا برای خود مسازید. | ۲۳ 23 |
೨೩ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.
مذبحی از خاک برای من بساز، و قربانی های سوختنی خود و هدایای سلامتی خود را از گله ورمه خویش بر آن بگذران، در هر جایی که یادگاری برای نام خود سازم، نزد تو خواهم آمد، و تو را برکت خواهم داد. | ۲۴ 24 |
೨೪ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
و اگر مذبحی ازسنگ برای من سازی، آن را از سنگهای تراشیده بنا مکن، زیرا اگر افزار خود را بر آن بلند کردی، آن را نجس خواهی ساخت. | ۲۵ 25 |
೨೫ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು.
و بر مذبح من ازپلهها بالا مرو، مبادا عورت تو بر آن مکشوف شود.» | ۲۶ 26 |
೨೬ಅದಲ್ಲದೆ ನನ್ನ ಯಜ್ಞವೇದಿಯನ್ನು ನಿಮ್ಮ ನಗ್ನತೆಯು ಕಾಣುವ ಹಾಗೆ ಮೆಟ್ಟಲುಗಳನ್ನು ಬಳಸಿ ಅದನ್ನು ಹತ್ತಬಾರದು’” ಎಂದು ಆಜ್ಞಾಪಿಸಿದನು.