< حزقیال 29 >
و در روز دوازدهم ماه دهم از سال دهم کلام خداوند بر من نازل شده، گفت: | ۱ 1 |
ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹನ್ನೆರಡನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,
«ای پسر انسان نظر خود را به طرف فرعون پادشاه مصر بدار و به ضد او و تمامی مصر نبوت نما. | ۲ 2 |
“ನರಪುತ್ರನೇ, ನೀನು ಈಜಿಪ್ಟಿನ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನಿಗೂ ಸಮಸ್ತ ಈಜಿಪ್ಟಿಗೂ ವಿರೋಧವಾಗಿ ಪ್ರವಾದಿಸು.
و متکلم شده، بگو: خداوند یهوه چنین میفرماید: اینکای فرعون پادشاه مصر من به ضد تو هستم. ای اژدهای بزرگ که در میان نهرهایت خوابیدهای و میگویی نهر من از آن من است و من آن را به جهت خود ساختهام! | ۳ 3 |
ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
لهذاقلابها در چانه ات میگذارم و ماهیان نهرهایت رابه فلسهایت خواهم چسپانید و تو را از میان نهرهایت بیرون خواهم کشید و تمامی ماهیان نهرهایت به فلسهای تو خواهند چسپید. | ۴ 4 |
ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಯೊಳಗಿಂದ ಮೇಲೆ ಎಳೆದು ನಿನ್ನ ಮೀನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು.
و تو رابا تمامی ماهیان نهرهایت در بیابان پراکنده خواهم ساخت و به روی صحرا افتاده، بار دیگرتو را جمع نخواهند کرد و فراهم نخواهندآورد. و تو را خوراک حیوانات زمین و مرغان هواخواهم ساخت. | ۵ 5 |
ನಿನ್ನನ್ನೂ ನಿನ್ನ ನದಿಗಳ ಮೀನುಗಳನ್ನೂ ಅರಣ್ಯದಲ್ಲಿ ಹಾಕುವೆನು. ನೀನು ಬಯಲುಗಳ ಮೇಲೆ ಬಿದ್ದಿರುವೆ; ನಿನ್ನನ್ನು ಯಾರೂ ಹೊರುವುದೂ ಇಲ್ಲ, ಸೇರಿಸುವುದೂ ಇಲ್ಲ. ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು. ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರವನ್ನಾಗಿ ಕೊಟ್ಟಿದ್ದೇನೆ.
و جمیع ساکنان مصر خواهنددانست که من یهوه هستم چونکه ایشان برای خاندان اسرائیل عصای نئین بودند. | ۶ 6 |
ಆಗ ಎಲ್ಲಾ ಈಜಿಪ್ಟಿನ ನಿವಾಸಿಗಳು ನಾನೇ ಯೆಹೋವನೆಂದು ತಿಳಿಯುವರು. “‘ಅವರು ಇಸ್ರಾಯೇಲರ ಮನೆತನದವರಿಗೆ ದಂಟಿನ ಊರುಗೋಲಾಗಿದ್ದರು.
چون دست تو را گرفتند، خرد شدی. و کتفهای جمیع ایشان را چاک زدی. و چون بر تو تکیه نمودند، شکسته شدی. و کمرهای جمیع ایشان را لرزان گردانیدی.» | ۷ 7 |
ಇಸ್ರಾಯೇಲರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದೆ; ಅವರು ನಿನ್ನನ್ನು ಆದರಿಸಿಕೊಂಡಾಗ ನೀನು ಮುರಿದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
بنابراین خداوند یهوه چنین میفرماید: «اینک من بر تو شمشیری آورده، انسان و بهایم رااز تو منقطع خواهم ساخت. | ۸ 8 |
“‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾನೆ: ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.
و زمین مصر ویران و خراب خواهد شد. پس خواهند دانست که من یهوه هستم، چونکه میگفت: نهر از آن من است ومن آن را ساختهام. | ۹ 9 |
ನೀನು, “ಆ ನೈಲ್ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು,” ಹೇಳಿಕೊಂಡದ್ದರಿಂದ, “‘ಈಜಿಪ್ಟ್ ದೇಶವು ಹಾಳು ಮರುಭೂಮಿಯಾಗುವುದು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.
بنابراین اینک من به ضد توو به ضد نهرهایت هستم و زمین مصر را از مجدل تا اسوان و تا حدود حبشستان بالکل خراب وویران خواهم ساخت. | ۱۰ 10 |
ಆದ್ದರಿಂದ ಇಗೋ, ನಾನು ನಿನಗೂ ನಿನ್ನ ನದಿಗಳಿಗೂ ವಿರುದ್ಧವಾಗಿದ್ದೇನೆ. ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.
که پای انسان از آن عبور ننماید و پای حیوان از آن گذر نکند و مدت چهل سال مسکون نشود. | ۱۱ 11 |
ಯಾವ ಮನುಷ್ಯನ ಪಾದವಾದರೂ ಅದರಲ್ಲಿ ಹಾದು ಹೋಗುವುದಿಲ್ಲ. ಮೃಗಗಳ ಪಾದವೂ ಅದರಲ್ಲಿ ಹಾದು ಹೋಗುವುದಿಲ್ಲ ಅಥವಾ ನಲವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವುದಿಲ್ಲ.
و زمین مصر را درمیان زمینهای ویران ویران خواهم ساخت وشهرهایش در میان شهرهای مخروب مدت چهل سال خراب خواهد ماند. و مصریان را در میان امتها پراکنده و در میان کشورها متفرق خواهم ساخت.» | ۱۲ 12 |
ನಾನು ಈಜಿಪ್ಟ್ ದೇಶವನ್ನು ಹಾಳುಬಿದ್ದಿರುವ ದೇಶಗಳಲ್ಲಿ ಸೇರಿಸುವೆನು. ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ನಡುವೆ ನಲವತ್ತು ವರ್ಷಗಳು ಹಾಳಾಗಿರುವುವು. ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದುರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.
زیرا خداوند یهوه چنین میفرماید: «بعد ازانقضای چهل سال مصریان را از قوم هایی که درمیان آنها پراکنده شوند، جمع خواهم نمود. | ۱۳ 13 |
“‘ಆದರೂ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಲವತ್ತು ವರ್ಷಗಳ ಕೊನೆಯಲ್ಲಿ ನಾನು ಈಜಿಪ್ಟಿನವರನ್ನು ಚದುರಿರುವ ರಾಷ್ಟ್ರಗಳಿಂದ ಒಟ್ಟುಗೂಡಿಸುವೆನು.
واسیران مصر را باز آورده، ایشان را به زمین فتروس یعنی به زمین مولد ایشان راجع خواهم گردانید و در آنجا مملکت پست خواهند بود. | ۱۴ 14 |
ನಾನು ಈಜಿಪ್ಟಿನವರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸ್ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡುವೆನು. ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.
و آن پستترین ممالک خواهد بود. و بار دیگربر طوایف برتری نخواهد نمود. و من ایشان راقلیل خواهم ساخت تا برامتها حکمرانی ننمایند. | ۱۵ 15 |
ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿಸಿಕೊಳ್ಳುವುದು. ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆ ಎತ್ತದು. ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗದಂತೆ ಅದನ್ನು ಕ್ಷೀಣಗತಿಗೆ ತರುವೆನು.
و آن بار دیگر برای خاندان اسرائیل محل اعتماد نخواهد بود تا بسوی ایشان متوجه شده، گناه را به یاد آورند. پس خواهند دانست که من خداوند یهوه هستم.» | ۱۶ 16 |
ಇನ್ನು ಅದು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಇವರು ಅವರ ಕಡೆಗೆ ನೋಡಿದಾಗ ಪಾಪವನ್ನು ಜ್ಞಾಪಕಕ್ಕೆ ತರುವರು. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’”
و در روز اول ماه اول از سال بیست و هفتم کلام خداوند بر من نازل شده، گفت: | ۱۷ 17 |
ಇಪ್ಪತ್ತೇಳನೆಯ ವರ್ಷದಲ್ಲಿ, ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,
«ای پسرانسان نبوکدرصر پادشاه بابل از لشکر خود به ضدصور خدمت عظیمی گرفت که سرهای همه بیمو گردید و دوشهای همه پوست کنده شد. لیکن از صور به جهت خدمتی که به ضد آن نموده بود، خودش و لشکرش هیچ مزد نیافتند.» | ۱۸ 18 |
“ಮನುಷ್ಯಪುತ್ರನೇ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರನಿಂದ ಪ್ರತಿಫಲವೇನೂ ದೊರೆಯಲಿಲ್ಲ.
لهذا خداوند یهوه چنین میفرماید: «اینک من زمین مصر را به نبوکدرصر پادشاه بابل خواهم بخشید. و جمعیت آن را گرفتار کرده، غنیمتش رابه یغما و اموالش را به تاراج خواهد برد تا اجرت لشکرش بشود. | ۱۹ 19 |
ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಅದರ ಕೊಳ್ಳೆಯನ್ನೂ ಅದರ ಸುಲಿಗೆಯನ್ನೂ ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವುದು.
و خداوند یهوه میگوید: زمین مصر را به جهت خدمتی که کرده است، اجرت اوخواهم داد چونکه این کار را برای من کردهاند. | ۲۰ 20 |
ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಈಜಿಪ್ಟ್ ದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಸೇವೆಮಾಡಿದ್ದಾರೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
و در آن روز شاخی برای خاندان اسرائیل خواهم رویانید. و دهان تو را در میان ایشان خواهم گشود، پس خواهند دانست که من یهوه هستم.» | ۲۱ 21 |
“ಆ ದಿನದಲ್ಲಿ ನಾನು ಇಸ್ರಾಯೇಲರ ಮನೆತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.”